ಗುರುಗ್ರಾಮ್‌ನ ಖಾಸಗಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ, ವೆಂಟಿಲೇಟರ್‌ನಲ್ಲಿದ್ದ 46 ವರ್ಷದ ಗಗನಸಖಿಯೊಬ್ಬರ ಮೇಲೆ ಆಸ್ಪತ್ರೆಯ ಸಿಬ್ಬಂದಿ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಕೇಳಿಬಂದಿದೆ. ಈ ಘಟನೆ ಏಪ್ರಿಲ್ 6ರಂದು ನಡೆದಿದ್ದು, ಮಹಿಳೆ ಏಪ್ರಿಲ್ 13ರಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ನಂತರ ತನ್ನ ಪತಿಗೆ ಈ ಬಗ್ಗೆ ಮಾಹಿತಿ ನೀಡಿದ್ದಾಳೆ.
ಇದನ್ನೂ ಓದಿ:ಶಿಶು ಕಳ್ಳಸಾಗಣೆ ಪ್ರಕರಣದಲ್ಲಿ ಭಾಗಿಯಾಗುವ ಆಸ್ಪತ್ರೆಗಳ ಪರವಾನಗಿ ತಕ್ಷಣ ಅಮಾನತುಗೊಳಿಸುವಂತೆ ಸುಪ್ರೀಂ ಕೋರ್ಟ್ ಆದೇಶ
ಪತ್ನಿಯಿಂದ ಮಾಹಿತಿ ಪಡೆದ ಪತಿ ಕೂಡಲೇ ಪೊಲೀಸರಿಗೆ ದೂರು ನೀಡಿದ್ದು, ಸದರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಆರೋಪದ ಗಂಭೀರತೆಯನ್ನು ಗಮನಿಸಿ, ವಿಶೇಷ ತನಿಖಾ ತಂಡವನ್ನು ರಚಿಸಿದ್ದಾರೆ. ಈ ತಂಡವು ಆಸ್ಪತ್ರೆಯ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದು, ಸಂಬಂಧಿತ ಸಿಬ್ಬಂದಿಯನ್ನು ವಿಚಾರಣೆ ನಡೆಸುತ್ತಿದೆ .
ಮಹಿಳೆ ನೀಡಿದ ದೂರಿನ ಪ್ರಕಾರ, ಆಕೆ ತನ್ನ ಕಂಪನಿಯ ತರಬೇತಿಗಾಗಿ ಗುರುಗ್ರಾಮ್‌ಗೆ ಬಂದಿದ್ದು, ಹೋಟೆಲ್‌ನ ಈಜುಕುಳದಲ್ಲಿ ಈಜಿದ ನಂತರ ಆರೋಗ್ಯದಲ್ಲಿ ಏರುಪೇರು ಕಂಡುಬಂದಿತ್ತು. ಆಕೆಯನ್ನು ತಕ್ಷಣವೇ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿಂದ, ಹೆಚ್ಚಿನ ಚಿಕಿತ್ಸೆಗಾಗಿ ಬೇರೊಂದು ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು.
ಅಲ್ಲಿನ ಐಸಿಯುನಲ್ಲಿ ವೆಂಟಿಲೇಟರ್‌ನಲ್ಲಿದ್ದಾಗ, ಆಕೆಯ ಪ್ರಜ್ಞೆ ಸಡಿಲವಾಗಿದ್ದ ಸಂದರ್ಭದಲ್ಲಿ, ಆಸ್ಪತ್ರೆಯ ಕೆಲವು ಸಿಬ್ಬಂದಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ. ಆ ಸಮಯದಲ್ಲಿ ಆಕೆಯ ಬಳಿ ಇಬ್ಬರು ನರ್ಸ್‌ಗಳೂ ಇದ್ದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಪೊಲೀಸರು ಪ್ರಕರಣವನ್ನು ಎಲ್ಲಾ ಕೋಣೆಯಿಂದ ಪರಿಶೀಲಿಸುತ್ತಿದ್ದು, ಸಿಸಿಟಿವಿ ದೃಶ್ಯಾವಳಿಗಳೊಂದಿಗೆ ಆಸ್ಪತ್ರೆಯ ಡ್ಯೂಟಿ ಚಾರ್ಟ್‌ಗಳನ್ನು ಕೂಡ ಪರಿಶೀಲಿಸುತ್ತಿದ್ದಾರೆ. ಆರೋಪಿತರನ್ನು ಶೀಘ್ರದಲ್ಲೇ ಪತ್ತೆಹಚ್ಚಿ ಬಂಧಿಸುವುದಾಗಿ ಪೊಲೀಸರು ತಿಳಿಸಿದ್ದಾರೆ .