ಏರ್ ಶೋ-2025” ಪ್ರಯುಕ್ತ ಯಲಹಂಕ ವಯುಸೇನಾ ನೆಲೆಯ ಸುತ್ತಮುತ್ತ ನಿರ್ಮಾಣ ಹಂತದಲ್ಲಿರುವ ಕಟ್ಟಡಗಳ ಮೇಲೆ ಕ್ರೇನ್ ಎತ್ತರವನ್ನು ತಗ್ಗಿಸಲು ಸೂಚನೆ

ಬೆಂಗಳೂರು:  ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಯಲಹಂಕ ವಲಯ ವ್ಯಾಪ್ತಿಯ ವಾಯುಸೇನಾ ನೆಲೆ (Air Force Station) ಯಲ್ಲಿ ಇದೇ ಫೆಬ್ರವರಿ 1 ರಿಂದ 14 ರವರೆಗೆ ಅಂತರಾಷ್ಟ್ರೀಯ ಮಟ್ಟದ ‘ಏರ್ ಇಂಡಿಯಾ-2025(AERO INDIA) ನಡೆಯಲಿದೆ.  ವಯುಸೇನಾ 

ಈ ಹಿನ್ನಲೆಯಲ್ಲಿ ಯಲಹಂಕ ವಯುಸೇನಾ ನೆಲೆಯ ಸುತ್ತಮುತ್ತ ನಿರ್ಮಾಣ ಹಂತದಲ್ಲಿರುವ ಕಟ್ಟಡಗಳ ಮೇಲೆ ಕ್ರೇನ್ ಎತ್ತರವನ್ನು ತಗ್ಗಿಸುವಂತೆ ಸೂಚಿಸಲಾಗಿದೆ.

ಇದನ್ನೂ ಓದಿ : ಅಬಕಾರಿ ಇಲಾಖೆಯಲ್ಲಿ ವರ್ಗಾವಣೆಗೆ ಹೊಸ ನಿಯಮ: ಸಚಿವ ಆರ್ ಬಿ ತಿಮ್ಮಾಪೂರ

ಏರ್ ಶೋ-2025 ನಡೆಯುತ್ತಿರುವ ಪ್ರಯುಕ್ತ ಯಲಹಂಕ ವಾಯುಸೇನಾ ನೆಲೆಯಿಂದ 10.00 ಕಿ.ಮೀ ಅಂತರದಲ್ಲಿ ನಿರ್ಮಾಣ ಹಂತದಲ್ಲಿರುವ ಬೃಹತ್ ಕಟ್ಟಡಗಳಲ್ಲಿ ಉಪಯೋಗಿಸುವ ಕ್ರೇನ್‌ಗಳ ಎತ್ತರವನ್ನು ದಿನಾಂಕ: 01.02.2025 ರಿಂದ 14.02.2025 ರವರೆಗೆ ತಗ್ಗಿಸಲು ಹಾಗೂ ಕ್ರೇನ್ ಚಟುವಟಿಕೆಯನ್ನು ಸ್ಥಗಿತಗೊಳಿಸಲು ಬಹುಮಹಡಿ ಕಟ್ಟಡಗಳ ಸಂಸ್ಥೆಗಳು/ಅಭಿವೃದ್ಧಿದಾರರಿಗೆ ಈ ಮೂಲಕ ತಿಳಿಯಪಡಿಸಿದೆ.

ಮುಂದುವರಿದು, ವಾಯುಸೇನಾ ನೆಲೆಯಿಂದ 10.00 ಕಿ.ಮೀ ಅಂತರದಲ್ಲಿ ನಿರ್ಮಾಣ ಹಂತದಲ್ಲಿರುವ ಎಲ್ಲಾ ಬೃಹತ್ ಕಟ್ಟಡಗಳು, ಮೇಲಿನ ನಿಯಮಗಳನ್ನು ಉಲ್ಲಂಘಿಸಿದಲ್ಲಿ ಬಿಬಿಎಂಪಿ ಕಾಯ್ದೆ 2020 ಮತ್ತು ಭಾರತೀಯ ಏರ್‌ಕ್ರಾಪ್ಟ್ 1937ರ ರೂಲ್ 91 ರೀತ್ಯಾ ಕಾನೂನು ಕ್ರಮ ಕೈಗೊಳ್ಳಲಾಗುವುದಾಗಿ ನಗರ ಯೋಜನೆ-ಉತ್ತರ ವಿಭಾಗದ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

ಇದನ್ನೂ ನೋಡಿ : ಕಂದಮ್ಮಗಳ ಮೇಲೆ ಲೈಂಗಿಕ ದೌರ್ಜನ್ಯ : ತಡೆಗಟ್ಟುವಲ್ಲಿ ಸಮಾಜವೂ ವಿಫಲ, ಸರ್ಕಾರವೂ ವಿಫಲ Janashakthi Media

Donate Janashakthi Media

Leave a Reply

Your email address will not be published. Required fields are marked *