ನಾವೆಲ್ಲರೂ ಮನುಷ್ಯರು ಪರಸ್ಪರ ಪ್ರೀತಿಯಿಂದ ಇರಬೇಕು: ಸಿಎಂ

ಬೆಂಗಳೂರು: ಪವಿತ್ರ ಬಕ್ರೀದ್ ಹಬ್ಬದ ಆಚರಣೆ ಹಿನ್ನೆಲೆಯಲ್ಲಿ ನಗರದ ಈದ್ಗಾ ಮೈದಾನದಲ್ಲಿ  ಮುಸ್ಲಿಂ ಬಾಂಧವರಿಂದ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾಯಿತು. ಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗಿಯಾಗಿ ಮಾತನಾಡಿದ ಸಿಎಂ ಸಿದ್ದರಾಮಯ್ಯ  ನಾವೆಲ್ಲರೂ ಮನುಷ್ಯರು ಪರಸ್ಪರ ಪ್ರೀತಿಯಿಂದ ಇರಬೇಕು. ನಮ್ಮಲ್ಲೇ ಕೆಲ ಶಕ್ತಿಗಳಿವೆ, ಇದಕ್ಕೆ ಅಡ್ಡಿಪಡಿಸಲು ಪ್ರಯತ್ನ ಮಾಡುತ್ತಿವೆ. ಅವುಗಳಿಗೆ ಸೊಪ್ಪು ಹಾಕಬಾರದು. ಎಲ್ಲಾ ಪ್ರೀತಿಯಿಂದ ಇದ್ದರೆ, ರಾಜ್ಯವೂ ಅಭಿವೃದ್ಧಿಯಾಗುತ್ತದೆ. ಎಲ್ಲರೂ ಪ್ರೀತಿ ವಿಶ್ವಾಸದಿಂದ ಇರಬೇಕು ಎಂದು ಸಲಹೆ ನೀಡಿದರು.

ಇದನ್ನೂ ಓದಿ:ಸಾರ್ವಜನಿಕರಿಂದ ಸನ್ಮಾನ ರೂಪದಲ್ಲಿ ಹಾರ-ತುರಾಯಿ, ಶಾಲು-ಶಲ್ಯಗಳನ್ನು ಸ್ವೀಕರಿಸಲ್ಲ; ಪುಸ್ತಕಗಳನ್ನು ನೀಡಬಹುದು – ಸಿಎಂ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯರನ್ನ ಮುಸ್ಲಿಂ ಧರ್ಮಗುರುಗಳು ತಮ್ಮ ಸಂಪ್ರದಾಯದಂತೆ ಟೋಪಿ ಹಾಕಿ ಬರಮಾಡಿಕೊಂಡರು. ಇದೇ ವೇಳೆ ಶಾಸಕ ಜಮೀರ್ ಅಹ್ಮದ್ ಖಾನ್ ಪುಸ್ತಕ ನೀಡಿ ಸ್ವಾಗತಿಸಿದರು.

ಸಾವಿರಾರು ಸಂಖ್ಯೆಯ ಮುಸ್ಲಿಂ ಬಾಂಧವರು ಪ್ರಾರ್ಥನೆಯಲ್ಲಿ ಪಾಲ್ಗೊಂಡು, ಅಲ್ಲಾ ಕೃಪೆಗೆ ಪಾತ್ರರಾದರು. ನಂತರ ಮುಸ್ಲಿಂ ಬಾಂಧವರಿಗೆ ಬಕ್ರೀದ್ ಹಬ್ಬದ ಶುಭಾಶಯ ಕೋರಿದ ಸಿಎಂ, ಇಂದು ಪ್ರಾರ್ಥನೆ ಮಾಡಿ ಮನುಕುಲಕ್ಕೆ ಒಳಿತಾಗಲೆಂದು ಕೇಳಿಕೊಂಡಿದ್ದೀರಿ. ಈ ಹಬ್ಬದ ದಿನ ಮುಸ್ಲಿಂ ಬಾಂಧವರೆಲ್ಲ ಸೇರಿದ್ದೀರಿ, ನಾನೂ ನಿಮ್ಮೊಂದಿಗೆ ಭಾಗಿಯಾಗಿರುವುದು ಖುಷಿ ತಂದಿದೆ ಎಂದು ಹೇಳಿದರು. ಸಮುದಾಯದ ಮುಖಂಡರು ಹಾಗೂ ಹಿರಿಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Donate Janashakthi Media

Leave a Reply

Your email address will not be published. Required fields are marked *