ವಿಧಾನ ಪರಿಷತ್ ಚುನಾವಣೆ: ಎಲ್ಲಾ ಏಳೂ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆ!

  • ವಿಧಾನ ಪರಿಷತ್ ಚುನಾವಣೆ ಫಲಿತಾಂಶ
    ಎಲ್ಲಾ ಏಳೂ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆ
    ಬಿಜೆಪಿಗೆ 4, ಕಾಂಗ್ರೆಸ್ ಗೆ 2 ಹಾಗೂ ಜೆಡಿಎಸ್ ಗೆ ಒಂದು ಸ್ಥಾನ

ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಯಾವುದೇ ಪಕ್ಷ ಹೆಚ್ಚುವರಿ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸದ ಕಾರಣ ನಿರೀಕ್ಷೆಯಂತೆ ಏಳೂ ಅಭ್ಯರ್ಥಿಗಳು ಅವಿರೋಧ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಎಂ.ಕೆ.ವಿಶಾಲಾಕ್ಷಿ ಘೋಷಿಸಿದ್ದಾರೆ.

ಮೇ 24 ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿತ್ತು, ಮೇ 25 ರಂದು ಪರಿಶೀಲನೆ ಹಾಗೂ ಮೇ 27 ನಾಮಪತ್ರ ಹಿಂತೆಗೆದುಕೊಳ್ಳಲು ಕೊನೆಯ ದಿನವಾಗಿತ್ತು. ಏಳು ಸ್ಥಾನಗಳಿಗೆ ಏಳು ಅಭ್ಯರ್ಥಿಗಳನ್ನ ಬಿಟ್ಟು ಬೇರೆಯಾರು ಸ್ಪರ್ಧೆ ಮಾಡಿಲ್ಲ. ಈ ಹಿನ್ನೆಲೆಯಲ್ಲಿಅಂತಿಮ ಕಣದಲ್ಲಿ ಉಳಿದಿದ್ದ ಕಾರಣಕ್ಕೆ 7 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಒಟ್ಟು 7 ಸ್ಥಾನಗಳ ಪೈಕಿ ಬಿಜೆಪಿಗೆ 4, ಕಾಂಗ್ರೆಸ್ ಗೆ 2 ಹಾಗೂ ಜೆಡಿಎಸ್ ಗೆ ಒಂದು ಸ್ಥಾನ ದಕ್ಕಿದೆ.

ಬಿಜೆಪಿಯಿಂದ ಛಲವಾದಿ ನಾರಾಯಣಸ್ವಾಮಿ, ಹೇಮಲತಾ ನಾಯಕ್, ಲಕ್ಷ್ಮಣ ಸವದಿ ಮತ್ತು ಕೇಶವ್ ಪ್ರಸಾದ್ ಆಯ್ಕೆಯಾಗಿದ್ದಾರೆ.  ಕಾಂಗ್ರೆಸ್ ಪಕ್ಷದಿಂದ ನಾಗರಾಜ್ ಯಾದವ್ ಮತ್ತು ಅಬ್ದುಲ್ ಜಬ್ಬಾರ್ ಹಾಗೂ ಜೆಡಿಎಸ್ ನಿಂದ ಟಿ ಎ ಶರವಣ  ಅವರು ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.

ಇಂದು ನಾಮಪತ್ರ ವಾಪಸು ಪಡೆಯಲು ಕೊನೆಯ ದಿನವಾಗಿತ್ತು. ಆದರೆ, ಏಳು ಸ್ಥಾನಗಳಿಗೆ ಏಳು ಜನರು ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ ಎಲ್ಲರೂ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಎಂ.ಕೆ ವಿಶಾಲಾಕ್ಷಿ ಘೋಷಣೆ ಮಾಡಿ, ಅವಿರೋಧ ಆಯ್ಕೆಯ ಪ್ರಮಾಣ ಪತ್ರಗಳನ್ನು ಅಭ್ಯರ್ಥಿಗಳಿಗೆ ವಿತರಿಸಿದರು.

Donate Janashakthi Media

Leave a Reply

Your email address will not be published. Required fields are marked *