ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನತೆ: ಇರಾನ್‌ನಿಂದ ಅಮೆರಿಕ ಸೇನಾ ನೆಲೆಗಳ ಮೇಲೆ ಮಿಸೈಲ್ ದಾಳಿ ಆರೋಪ

ತೆಹ್ರಾನ್: ಕೆಲವು ತಿಂಗಳುಗಳ ಶಾಂತಿಯ ಬಳಿಕ ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನತೆ ಹೆಚ್ಚುತ್ತಿರುವ ಲಕ್ಷಣಗಳು ಗೋಚರಿಸುತ್ತಿವೆ. ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಕುವೈತ್ ಮತ್ತು ಬಹ್ರೆನ್‌ನಲ್ಲಿರುವ ಅಮೆರಿಕದ ಸೇನಾ ನೆಲೆಗಳ ಮೇಲೆ ಮಿಸೈಲ್ ದಾಳಿ ನಡೆಸಿದೆ ಎಂಬ ವರದಿಗಳು ಹೊರಬಿದ್ದಿವೆ. ಮಧ್ಯಪ್ರಾಚ್ಯ

ಮಾಹಿತಿಯ ಪ್ರಕಾರ, ಬಹ್ರೆನ್‌ನ ಐದನೇ ನೌಕಾ ಕಮಾಂಡ್ ಕೇಂದ್ರ ಇರುವ ಬಂದರ್ ಸಲ್ಮಾನ್ ಹಾಗೂ ಕುವೈತ್‌ನ ಅಲಿ ಅಲ್ ಸೇಲಂ ವಾಯುನೆಲೆಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆದಿರುವುದಾಗಿ ಐಆರ್‌ಜಿಸಿ ಹೇಳಿಕೊಂಡಿದೆ. ದಾಳಿಯನ್ನು ತಡೆಯಲು ಬಂದ ಅಮೆರಿಕದ MQ-9 ಡ್ರೋನ್ ಅನ್ನು ಹೊಡೆದುರುಳಿಸಲಾಗಿದೆ ಎಂಬುದನ್ನೂ ಇರಾನ್ ಹೇಳಿದೆ.

ಇದನ್ನೂ ಓದಿ: ಮತದಾರರ ಪಟ್ಟಿ ಪರಿಷ್ಕರಣೆ ಅಡ್ಡಿ: ECI ಪೋರ್ಟಲ್‌ನಲ್ಲಿ ತಾಂತ್ರಿಕ ಗೊಂದಲ

ಇದರ ಹಿನ್ನೆಲೆ, ಹೊರ್ಮುಜ್ ಜಲಸಂಧಿಯಲ್ಲಿ ಅಮೆರಿಕ ನಡೆಸಿದ ದಾಳಿಗೆ ಪ್ರತಿಕ್ರಿಯೆಯಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಇರಾನ್ ಆರೋಪಿಸಿದೆ. ಮಾತುಕತೆಗಳ ನಡುವೆಯೇ ಅಮೆರಿಕ ದಾಳಿ ಮುಂದುವರಿಸುತ್ತಿದೆ ಎಂದು ಟೀಕಿಸಿದೆ.

ಇದೇ ವೇಳೆ ಇರಾನ್‌ನ ದಕ್ಷಿಣ ಭಾಗಗಳಲ್ಲಿ ಸರಣಿ ಸ್ಫೋಟಗಳ ವರದಿಗಳೂ ಕೇಳಿಬಂದಿವೆ. ಕೆಶ್ಮ್ ದ್ವೀಪ, ಸಿರಿಕ್ ಹಾಗೂ ಬಂದರ್ ಅಬ್ಬಾಸ್ ಪ್ರದೇಶಗಳಲ್ಲಿ ತೈಲ ಸಂಸ್ಕರಣಾ ಘಟಕಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆದಿರಬಹುದು ಎಂಬ ಅನುಮಾನ ವ್ಯಕ್ತವಾಗಿದೆ.

ಜಾಗತಿಕ ರಾಜಕೀಯ ತಜ್ಞರ ಪ್ರಕಾರ, ಈ ಬೆಳವಣಿಗೆಗಳು ಪ್ರದೇಶದಲ್ಲಿ ಮತ್ತೆ ಯುದ್ಧದ ವಾತಾವರಣವನ್ನು ನಿರ್ಮಿಸುವ ಸಾಧ್ಯತೆ ಇದೆ. ಇತ್ತೀಚೆಗೆ ನಡೆದಿದ್ದ ಇರಾನ್‌ನ ಮಾಜಿ ಸುಪ್ರೀಂ ಲೀಡರ್ ಅಂತ್ಯಕ್ರಿಯೆಗಳ ನಂತರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುವ ಸೂಚನೆಗಳು ಕಾಣಿಸುತ್ತಿವೆ.

ಇದನ್ನೂ ನೋಡಿ: ‘ಅರ್ಬುದನ ಡೈರಿ’ | ಕ್ಯಾನ್ಸರ್ ಪೀಡಿತರಿಗೆ ವಿಶ್ವಾಸ ತುಂಬುವ ಅನುಭವ ಕಥನ Janashakthi Media

Donate Janashakthi Media

Leave a Reply

Your email address will not be published. Required fields are marked *