ಬೆಂಗಳೂರು: ಮುಖ್ಯಮಂತ್ರಿಗಳು ಘೋಷಿಸಿರುವ ಕಬ್ಬು ಖರೀದಿ ದರವನ್ನು ರಾಜ್ಯದ ಎಲ್ಲಾ ಸಕ್ಕರೆ ಕಾರ್ಖಾನೆಗಳು ಪಾಲಿಸುವಂತೆ, ಕಬ್ಬಿನ ಬೆಲೆ ನಿಗದಿಯಲ್ಲಿ ರಾಜ್ಯದಾದ್ಯಂತ ಏಕರೂಪ ಬೆಲೆ ನಿಗದಿ ಮಾಡಲು ಆಗ್ರಹಿಸಿ, ಪ್ರತಿ ಟನ್ ಕಬ್ಬಿಗೆ ಕೇಂದ್ರ ಸರ್ಕಾರ 9.50 ಸಕ್ಕರೆ ಇಳುವರಿ ಆಧಾರದ ಮೇಲೆ 5500 ರೂ FRP ಬೆಲೆ ನಿಗದಿಗಾಗಿ ಕಬ್ಬು ಸರಬರಾಜು ಮಾಡಿದ 14 ದಿನದೊಳಗೆ ಹಣ ಪಾವತಿ ಮಾಡಲು ಒತ್ತಾಯಿಸಿ ನವೆಂಬರ್ 14ರಂದು ಕಬ್ಬು ಅಭಿವೃದ್ಧಿ ಆಯುಕ್ತರು ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ನಿರ್ದೇಶಕರಾದ ಗೋವಿಂದ ರೆಡ್ಡಿಯವರಿಗೆ ಮನವಿ ಸಲ್ಲಿಸಿ ಕಬ್ಬು ಬೆಳೆಗಾರರ ಸಮಸ್ಯೆಗಳ ಕುರಿತು ವಿವರವಾಗಿ ಚರ್ಚಿಸಲಾಯಿತು.
ಇದನ್ನೂ ಓದಿ: ಅಂಗಾಂಗ ಕಸಿ ವೇಳೆ ಕೋವಿಡ್ -19 ಪರೀಕ್ಷೆ ಕಡ್ಡಾಯವಲ್ಲ: ಆರೋಗ್ಯ ಸಚಿವಾಲಯ
ಅಖಿಲ ಭಾರತ ಕಬ್ಬು ಬೆಳೆಗಾರರ ಸಂಘದ ರಾಷ್ಟ್ರಾದ್ಯಕ್ಷರಾದ ಕಾಂ. ಡಿ ರವೀಂದ್ರನ್ ರವರ ನೇತೃತ್ವದಲ್ಲಿ ಕರ್ನಾಟಕ ಕಬ್ಬು ಬೆಳೆಗಾರರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್ ಎಲ್ ಭರತ್ ರಾಜ್, ರಾಜ್ಯ ಉಪಾಧ್ಯಕ್ಷರಾದ ಶ್ರೀಮಂತ ಬೀರಾದಾರ್, ರಾಜ್ಯ ಮುಖಂಡರಾದ ಗುರಪ್ಪ ಬಸವರಾಜು ಚಾಂದಕವಾಟೆ, ಕೆ ಎನ್ ಮೂರ್ತಿ ರವರು ಕಬ್ಬು ಅಭಿವೃದ್ಧಿ ಆಯುಕ್ತರ ಜೊತೆ ಸಮಾಲೋಚನೆ ಯಲ್ಲಿ ಭಾಗವಹಿಸಿದ್ದರು.
ಇದನ್ನೂ ನೋಡಿ: CITU 16 ನೇ ರಾಜ್ಯ ಸಮ್ಮೇಳದ ಉದ್ಘಾಟನೆಯ ನೇರ ಪ್ರಸಾರ
