17 ವರ್ಷದವರು ಮತದಾರ ನೋಂದಣಿಗೆ ಅರ್ಜಿ ಸಲ್ಲಿಸಿ: ಚುನಾವಣಾ ಆಯೋಗ

ನವದೆಹಲಿ: ಚುನಾವಣಾ ಆಯೋಗವು 17 ವರ್ಷಕ್ಕಿಂತ ಮೇಲ್ಪಟ್ಟವರು 18 ವರ್ಷ ತುಂಬಿದ ನಂತರ ಮತದಾರರಾಗಿ ನೋಂದಾಯಿಸಲು ಮುಂಗಡವಾಗಿ ಅರ್ಜಿ ಸಲ್ಲಿಸಬಹುದು ಎಂದು ಪ್ರಕಟಣೆ ನೀಡಿದೆ.

ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಮತ್ತು ಚುನಾವಣಾ ಆಯುಕ್ತ ಅನುಪ್ ಚಂದ್ರ ಪಾಂಡೆ ನೇತೃತ್ವದ ಚುನಾವಣಾ ಸಮಿತಿಯು 17 ವರ್ಷಕ್ಕಿಂತ ಮೇಲ್ಪಟ್ಟ, ಇನ್ನೂ 18 ವರ್ಷ ತುಂಬದ ಜನ ಮತದಾರರಾಗಿ ಮುಂಚಿತವಾಗಿ ನೋಂದಾಯಿಸಿಕೊಳ್ಳಲು ತಂತ್ರಜ್ಞಾನ ಅಭಿವೃದ್ಧಿಪಡಿಸುವಂತೆ ರಾಜ್ಯ ಚುನಾವಣಾ ಆಯೋಗಗಳಿಗೆ ನಿರ್ದೇಶನ ನೀಡಿದ್ದಾರೆ.

ಮತದಾನದಲ್ಲಿ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಿಸುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

ಇತ್ತೀಚಿನವರೆಗೂ, ಮತದಾರರಾಗಲು ಜನವರಿ 1 ರ ನಂತರ 18 ವರ್ಷ ತುಂಬಿದರೂ ನೋಂದಾಯಿಸಲು ಒಂದು ವರ್ಷ ಪೂರ್ತಿ ಕಾಯಬೇಕಾಗಿತ್ತು. ನಿರ್ದಿಷ್ಟ ವರ್ಷದ ಜನವರಿ 1 ರಂದು ಅಥವಾ, ಏಪ್ರಿಲ್ 1, ಜುಲೈ ಮತ್ತು ಅಕ್ಟೋಬರ್ 1 ರಂದು 18ನೇ ವರ್ಷಕ್ಕೆ ಕಾಲಿಟ್ಟಾಗ ಮತದಾರರಾಗಿ ನೋಂದಾಯಿಸಿಕೊಳ್ಳಲು ಅವಕಾಶ ನೀಡಲಾಗಿತ್ತು.

ಅದಕ್ಕಿಂತ ಮೊದಲು 18 ವರ್ಷ ತುಂಬಿದವರು ಮಾತ್ರ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರುಗಳನ್ನು ನೋಂದಾಯಿಸಿಕೊಳ್ಳಲು ಅವಕಾಶ ನೀಡಲಾಗಿತ್ತು. ಆದರೆ ಈಗ ಕೆಲ ಬದಲಾವಣೆ ಮಾಡಲಾಗಿದೆ.

ಚುನಾವಣಾ ಕಾನೂನಿನ ಬದಲಾವಣೆಯ ನಂತರ ಇದೀಗ ಸದ್ಯ 17 ವರ್ಷ ಪೂರೈಸಿದವರು ಮತದಾರರ ಪಟ್ಟಿಗೆ ದಾಖಲು ಮಾಡಲು ಅರ್ಜಿಯನ್ನು ಸಲ್ಲಿಸಬಹುದಾಗಿದೆ.

Donate Janashakthi Media

Leave a Reply

Your email address will not be published. Required fields are marked *