ಅಖಿಲ ಭಾರತ ಮುಷ್ಕರ: ರಾಜ್ಯದ ವಿವಿಧೆಡೆ ಕಾರ್ಮಿಕ ಸಂಘಟನೆಗಳಿಂದ ಪ್ರತಿಭಟನೆ

ಬೆಂಗಳೂರು: ಪ್ರಮುಖ ಬೇಡಿಕೆಗಳನ್ನು ಈಡೇರಿಸಬೇಕೆಂದು ಕಾರ್ಮಿಕ ಸಂಘಟನೆಗಳ ಒಕ್ಕೂಟದ ವತಿಯಿಂದ ರಾಷ್ಟ್ರವ್ಯಾಪಿ ಮುಷ್ಕರದ ಕರೆಯ ಭಾಗವಾಗಿ ಇಂದು(ಮಾ.29) ರಾಜ್ಯಾದ್ಯಂತ ಎರಡನೇ ದಿನದಂದು ಹಲವಡೆ ಪ್ರತಿಭಟನಾ ಪ್ರದರ್ಶನಗಳು ನಡೆದವು. ಕಾರ್ಮಿಕ ಸಂಘಗಳ‌‌ ಜಂಟಿ ಸಮಿತಿ (ಜೆಸಿಟಿಯು) ನೇತೃತ್ವದಲ್ಲಿ ‌ಬೆಂಗಳೂರಿನ ಪ್ರೀಡಂ ಪಾರ್ಕನಲ್ಲಿ ನೆರದಿದ್ದ ಸಂಘಟಿತ, ಅಸಂಘಟಿತ, ಸ್ಕಿಂ‌ ಕಾರ್ಮಿಕರು ಹಾಗೂ ಬ್ಯಾಂಕ್, ವಿಮಾ, ಬಿಎಸ್ ಎನ್‌ಎಲ್,‌ ಸಂಘಗಳ ಸಾವಿರಾರು‌ ನೌಕರರು ಮುಷ್ಕರದಲ್ಲಿ ಭಾಗವಹಿಸಿದ್ದರು.

ಕೋಲಾರ: ನಗರದ ಹೊರವಲಯದ ಜಿಲ್ಲಾಧಿಕಾರಿ ಕಛೇರಿ ಮುಂದೆ ಮಂಗಳವಾರ ವಿವಿಧ ಕಾರ್ಮಿಕ ಸಂಘಟನೆಗಳ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.

ಸಿಐಟಿಯು ಮುಖಂಡ ಗಾಂಧಿನಗರ ನಾರಾಯಣಸ್ವಾಮಿ ಮಾತನಾಡಿ ಕೇಂದ್ರ ಸರಕಾರ ಜಾರಿ ಮಾಡಲು ಹೊರಟಿರುವ ಕಾರ್ಮಿಕ ಸಂಹಿತೆಗಳು ಕಾರ್ಮಿಕರನ್ನು ಮತ್ತೊಮ್ಮೆ ಗುಲಾಮಗಿರಿಯ ಪದ್ದತಿಗೆ ತಳ್ಳುವಂತೆ ಮಾಡಿದ್ದಾರೆ ದೇಶದ ಸಂಪತ್ತು ಸೃಷ್ಟಿಸುವ ಕಾರ್ಮಿಕರ ಹಕ್ಕುಗಳನ್ನು ರಕ್ಷಿಸಲು ಸರಕಾರಗಳು ಮುಂದಾಗಬೇಕು ಕಾರ್ಮಿಕರು ಉಳಿದರೇ ಮಾತ್ರ ದೇಶ ಅಭಿವೃದ್ಧಿಯ ಹಾದಿಯಲ್ಲಿ ಇರುತ್ತದೆ ಎಂಬುದನ್ನು ಸರಕಾರಗಳು ಅರ್ಥ ಮಾಡಿಕೊಳ್ಳಬೇಕು ಎಂದು ಒತ್ತಾಯಿಸಿದರು.

ಮನವಿ ಸ್ವೀಕರಿಸಿ ಮಾತನಾಡಿದ ಜಿಪಂ ಸಿಇಓ ಯುಕೇಶ್ ಕುಮಾರ್ ನಮ್ಮ ಹಂತದಲ್ಲಿ ಬಗೆಹರಿಯುವ ಬೇಡಿಕೆಗಳನ್ನು ಕೂಡಲೇ ಬಗೆಹರಿಸುತ್ತೇನೆ ಉಳಿದ ಬೇಡಿಕೆಗಳ ಬಗ್ಗೆ ಸರಕಾರದ ಗಮನಕ್ಕೆ ತರಲಾಗುವುದು ಎಂದು ತಿಳಿಸಿದರು.

ಚಿಕ್ಕಮಗಳೂರು: ನಗರದ ಸಿಪಿಐ ಕಚೇರಿ ಮುಂಭಾಗ ಸಮಾವೇಶಗೊಂಡು ವಿವಿಧ ಕಾರ್ಮಿಕ ಸಂಘಟನೆಗಳ ಮುಖಂಡರು ಹಾಗೂ ಕಾರ್ಮಿಕರು, ಎಂ.ಜಿ.ರಸ್ತೆ ಮೂಲಕ ಪ್ರತಿಭಟನಾ ಆಜಾದ್‍ಪಾರ್ಕ್ ವೃತ್ತದವರೆಗೆ ಬೃಹತ್ ಧರಣಿ ನಡೆಸಿದರು. ಮೆರವಣಿಗೆಯುದ್ದಕ್ಕೂ ಕೇಂದ್ರ ಮತ್ತು ರಾಜ್ಯ ಸರಕಾರಗಳ ಕಾರ್ಮಿಕ ವಿರೋಧಿ ನೀತಿಯನ್ನು ಖಂಡಿಸಿ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಪ್ರಸಕ್ತ ರೈತರು ಮತ್ತು ಕಾರ್ಮಿಕರಿಗೆ ರಕ್ಷಣೆ ಇಲ್ಲದಂತಾಗಿದೆ. ಮತ್ತೊಂದು ಕಡೆ ದಿನನಿತ್ಯ ಬಳಕೆಯ ವಸ್ತುಗಳ ಬೆಲೆ ಗಗನಕ್ಕೆರುತ್ತಿದೆ. ಮದ್ಯಮ ವರ್ಗದ ಜನರು ನೆಮ್ಮದಿಯಿಂದ ಬದುಕಲು ಸಾಧ್ಯವಾಗುತ್ತಿಲ್ಲ, ಕೇಂದ್ರ ಮತ್ತು ರಾಜ್ಯ ಸರಕಾರ ಕಾರ್ಪೋರೇಟ್ ಸಂಸ್ಥೆಗಳ ಪರವಾದ ಕಾನೂನು ರೂಪಿಸುತ್ತಿವೆ ಎಂದ ಅವರು, ಕಾರ್ಮಿಕ ವಿರೋಧಿಯಾಗಿ ನಡೆದುಕೊಳ್ಳುತ್ತಿರುವ ಕೇಂದ್ರ ಮತ್ತು ರಾಜ್ಯದ ಬಿಜೆಪಿ ಸರಕಾರಗಳನ್ನು ಮುಂಬರುವ ಚುನಾವಣೆಯಲ್ಲಿ ಮನೆಗೆ ಕಳಿಸಬೇಕು. ಅಲ್ಲಿಯವರೆಗೂ ಕಾರ್ಮಿಕರು ವಿಶ್ರಮಿಸಬಾರದು ಎಂದು ಕರೆ ನೀಡಿದರು.

ಮಡಿಕೇರಿ: ನಗರದ ಸುದರ್ಶನ ವೃತ್ತದಿಂದ ಮೆರವಣಿಗೆ ಮೂಲಕ ಸಾಗಿ ಬಂದ ಪ್ರತಿಭಟನಾಕಾರರು ಜಿಲ್ಲಾಧಿಕಾರಿಗಳ ಕಚೇರಿ ಎದುರು ಜಮಾಯಿಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಅಸಮಾಧಾನ ವ್ಯಕ್ತಪಡಿಸಿದರು.

ಕೇಂದ್ರ ಸರ್ಕಾರದ ರೈತ, ಕಾರ್ಮಿಕ, ಜನ ವಿರೋಧಿ ನೀತಿ, ಕಾರ್ಪೊರೇಟ್ ಪರ ಮತ್ತು ರಾಷ್ಟ್ರ ವಿರೋಧಿ ನೀತಿಗಳ ವಿರುದ್ಧ ಹಾಗೂ ಪಾರ್ಲಿಮೆಂಟ್‍ನಲ್ಲಿ 4 ಕಾರ್ಮಿಕ ಸಂಹಿತೆಗಳ ರದ್ದತಿಗಾಗಿ ಮಂಡಿಸಿರುವ ಖಾಸಗಿ ಮಸೂದೆಯನ್ನು ಅಂಗೀಕರಿಸಬೇಕೆಂದು ಪತ್ರಿಭಟನಾಕಾರರು ಒತ್ತಾಯಿಸಿರು.

ನಿವೇಶನ ರಹಿತ ಕಾರ್ಮಿಕರಿಗೆ ನಿವೇಶನ ಒದಗಿಸಬೇಕು, ವನ್ಯ ಪ್ರಾಣಿಗಳ ಹಾವಳಿ ತಡೆಗಟ್ಟಬೇಕು, ಜಿಲ್ಲೆಯಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ, ಕಾರ್ಮಿಕ ನ್ಯಾಯಾಲಯ ಸ್ಥಾಪನೆಯಾಗಬೇಕು, ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ, ಅಗತ್ಯ ವಸ್ತುಗಳ ಬೆಲೆ ನಿಯಂತ್ರಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದರು.

ಕಲಬುರಗಿ: ನಗರದ ಕೇಂದ್ರ ಬಸ್ ನಿಲ್ದಾಣದಿಂದ ಪ್ರತಿಭಟನಾ ಮೆರವಣಿಗೆ ಹೊರಡಿ ಜಗತ್ ಸರ್ಕಲ್‌ನಲ್ಲಿ ಪ್ರತಿಭಟನಾ ಬಹಿರಂಗ ಸಭೆ ನಡೆಸುವ ಶಾಂತಿಪೂರ್ವಕವಾಗಿ ನಡೆಯಿತು.

ಈ ಸಭೆಯನ್ನು ಉದ್ದೇಶಿಸಿ ಸಿ.ಐ.ಟಿ.ಯು. ನ ಜಿಲ್ಲಾ ಅಧ್ಯಕ್ಷರಾದ ಕಾ|ಮ್ರೇಡ್ ಶಾಂತಾ ಘಂಟಿ, ಎ.ಐ.ಯು.ಟಿ.ಯು.ಸಿ ನ ಜಿಲ್ಲಾ ಅಧ್ಯಕ್ಷರಾದ ವಿ. ಜಿ. ದೇಸಾಯಿ, ಎ.ಐ.ಟಿ.ಯು.ಸಿ ನ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಪ್ರಭುದೇವ ಯಳಸಂಗಿ, ಐ.ಎನ್.ಟಿ.ಯು.ಸಿ ನ ಜಿಲ್ಲಾ ಅಧ್ಯಕ್ಷರಾದ ಅಶೋಕ ಘೂಳಿ, ಎನ್.ಸಿ. ಎಲ್ ಜಿಲ್ಲಾ ಅಧ್ಯಕ್ಷರಾದ ಶಂಕರ ಕಟ್ಟಿ ಸಂಗಾವಿ, ಮುಷ್ಕರವನ್ನು ಬೆಂಬಲಿಸಿ ಎಸ್.ಯು.ಸಿ.ಐ ನ ಜಿಲ್ಲಾ ಕಾರ್ಯದರ್ಶಿಗಳಾದ ಕಾಮ್ರೇಡ್ ಹೆಚ್ ವಿ ದಿವಾಕರ್, ಹಾಗೂ ಸಿ.ಪಿ.ಐ (ಎಂ) ನ ಜಿಲ್ಲಾ ಕಾರ್ಯದರ್ಶಿಗಳಾದ ಕಾಮ್ರೇಡ್ ನೀಲಾ ಕೆ. ರವರು ಮಾತನಾಡಿದರು.

ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸಿ. ವಿದ್ಯುತ್ ಮಸೂದೆ (ತಿದ್ದುಪಡಿ) ಹಿಂತೆಗೆದುಕೊಳ್ಳಿ, ಯಾವುದೇ ರೂಪದಲ್ಲಿ ಖಾಸಗೀಕರಣ ಬೇಡ ಮತ್ತು ಎನ್‌ಎಂಪಿಯನ್ನು ರದ್ದುಮಾಡಬಾರದು, ದೆಹಲಿಯ ಸಂಯುಕ್ತ ಕಿಸಾನ್ ಮೋರ್ಚಾದ ಆರು ಬೇಡಿಕೆಗಳನ್ನು ಈಡೇರಿಸಿ ಕನಿಷ್ಠ ಬೆಂಬಲ ಬೆಲೆ ಖಾತ್ರಿ ಮಾಡಿ, ರಾಷ್ಟ್ರೀಯ ಪಿಂಚಣಿ ಯೋಜನೆ (ಎನ್.ಪಿ.ಎಸ್.) ರದ್ದು ಮಾಡಿ. ಹಳೆ ಪಿಂಚಣಿ ವ್ಯವಸ್ಥೆ ಪುನ: ಜಾರಿಗೆ, ಆದಾಯ ತೆರಿಗೆ ಪಾವತಿಸದ ಕುಟುಂಬಗಳಿಗೆ ತಿಂಗಳಿಗೆ ರೂ. 7500/- ರೂ. ಗಳ ನಗದು ಮತ್ತು ಉಚಿತ್ ರೇಷನ್ ನೀಡಬೇಕೆಂದು ಒತ್ತಾಯಿಸಿದರು.

ಶಿವಮೊಗ್ಗದಲ್ಲಿ ಜೆಸಿಟಿಯು ನೇತೃತ್ವದಲ್ಲಿ ಬೃಹತ್ ಕಾರ್ಮಿಕ ಮುಷ್ಕರ ನಡೆದಿದ್ದು ಸಾವಿರಕ್ಕೂ ಹೆಚ್ಚಿನ ವಿವಿಧ ಕಾರ್ಮಿಕರು ಭಾಗವಹಿಸಿ ಮುಷ್ಕರವನ್ನು ಯಶಸ್ವಿಗೊಳಿಸಿದ್ದಾರೆ. ಶಿವಮೊಗ್ಗದ ಕೆ.ಎಸ್.ಆರ್.ಟಿ.ಸಿ ಬಸ್‌ ನಿಲ್ದಾಣದಿಂದ ಮೆರವಣಿಗೆಯಲ್ಲಿ ಹೊರಟ ಕಾರ್ಮಿಕರು, ಸರ್ಕಾರದ ಕಾರ್ಮಿಕ ವಿರೋಧಿ ಘೋಷಣೆಗಳನ್ನು ಕೂಗುದರು.

ಅಮೀರ್ ಅಹಮದ್ ಸರ್ಕಲ್, ಗೋಪಿ ಸರ್ಕಲ್, ಕೋರ್ಟ್ ಸರ್ಕಲ್ ಮುಖಾಂತರ ಜಿಲ್ಲಾಧಿಕಾರಿಗಳ ಕಛೇರು ಎದುರು ದೊಡ್ಡ ಸಂಖ್ಯೆಯಲ್ಲಿ ಜಮಾವಣೆಗೊಂಡರು. ನಂತರ ಸಿಐಟಿಯುಗೆ ಸೇರಿದ ವಿವಿಧ ಸಂಘಟನೆಗಳಗಳಾದ ಬ್ಯಾಂಕ್ ನೌಕರರ ಸಂಘ, ವಿಮಾ ನೌಕರರ ಸಂಘ, ಅಕ್ಷರ ದಾಸೋಹ ಕಾರ್ಮಿಕರ ಸಂಘ, ಅಂಗನವಾಡಿ ನೌಕರರ ಸಂಘ, ಗ್ರಾಮಪಂಚಾಯತ್ ನೌಕರರ ಸಂಘ, ಐಓಸಿ, ಹಾಗೂ ಎಐಟಿಯುಸಿ ಸಂಘಟನೆಗಳ ಕಾರ್ಮಿಕರು ಸೇರಿ ಕಾರ್ಮಿಕರ ಬೇಡಿಕೆಗಳನ್ನೊಳಗೊಂಡ ಮನವಿಯನ್ನು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿದರು.

ಮೈಸೂರಿನಲ್ಲಿ ಇಂದು ನಡೆದ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ಮುಷ್ಕರದ ಭಾಗವಾಗಿ ನಡೆದ ಮೆರವಣಿಗೆ ಮತ್ತು ಬಹಿರಂಗ ಸಭೆ

ಧಾರವಾಡ ಕೇಂದ್ರ ರಾಜ್ಯ ಸರಕಾರಗಳ ರೈತ ಕಾರ್ಮಿಕ ವಿರೋಧಿ ನೀತಿಗಳ ವಿರುದ್ದ ಕಾರ್ಮಿಕ ಹಕ್ಕುಗಳ ರಕ್ಷಣೆಗಾಗಿ ದೇಶವ್ಯಾಪಿ ಮುಷ್ಕರ 2ನೇ ದಿನ ಕಲಾಭವನದಿಂದ ಮೆರವಣಿಗೆ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಬೃಹತ್ ಪ್ರತಿಭಟನಾ ಸಮಾವೇಶ

ಮಂಡ್ಯದಲ್ಲಿ ಕೇಂದ್ರ ಸರ್ಕಾರದ ಜನ ವಿರೋಧಿ, ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ನಡೆದ ಅಖಿಲ ಭಾರತ ಮುಷ್ಕರದ ಭಾಗವಾಗಿ ಮೆರವಣಿಗೆ ಮತ್ತು ಬಹಿರಂಗ ಸಭೆಯನ್ನು ನಡೆಸಲಾಯಿತು.

 

ದೇಶ ಉಳಿಸಿ ಜನರನ್ನು ರಕ್ಷಿಸಿ ಎನ್ನುವ ಬೇಡಿಕೆಯ ಆಧಾರದಲ್ಲಿ ಬೆಲೆ ಏರಿಕೆ ವಿರುದ್ಧ, ರೈತ ಕಾರ್ಮಿಕರ ಹಕ್ಕುಗಳ ರಕ್ಷಣೆಗಾಗಿ ಒತ್ತಾಯಿಸಿ ಇಂದು ಇಡೀ ದೇಶದ ದುಡಿಯುವ ವರ್ಗ ಮುಷ್ಕರ ನಡೆಸಿತ್ತು. ಹಾಸನದಲ್ಲಿ ಕೆಂಬಾವುಟದಡಿ ಕಾರ್ಮಿಕರ ಬೃಹತ್ ಮೆರವಣಿಗೆ

ಹಾವೇರಿ ಕೇಂದ್ರ ರಾಜ್ಯ ಸರಕಾರಗಳ ರೈತ ಕಾರ್ಮಿಕ ವಿರೋಧಿ ನೀತಿಗಳ ವಿರುದ್ದ ಕಾರ್ಮಿಕ ಹಕ್ಕುಗಳ ರಕ್ಷಣೆಗಾಗಿ ದೇಶವ್ಯಾಪಿ ಮುಷ್ಕರದ 2ನೇ ದಿನ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಬೃಹತ್ ಪ್ರತಿಭಟನಾ ಸಮಾವೇಶ ನಡೆಸಲಾಯಿತು.

ಜೆಸಿಟಿಯು ಕೇಂದ್ರ ಕಾರ್ಮಿಕ ಸಂಘಗಳ ಜಂಟಿ ಸಮಿತಿ ಉಡುಪಿಯಲ್ಲಿ ಇಂದು ಅಖಿಲ ಭಾರತ ಮುಷ್ಕರ ಮಾರ್ಚ್ 29 ಭಾಗವಾಗಿ ಮಣಿಪಾಲದ ಟೈಗರ್ ಸರ್ಕಲ್‌ ನಿಂದ ಸಾವಿರಾರು ಕಾರ್ಮಿಕರು ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಛೇರಿ ಬಂದು ಪ್ರತಿಭಟನೆ ನಡೆಸಿ ಅಪಾರ ಜಿಲ್ಲಾಧಿಕಾರಿ ಮೂಲಕ ಪ್ರಧಾನ ಮಂತ್ರಿಯವರಿಗೆ ಮನವಿ ಸಲ್ಲಿಸಲಾಯಿತು.

ತುಮಕೂರಿನಲ್ಲಿ ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ನಡೆದ ಮುಷ್ಕರದಲ್ಲಿ ಕಾರ್ಮಿಕರು ಭಾಗವಹಿಸಿದ್ದರು.

ವಿಜಯನಗರ ಜಿಲ್ಲೆಯಲ್ಲಿ ಅಖಿಲ ಭಾರತ ಮುಷ್ಕರವನ್ನು ಬೆಂಬಲಿಸಿ ನಡೆದ ಕಾರ್ಮಿಕರ ಮೆರವಣಿಗೆ ಮತ್ತು ಪ್ರತಿಭಟನಾ ಸಭೆ

ರಾಯಚೂರು ಜಿಲ್ಲೆಯಲ್ಲಿ ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ನಡೆದ ಮುಷ್ಕರದಲ್ಲಿ ಕಾರ್ಮಿಕರು ಭಾಗವಹಿಸಿದ್ದರು.

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ನಡೆದ ಮುಷ್ಕರದಲ್ಲಿ ಕಾರ್ಮಿಕರು ಭಾಗವಹಿಸಿದ್ದರು

 

 

Donate Janashakthi Media

Leave a Reply

Your email address will not be published. Required fields are marked *