ಅಕ್ರಮ ಶೌಚಾಲಯ ತನಿಖೆ ವರದಿಗೆ ಆಗ್ರಹಿಸಿ ಪ್ರತಿಭಟನೆ

ಮಾನ್ವಿ(ಕವಿತಾಳ) : ಅಕ್ರಮ ಶೌಚಾಲಯ ತನಿಖೆ ಮತ್ತು ನೀರಿನ ಸಮಸ್ಯೆ ಬಗೆಹರಿಸಲು ಒತ್ತಾಯಿಸಿ ಭಾರತ ಪ್ರಜಾಸತ್ತಾತ್ಮಕ ಯುವ ಜನ ಫೆಡರೇಷನ್ (DYFI) ಭಾರತ ವಿದ್ಯಾರ್ಥಿ ಫೆಡರೇಶನ್ (SFI) ಹಾಗೂ ಕವಿತಾಳ ನವ ನಿರ್ಮಾಣ ವೇದಿಕೆ ನೇತೃತ್ವದಲ್ಲಿ ಕಾರ್ಯಕರ್ತರು ಪಟ್ಟಣ ಪಂಚಾಯತ್ ಮುಂಭಾಗದಲ್ಲಿ ಅನಿರ್ಧಿಷ್ಟಾವಧಿ ಧರಣಿಯನ್ನು ಆರಂಭಿಸಿದ್ದಾರೆ.

ಕವಿತಾಳ ಪಟ್ಟಣದ ಗ್ರಾಮ ಪಂಚಾಯತಿ ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಯ ಏರಿದ ಅಂದಿನಿಂದ ಇಂದಿನವರೆಗೂ ಪಟ್ಟಣದ ಸಮಸ್ಯೆಗಳನ್ನು ಪರಿಹರಿಸುವಂತೆ ಆಗ್ರಹಿಸಿ ಹೋರಾಟ, ಮನವಿ ಇತ್ಯಾದಿಗಳನ್ನು ನಿರಂತರವಾಗಿ ಮಾಡುತ್ತಾ ಅಧಿಕಾರಿಗಳ ಗಮನಕ್ಕೆ ತರುತ್ತಾ ಬಂದಿದ್ದಾರೆ. ಅದರಲ್ಲೂ ಮುಖ್ಯವಾಗಿ ಶೌಚಾಲಯ ಹಗರಣ, ಪಟ್ಟದ ಗಂಭೀರವಾದ ಕುಡಿಯುವ ನೀರಿನ ಸಮಸ್ಯೆ, ಚರಂಡಿ ಸ್ವಚ್ಛತೆ, ವಿದ್ಯುತ್ ದೀಪ ಅಳವಡಿಕೆಗೆ ಒತ್ತಾಯಿಸಿ ಮತ್ತು ಪಟ್ಟಣದ ಎಲ್ಲಾ ವಾರ್ಡ್ ಗಳಿಗೆ ಮೂಲಭೂತ ಸೌಕರ್ಯಗಳನ್ನು ನೀಡವಂತೆ ಆಗ್ರಹಿಸಿದ್ದಾರೆ.

ಇದಕ್ಕೆ ತಹಶಿಲ್ದಾರರ, ಯೋಜನಾ ನಿರ್ದೇಶಕರು ಸೇರಿ ಹಲವು ಅಧಿಕಾರಿಗಳು ಬಂದು ತಮ್ಮ ಮೌಖಿಕ ಆದೇಶದ ನಂತರ ಲಿಖಿತ ಭರವಸೆ ನೀಡಿ ಹೋರಾಟವನ್ನು ತಾತ್ಕಾಲಿಕ ವಾಗಿ ಕೈ ಬಿಡುವಂತೆ ಮನವಿ ಮಾಡಿಕೊಂಡಿದ್ದರು. ನಂತರ ಈ ವಿಚಾರವಾಗಿ ತಮ್ಮನ್ನು ಸೇರಿ ಸಂಬಂಧಿಸಿದ ಎಲ್ಲಾ ಅಧಿಕಾರಿಗಳನ್ನು ಅನೇಕ ಬಾರಿ ಭೇಟಿ ಮಾಡಿ ಚರ್ಚಿಸಿದ್ದೇವೆ. ತನಿಖೆ ಆರಂಭಿಸಿ ಪ್ರಕ್ರಿಯೆ ಪೂರ್ಣಗೊಂಡರು ವರದಿ ನೀಡಿ ತಪ್ಪಿತಸ್ಥರ ಮೇಲೆ ಕ್ರಮ ಜರುಗಿಸದೆ ಭ್ರಷ್ಟರನ್ನು ಬಚ್ಚಾವ್ ಮಾಡುವ ಕೆಲಸ ನಡೆಯುತ್ತಿದೆ ಎಂದು DYFI ನಗರ ಅಧ್ಯಕ್ಷ ರಾದ ಮಹಮ್ಮದ್ ರಫೀ ಆರೋಪಿಸಿದ್ದಾರೆ.

ಹೋರಾಟವನ್ನು ಉದ್ದೇಶಿಸಿ ಮಾತನಾಡಿದ SFI ಜಿಲ್ಲಾ ಕಾರ್ಯದರ್ಶಿ ಲಿಂಗರಾಜ ಕಂದಗಲ್ ಈ ಹಿಂದೆ ನೀರಿನ ಸಮಸ್ಯೆ ಕುರಿತು ಮುಖ್ಯಾಧಿಕಾರಿಗಳಿಗೆ SFI & DYFI ಅನೇಕ ಬಾರಿ ಮನವಿ ಸಲ್ಲಿಸಿದೆ. ಇದಕ್ಕೆ ಸ್ಪಂದಿಸಿ ಸಹಾಯಕ ಆಯುಕ್ತರು ಸಹ ಮುಖ್ಯಾಧಿಕಾರಿಗಳಿಗೆ ವಾರ್ಡಿನ ನೀರಿನ ಸಮಸ್ಯೆ ಬಗೆಹರಿಸಲು ಅಧಿಕೃತ ಪತ್ರದ ಮೂಲಕ ಸೂಚನೆ ನೀಡಿದ್ದರು. ದುರಂತ ಅಂದರೆ ಇಲ್ಲಿ ಸಹಾಯಕ ಆಯುಕ್ತರ ಮಾತಿಗೆ ಬೆಲೆ ಇಲ್ಲದಂತಾಗಿದೆ ಆಕ್ರೋಶ ವ್ಯಕ್ತಪಡಿಸಿದರು.

ಜನಪ್ರತಿನಿಧಿಗಳು ಸೇರಿ ಇಡೀ ಸ್ಥಳೀಯಾಡಳಿತ ವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ ತಾವು ಗಳು ವಿಶೇಷ ಗಮನ ಹರಿಸಿ ಸಾರ್ವಜನಿಕ ಮತ್ತು ಪಟ್ಟಣದ ಅಭಿವೃದ್ಧಿಗೆ ಸಂಬಂಧಿಸಿದ ಈ ಕೆಳಗಿನ ಬೇಡಿಕೆಗಳಾದ ಶೌಚಾಲಯ ಹಗರಣದ ತನಿಖೆಯ ವರದಿಯನ್ನು ಬಿಡುಗಡೆ ಮಾಡಿ ಅಕ್ರಮದಲ್ಲಿ ಭಾಗಿಯಾದವರ ವಿರುದ್ದ ಕಠಿಣ ಕಾನೂನು ಕ್ರಮ ಜರುಗಿಸಬೇಕು. ನಿರ್ಲಕ್ಷ್ಯ ತೋರಿದರೆ ಉಗ್ರ ಸ್ವರೂಪದ ಹೋರಾಟಕ್ಕೆ ಮುಂದಾಗಬೇಕಾಗುತ್ತದೆಂದು ಹೋರಾಟಗಾರರು ಎಚ್ಚರಿಸಿದ್ದಾರೆ.

ಈ ಸಂಧರ್ಭದಲ್ಲಿ, SFI ಅಧ್ಯಕ್ಷರಾದ ಮೌನೇಶ ಬುಳ್ಳಾಪುರ, ಕಾರ್ಯದರ್ಶಿ ವೆಂಕಟೇಶ, ಸಂಘಟನೆಗಳ ಮುಖಂಡರಾದ ಮಹಾದೇವ ಬುಳ್ಳಾಪುರ, ನಾಗಮೋಗನ್ ಸಿಂಗ್,  ಮಲ್ಲಿಕಾರ್ಜುನ, ನಾಗರಾಜ ಸಾಹುಕಾರ್, ಬಸವರಾಜ ಸೇರಿ ಅನೇಕರಿದ್ದರು.

Donate Janashakthi Media

Leave a Reply

Your email address will not be published. Required fields are marked *