ಏರ್ ಇಂಡಿಯಾ ವಿಮಾನ ಪತನ; ಮೃತರ ಗುರುತು ಪತ್ತೆಗಾಗಿ ಕುಟುಂಬಸ್ಥರ ಡಿಎನ್‌ಎ ಸಂಗ್ರಹ

ಹ್ಮದಾಬಾದ್: ಜೂನ್‌ 12 ಗುರುವಾರದಂದು ನಡೆದ ಏರ್ ಇಂಡಿಯಾ ವಿಮಾನ ಅಪಘಾತದ ದುರಂತದಲ್ಲಿ ಮೃತರ ಗುರುತು ಪತ್ತೆಗಾಗಿ ಬಿಜೆ ವೈದ್ಯಕೀಯ ಕಾಲೇಜಿನಲ್ಲಿ ಮೃತರ ಕುಟುಂಬಸ್ಥರಿಂದ ಡಿಎನ್‌ಎ ಮಾದರಿ ಸಂಗ್ರಹಿಸಲಾಗುತ್ತಿದೆ.

ಮೃತದೇಹವನ್ನು ಡಿಎನ್‌ಎ ಪರೀಕ್ಷೆ ಬಳಿಕ ಕುಟುಂಬಕ್ಕೆ ಹಸ್ತಾಂತರಿಸಲಾಗುವುದು ಎಂದು ಅಹಮದಾಬಾದ್ ಸಿವಿಲ್ ಆಸ್ಪತ್ರೆಯ ಆಡಳಿತಾಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ಗೋಲಿಬಾರ್ ನಲ್ಲಿ ಹುತಾತ್ಮರಾದ ರೈತರಿಗೆ ಡಿವೈಎಫ್ಐ, ಎಸ್ಎಫ್ಐ ನಿಂದ ಗೌರವ ಸ್ಮರಣೆ

ಬಿಜೆ ವೈದ್ಯಕೀಯ ಕಾಲೇಜಿನ ನೆಲ ಮಹಡಿಯಲ್ಲಿರುವ ಪಿಎಸ್‌ಎಂ ವಿಭಾಗದ ಬಳಿ ಸ್ಥಾಪಿಸಲಾದ ಪರೀಕ್ಷಾ ಕೇಂದ್ರದಲ್ಲಿ ಡಿಎನ್‌ಎ ಮಾದರಿಗಳನ್ನು ಸಂಗ್ರಹಿಸುವ ಪ್ರಕ್ರಿಯೆಯು ನಡೆಯುತ್ತಿದೆ.

ಬಳಿಕ ಅದನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗುತ್ತದೆ. ಸಂಪೂರ್ಣ ಡಿಎನ್‌ಎ ಹೊಂದಾಣಿಕೆ ಪ್ರಕ್ರಿಯೆಯು ಕನಿಷ್ಠ ಮೂರು ದಿನಗಳು ಅಥವಾ ಅದಕ್ಕಿಂತ ಹೆಚ್ಚು ದಿನಗಳು ತೆಗೆದುಕೊಳ್ಳುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.

ಇದನ್ನೂ ನೋಡಿ: ಪರಿಸರ ರಕ್ಷಣೆ ನಮ್ಮೆಲ್ಲರ ಹೊಣೆ | ವಿಶ್ಲೇಷಣೆ – ಅಹಮದ್ ಹಗರೆ Janashakthi Media

Donate Janashakthi Media

Leave a Reply

Your email address will not be published. Required fields are marked *