ಲೈಂಗಿಕ ಕಿರುಕುಳದ ಆರೋಪ : WFI ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

ನವದೆಹಲಿ: ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಭಾರತೀಯ ಕುಸ್ತಿ ಒಕ್ಕೂಟ(ಡಬ್ಲ್ಯುಎಫ್ಐ)ದ ಅಧ್ಯಕ್ಷ ಹಾಗೂ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ಬಂಧಿಸುವಂತೆ ಒತ್ತಾಯಿಸಿ ಭಾರತದ ಖ್ಯಾತ ಕುಸ್ತಿಪಟುಗಳು ದೆಹಲಿಯ ಜಂತರ್ ಮಂತರ್ನಲ್ಲಿ ಪ್ರತಿಭಟನೆ ಆರಂಭಿಸಿದ್ದಾರೆ.

ದೂರು ನೀಡಿದರೂ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಎಫ್​ಐಆರ್​ ದಾಖಲಿಸದ ಹಿನ್ನೆಲೆಯಲ್ಲಿ ಕುಸ್ತಿಪಟುಗಳು ಜಂತರ್ ಮಂತರ್ನಲ್ಲಿ ಇಂದು ಮತ್ತೆ ಪ್ರತಿಭಟನೆ ಆರಂಭಿಸಿದ್ದಾರೆ. ಕುಸ್ತಿಪಟುಗಳಾದ ವಿನೇಶ್ ಫೋಗಟ್, ಸಾಕ್ಷಿ ಮಲಿಕ್ ಮತ್ತು ಬಜರಂಗ್ ಪುನಿಯಾ ಅವರು, ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ಬಂಧಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಎಎನ್ಐ ವರದಿ ಮಾಡಿರುವಂತೆ ಅಪ್ರಾಪ್ತೆ ಸೇರಿದಂತೆ ಏಳು ಮಹಿಳಾ ಕುಸ್ತಿಪಟುಗಳು ಎರಡು ದಿನಗಳ ಹಿಂದೆ ಕನ್ನಾಟ್ ಪ್ಲೇಸ್ ಪೊಲೀಸ್ ಠಾಣೆಗೆ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ದೂರು ನೀಡಿದ್ದೇವೆ. ಆದರೆ ಇದುವರೆಗೂ ಎಫ್ಐಆರ್ ದಾಖಲಿಸಿಲ್ಲ ಎಂದು ಸಾಕ್ಷಿ ಮಲಿಕ್ ಹೇಳಿದ್ದಾರೆ.ಇದನ್ನೂ ಓದಿ : ತನಿಖೆಗೆ ಸರ್ಕಾರದ ಭರವಸೆ: ಪ್ರತಿಭಟನೆ ಅಂತ್ಯಗೊಳಿಸಿದ ಕುಸ್ತಿಪಟುಗಳು

“ತ್ವರಿತವಾಗಿ ತನಿಖೆ ನಡೆಯಬೇಕೆಂದು ನಾವು ಬಯಸುತ್ತೇವೆ… ಆದರೆ ನಮ್ಮ ಆರೋಪವನ್ನು ಸುಳ್ಳು ಎಂದು ಬಿಂಬಿಸಲಾಗುತ್ತಿದೆ. ಎರಡೂವರೆ ತಿಂಗಳಿನಿಂದ ನಾವು ಕಾಯುತ್ತಿದ್ದೇವೆ. ಆದರೆ ಯಾರೂ ನಮ್ಮ ಅಳಲು ಕೇಳುತ್ತಿಲ್ಲ.ನಾವು ಅಪ್ರಾಪ್ತೆಯ ಹೆಸರು ಬಹಿರಂಗಪಡಿಸಲು ಸಾಧ್ಯವಿಲ್ಲ. ಆಕೆಯ ಹೆಸರು ಮತ್ತು ವೃತ್ತಿ ಜೀವನ ಹಾಳಾಗುತ್ತದೆ. ನಾವು ಕಾಮನ್ವೆಲ್ತ್ ಗೇಮ್ಸ್ 2022 ರಲ್ಲಿ ಪದಕ ಗೆದ್ದಿದ್ದೇವೆ ಎಂದು ಸಾಕ್ಷಿ ಮಲಿಕ್ ಎಎನ್ಐಗೆ ತಿಳಿಸಿದ್ದಾರೆ. “ಬ್ರಿಜ್ ಭೂಷಣ್ ಅವರನ್ನು ಬಂಧಿಸುವವರೆಗೂ ನಾವು ಇಲ್ಲಿಂದ ಕದಲುವುದಿಲ್ಲ” ಎಂದು ಖ್ಯಾತ ಕುಸ್ತಿಪಟು ಬಜರಂಗ್ ಪುನಿಯಾ ಎನ್ಡಿಟಿವಿಗೆ ಹೇಳಿದ್ದಾರೆ.

Donate Janashakthi Media

Leave a Reply

Your email address will not be published. Required fields are marked *