ಬೆಂಗಳೂರು: ಮೊದಲು ಬೆಂಗಳೂರು ಜಿಲ್ಲೆಗೇ ಸೇರಿದ್ದ ರಾಮನಗರವನ್ನು ಪ್ರತ್ಯೇಕ ಜಿಲ್ಲೆಯನ್ನಾಗಿ ಮಾಡಲಾಗಿತ್ತು. ರಾಮನಗರ ಬದಲಿಗೆ ಬೆಂಗಳೂರು ದಕ್ಷಿಣ ಜಿಲ್ಲೆಯನ್ನಾಗಿ ಹೆಸರು ಬದಲಿಸುವಂತೆ ಕೋರಲಾಗಿದೆ. ಇದಕ್ಕೆ ಸಿಎಂ ಸಿದ್ದರಾಮಯ್ಯ ಕೂಡ ಸಹಮತ ವ್ಯಕ್ತಪಡಿಸಿದ್ದಾರೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಾಹಿತಿ ನೀಡಿದ್ದಾರೆ. ಒಳಗೆ
ಈ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಆಗಲಿದೆ. ಬಳಿಕ ಹೆಸರು ಬದಲಾವಣೆ ಆಗಲಿದೆ. ಈಗಿರುವ ರಾಮನಗರವೇ ಬೆಂಗಳೂರು ದಕ್ಷಿಣ ಜಿಲ್ಲೆಗೆ ಹೆಡ್ ಕ್ವಾಟರ್ ಆಗಿರಲಿದೆ. ರಾಮನಗರ ಮಾಗಡಿ, ಕನಕಪುರ, ಚನ್ನಪಟ್ಟಣ, ಹಾರೋಹಳ್ಳಿ ತಾಲ್ಲೂಕುಗಳು ಬೆಂಗಳೂರು ದಕ್ಷಿಣ ಜಿಲ್ಲೆಯ ವ್ಯಾಪ್ತಿಗೆ ಸೇರಲಿವೆ. ಈ ವಿಚಾರವನ್ನ ಕ್ಯಾಬಿನೆಟ್‌ನಲ್ಲಿಟ್ಟು ಚರ್ಚೆ ಮಾಡುತ್ತೇವೆ ಎಂದು ಅವರು ತಿಳಿಸಿದರು. ಒಳಗೆ
ರಾಮನಗರದಲ್ಲಿ ವಿಮಾನ ವಿಲ್ದಾಣ ನಿರ್ಮಾಣದ ವಿಚಾರವಾಗಿ ವರದಿ ಸಿದ್ಧ ಮಾಡಬೇಕು. 2030 ರ ಒಳಗೆ ರಾಮನಗರದಲ್ಲಿ ಏರ್‌ಫೋರ್ಟ್ ರೆಡಿ ಆಗಲಿದೆ. ನನ್ನ ನೇತೃತ್ವದಲ್ಲಿ ಸಿಎಂ ಭೇಟಿ ಮಾಡಿದ್ದೆವು. ನಾವೆಲ್ಲಾ ಬೆಂಗಳೂರಿನವರೇ ಎಂದು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.
ಇದನ್ನೂ ಓದಿ: ಬೆಂಗಳೂರು| ಬಿಎಂಟಿಸಿ ಬಸ್‌ಗೆ ಬೆಂಕಿ
‘ಬೆಂಗಳೂರಿನ ಹೆಸರು ಮಾತ್ರ ಬೇಕು’
“ರಾಮನಗರ ಕನಕಪುರ ಚನ್ನಪಟ್ಟಣ ಮಹಾಗಡಿ ಬೆಂಗಳೂರಿಗೆ ಅವಿನಾಭಾವ ಸಂಬಂಧವಿದೆ. ಪುರಾತನ ಸಂಬಂಧದ ಹೆಸರು ಉಳಿಸಿಕೊಳ್ಳಬೇಕು ಅನ್ನೋದು ಅಷ್ಟೆ. ನಮಗೆ ಇನ್ನೇನು ಇಲ್ಲಾ,ರಾಮನಗರವೇ ಕೇಂದ್ರ, ರಾಮನಗರವನ್ನ ಬೆಂಗಳೂರಿಗೆ ಸೇರಿಸಲ್ಲ. ಅದು ಪ್ರತ್ಯೇಕವಾಗಿ ಇರುತ್ತೆ, ನಮಗೆ ಬೆಂಗಳೂರು ದಕ್ಷಿಣ ಜಿಲ್ಲೆ ಎಂಬ ಹೆಸರು ಬೇಕು” ಎಂದು ಇದೇ ವೇಳೆ ವಿಧಾನಸೌಧದಲ್ಲಿ ಸಿ.ಎಂ.ಲಿಂಗಪ್ಪ ಹೇಳಿಕೆ ನೀಡಿದ್ದಾರೆ.
2033ರವರೆಗೂ ಕಾಯುವ ಅವಶ್ಯಕತೆ ಇಲ್ಲ
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 2ನೇ ವಿಮಾನ ನಿಲ್ದಾಣ ನಿರ್ಮಾಣದ ಕುರಿತು ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಇತ್ತೀಚಿಗೆ ಮಹತ್ವದ ಮಾಹಿತಿ ಬಹಿರಂಗಪಡಿಸಿದ್ದಾರೆ. ಬೆಂಗಳೂರಿನಲ್ಲಿ 2ನೇ ವಿಮಾನ ನಿಲ್ದಾಣ ನಿರ್ಮಿಸುವ ಕುರಿತು ಸಭೆ ಮಾಡಿ ಅನೇಕ ವಿಚಾರವಾಗಿ ಚರ್ಚೆ ಮಾಡಿದ್ದೇವೆ. 2033ರವರೆಗೂ ಕಾಯುವ ಅವಶ್ಯಕತೆ ಇಲ್ಲ. ಪಾಸೆಂಜರ್ಸ್ ಲೋಡ್, ಕನೆಕ್ಟಿವಿಟಿ ಸೇರಿದಂತೆ ಹಲವಾರು ವಿಚಾರವಾಗಿ ಸೂಚನೆ ನೀಡಲಾಗಿದೆ ಎಂದು ಅವರು ಸೂಚನೆ ನೀಡಿದ್ದಾರೆ.
4-5 ಕಡೆ ಜಾಗ ಆಯ್ಕೆ
ಬೆಂಗಳೂರಿನಲ್ಲಿ 2ನೇ ವಿಮಾನ ನಿಲ್ದಾಣ ನಿರ್ಮಾಣ ಮಾಡಲು 4-5 ಕಡೆ ಜಾಗ ಆಯ್ಕೆ ಮಾಡಲಾಗಿದೆ. ಈ ಬಗ್ಗೆ ಹೆಚ್ಚಿನ ಸೃಷ್ಟನೆ ಬರಬೇಕಿದೆ. ನ್ಯೂಯಾರ್ಕ್, ಲಂಡನ್, ಮುಂಬೈ ವಿಮಾನ ವಿದ್ಯಾಣಗಳನ್ನ ಗಮನದಲ್ಲಿಟ್ಟುಕೊಂಡು ಬೆಂಗಳೂರಿನಲ್ಲಿ 2ನೇ ವಿಮಾನ ನಿಲ್ದಾಣ ನಿರ್ಮಾಣ ಮಾಡಬೇಕಿದೆ. ಈ ಬಗ್ಗೆ ಮುಂದಿನ ಸಭೆಯಲ್ಲಿ ತೀರ್ಮಾನ ಮಾಡಲಾಗುತ್ತದೆ. ಅದಕ್ಕೂ ಮುನ್ನ ಸಿಎಂ ಸಿದ್ಧರಾಮಯ್ಯ ಅವರ ಜೊತೆಗೆ ಚರ್ಚೆ ಮಾಡುತ್ತೇನೆ ಎಂದು ಅವರು ಮಾಹಿತಿ ನೀಡಿದರು.
ಇದನ್ನೂ ನೋಡಿ: ಸರ್ಕಾರಿ ಶಾಲೆ | ಹೊಸ ಕೊಠಡಿಯ ಮೇಲ್ಛಾವಣಿ ಕುಸಿತ – ವಿದ್ಯಾರ್ಥಿ ತಲೆಗೆ ಗಂಭೀರ ಏಟುJanashakthi Media