ಬೆಂಗಳೂರು: ಫೆ.10 ರಿಂದ ನಗರದಲ್ಲಿ ಏರ್ ಶೋ ಆರಂಭವಾಗಲಿದ್ದು, ನೀವು ಕೂಡ ಹೋಗಬಹುದು. ಟಿಕೆಟ್ ದರ ಎಷ್ಟು..? ಬುಕ್ಕಿಂಗ್ ಹೇಗೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.
2025 ಫೆಬ್ರವರಿ 10ರಿಂದ ಫೆಬ್ರವರಿ 14ರ ವರೆಗೆ ಪ್ರತಿದಿನವೂ ಬೆಳಿಗ್ಗೆ 9ರಿಂದ ಸಂಜೆ 6ರವರೆಗೆ ಏರ್ ಶೋ ನಡೆಯಲಿದೆ. ಏರ್ ಶೋದಲ್ಲಿ ಬೆಳಿಗ್ಗೆಯಿಂದ ಸಂಜೆಯ ವರೆಗೆ ಸುತ್ತಾಡುವುದಕ್ಕೆ ಅವಕಾಶ ಇರಲಿದೆ. ಫೆಬ್ರವರಿ 13 ಹಾಗೂ 14ರಂದು ಸಾರ್ವಜನಿಕರಿಗೆ ಅವಕಾಶ ಇರಲಿದೆ. ಬೆಂಗಳೂರು
ಟಿಕೆಟ್ ದರ ಎಷ್ಟು..?
ಭಾರತೀಯರಿಗೆ 2,500 ರೂಪಾಯಿ ಇದ್ದರೆ, ವಿದೇಶಿಗರಿಗೆ ಯುಎಸ್ ಡಾಲರ್ 50 ಇರಲಿದೆ. ಎಡಿವಿಎ ಪಾಸ್: ಭಾರತೀಯರಿಗೆ 1,000 ರೂ | ವಿದೇಶಿಗರಿಗೆ ಯುಎಸ್ ಡಾಲರ್ 50 ಇರಲಿದೆ. ವ್ಯಾಪಾರ ಪಾಸ್: ಭಾರತೀಯರಿಗೆ 5,000 ಸಾವಿರ ಹಾಗೂ ವಿದೇಶಿಗರಿಗೆ ಯುಎಸ್ ಡಾಲರ್ 50 ಇರಲಿದೆ.
ಇದನ್ನೂ ಓದಿ: ಮಹಾರಾಷ್ಟ್ರ| ಶಿವಸೇನೆ ಠಾಕ್ರೆ ಪಕ್ಷ ತೊರೆದ 6 ಸಂಸದರು
ಟಿಕೆಟ್ ಬುಕ್ ಮಾಡೋದು ಹೇಗೆ..?
1) ನೀವು ಏರೋ ಇಂಡಿಯಾದ ಅಧಿಕೃತ ವೆಬ್ಸೈಟ್ http://ataeroindia.gov.in .ಗೆ ಭೇಟಿ ನೀಡಿ *
2) ವೆಬ್ಸೈಟ್ನ ಹೋಮ್ ಪೇಜ್ನಲ್ಲಿ ಕಾಣಿಸುವ ಸಂದರ್ಶಕರ ನೋಂದಣಿ ಎನ್ನುವ ಆಯ್ಕೆಯ ಮೇಲೆ ಕ್ಲಿಕ್ ಮಾಡಿ
3) ನಿಮಗೆ ಯಾವ ಮಾದರಿಯ ಪಾಸ್ ಬೇಕು ಎನ್ನುವ ಆಯ್ಕೆಯ ಮೇಲೆ ಕ್ಲಿಕ್ ಮಾಡಿ.
4) ನಿಮ್ಮ ಹೆಸರು ಹಾಗೂ ಮೊಬೈಲ್ ಸಂಖ್ಯೆ ಮತ್ತು ಅಗತ್ಯ ವಿವರಗಳನ್ನು ನಮೂದಿಸಿ.
5) ಟಿಕೆಟ್ ಮೊತ್ತವನ್ನು ಪಾವತಿ ಮಾಡಿ ಹಾಗೂ ಸಲ್ಲಿಸು ಎನ್ನುವ ಆಯ್ಕೆಯ ಮೇಲೆ ಕ್ಲಿಕ್ ಮಾಡಿ ಇದಾದ ಮೇಲೆ ನಿಮಗೆ ಏರೋ ಇಂಡಿಯಾ 2025ರ ಪಾಸ್ ಸಿಗಲಿದೆ. ಇನ್ನು ಹೆಚ್ಚಿನ ಮಾಹಿತಿ ಅಥವಾ ವಿವರಗಳಿಗೆ ಅಧಿಕೃತ ಏರೋ ಇಂಡಿಯಾ ವೆಬ್ಸೈಟ್ಗೆ ಭೇಟಿ ನೀಡಬಹುದಾಗಿದೆ.
ಇದನ್ನೂ ನೋಡಿ: ವಿಮಾನ ನಿಲ್ದಾಣಕ್ಕೆ ಭೂಮಿ ಕಳೆದುಕೊಂಡ ಸಂತ್ರಸ್ತ ರೈತರಿಂದ ಪ್ರತಿಭಟನೆ Janashakthi Media