ಬೆಂಗಳೂರು: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಈಗಾಗಲೇ ಪೋಕ್ಸೋ ಕೇಸಲ್ಲಿ ಸಂಕಷ್ಟ ಎದುರಿಸುತ್ತಿರುದ್ದು, ಈಗ ಮತ್ತೊಂದು ಮತ್ತೊಂದು ಪ್ರಕರಣದಲ್ಲಿ ಸಿಲುಕಿದ್ದಾರೆ. ಅದೇ ಅಕ್ರಮ ಡಿನೋಟಿಫಿಕೇಷನ್ ಕೇಸಲ್ಲಿ ಲೋಕಾಯುಕ್ತದಿಂದ ಸಮನ್ಸ್ ಜಾರಿಗೊಳಿಸಲಾಗಿದೆ.
ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹಾಗೂ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ವಿರುದ್ಧ ಸಚಿವ ಕೃಷ್ಣಭೈರೇಗೌಡ ಸೇರಿದಂತೆ ವಿವಿಧ ಸಚಿವರು ಅಕ್ರಮ ಡಿನೋಟಿಫಿಕೇಷನ್ ಆರೋಪ ಮಾಡಿದ್ದರು.ಅಲ್ಲದೇ ಅದಕ್ಕೆ ಸಂಬಂಧಿಸಿದಂತೆ ದಾಖಲೆಗಳನ್ನು ಬಿಡುಗಡೆ ಮಾಡಿದ್ದರು.
ಇದನ್ನು ಓದಿ : ಫೇಕ್ ನ್ಯೂಸ್ ಸೃಷ್ಟಿಕರ್ತರಿಗೆ ಕಠಿಣ ಶಿಕ್ಷೆ: ಸಿಎಂ ಸಿದ್ದರಾಮಯ್ಯ
ಈ ಬೆನ್ನಲ್ಲೇ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ವಿರುದ್ಧದ ಡಿನೋಟಿಫಿಕೇಷನ್ ಹಗರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಲೋಕಾಯುಕ್ತದಿಂದ ಸಮನ್ಸ್ ಜಾರಿಗೊಳಿಸಲಾಗಿದೆ.
ಅಂದಹಾಗೇ ಡಿನೋಟಿಫಿಕೇಷ್ ಆರೋಪದಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಎ.1 ಆರೋಪಿಯಾಗಿ ಮಾಡಲಾಗಿದೆ. ಬೆಂಗಳೂರಿನ ಗಂಗಾನಗರದಲ್ಲಿ 1 ಎಕರೆಗೂ ಹೆಚ್ಚು ಭೂಮಿಯನ್ನು ಸತ್ತವರ ಹೆಸರಿನಲ್ಲಿ ಹೆಚ್.ಡಿ ಕುಮಾರಸ್ವಾಮಿ ಹಾಗೂ ಬಿಎಸ್ ಯಡಿಯೂರಪ್ಪ ಅವರು ಡಿನೋಟಿಫಿಕೇಷನ್ ಮಾಡಿದಂತ ಆರೋಪ ಎದುರಿಸುತ್ತಿದ್ದಾರೆ.
ಇದನ್ನು ನೋಡಿ : ಸತ್ತವರ ಹೆಸರಲ್ಲಿ ಭೂಮಿ ಕಬಳಿಸಿದ ಕುಮಾರಸ್ವಾಮಿ, ಯಡಿಯೂರಪ್ಪ – ಕೃಷ್ಣ ಬೈರೇಗೌಡ ಆರೋಪ