ಲಖನೌ: ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಘೋಷಣೆ ಮಾಡಿದ್ದಾರೆ. ಅಜಂಗಢದಿಂದ ಸಮಾಜವಾದಿ ಪಕ್ಷದ ಸಂಸದರು ಅಖಿಲೇಶ್ ಯಾದವ್, ಉತ್ತರ ಪ್ರದೇಶ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದಿರುವುದು ಸಾಕಷ್ಟು ಕುತೂಹಲ ಮೂಡಿಸಿದೆ.
ಮುಂದಿನ ವರ್ಷದ ಆರಂಭದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗಾಗಿ ಸಮಾಜವಾದಿ ಪಕ್ಷ ಹಾಗೂ ರಾಷ್ಟ್ರೀಯ ಲೋಕ ದಳ ನಡುವಣ ಮೈತ್ರಿಯನ್ನು ಅಂತಿಮಗೊಳಿಸಲಾಗಿದೆ. ಸೀಟು ಹಂಚಿಕೆ ಬಗ್ಗೆ ತೀರ್ಮಾನವಾಗಬೇಕಿದೆ ಎಂದು ಅವರು ತಿಳಿಸಿದ್ದಾರೆ.
ಚಿಕ್ಕಪ್ಪ ಶಿವಪಾಲ್ ಯಾದವ್ ಅವರ ಪ್ರಗತಿಶೀಲ ಸಮಾಜವಾದಿ ಪಕ್ಷ ಲೋಹಿಯಾ (ಪಿಎಸ್‌ಪಿಎಲ್) ದಿಂದ ನೆರವು ಕುರಿತಂತೆ ಪ್ರತಿತ್ರಿಯಿಸಿದ ಅಖಿಲೇಶ್ ಯಾದವ್, ಇದರಲ್ಲಿ ನನಗೆ ಯಾವುದೇ ಸಮಸ್ಯೆ ಇಲ್ಲ, ಅವರಿಗೆ ಹಾಗೂ ಅವರ ಕಡೆಯವರಿಗೆ ಸರಿಯಾದ ಗೌರವವನ್ನು ನೀಡಲಾಗುವುದು ಎಂದು ಹೇಳಿದರು.
ಚಿಕ್ಕಪ್ಪ ಶಿವಪಾಲ್ ಯಾದವ್ ಅವರ ಪ್ರಗತಿಶೀಲ ಸಮಾಜವಾದಿ ಪಕ್ಷ ಲೋಹಿಯಾ (ಪಿಎಸ್‌ಪಿಎಲ್) ದಿಂದ ನೆರವು ಕುರಿತಂತೆ ಪ್ರತಿಕ್ರಿಯಿಸಿದ ಅಖಿಲೇಶ್ ಯಾದವ್, ಇದರಲ್ಲಿ ನನಗೆ ಯಾವುದೇ ಸಮಸ್ಯೆ ಇಲ್ಲ, ಅವರಿಗೆ ಹಾಗೂ ಅವರ ಕಡೆಯವರಿಗೆ ಸರಿಯಾದ ಗೌರವವನ್ನು ನೀಡಲಾಗುವುದು ಎಂದು ಹೇಳಿದರು.
ಸಮಾಜವಾದಿ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯೂ ಎಂದು ಬಿಂಬಿತರಾಗಿದ್ದ ಅಖಿಲೇಶ್ ಯಾದವ್ ಕೆಲವು ದಿನಗಳ ಹಿಂದಷ್ಟೇ ʻʻಉತ್ತರ ಪ್ರದೇಶ ವಿಧಾನಸಭೆ ಚುನಾವಣೆ 2022ರಲ್ಲಿ ಭಾರತೀಯ ಜನತಾ ಪಕ್ಷದ ಸರ್ಕಾರವನ್ನು ತೆಗೆದು ಹಾಕುವುದೇ ತಮ್ಮ ಮುಖ್ಯ ಉದ್ದೇಶವಾಗಿದೆ” ಎಂದಿದ್ದಾರೆ.
ಕೆಲವು ದಿನಗಳ ಹಿಂದಷ್ಟೇ ʻʻಉತ್ತರಪ್ರದೇಶ ಚುನಾವಣೆ ಹೊಸ ರಣತಂತ್ರ ಭಾಗವಾಗಿ ಜನತೆಯಲ್ಲಿ ಬಿಜೆಪಿ ಸರ್ಕಾರದ ವಿರುದ್ಧದ ನಿರಾಶೆಯನ್ನು ನೋಡಿ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಉತ್ತರ ಪ್ರದೇಶದ ಮತದಾರರು ನಮ್ಮ ಪಕ್ಷವನ್ನು 400 ಕ್ಷೇತ್ರಗಳಲ್ಲಿ ಗೆಲ್ಲುವಂತೆ ಮಾಡಬಹುದು. ಬಿಜೆಪಿ ಸರ್ಕಾರವನ್ನು ತೆಗೆದು ಹಾಕುವುದೇ ನಮ್ಮ ಗುರಿ” ಎಂದು ಅಖಿಲೇಶ್ ಯಾದವ್ ಹೇಳಿದ್ದರು.