ಹಾಸ್ಟೆಲ್ ವಿದ್ಯಾರ್ಥಿನಿಯರಿಗೆ ರಾಜ್ಯದ ಪ್ರತಿಷ್ಠಿತ ಮಠದ ಸ್ವಾಮೀಜಿಯಿಂದ ಲೈಂಗಿಕ ಕಿರುಕುಳ : ದೂರು ದಾಖಲು

ಮೈಸೂರು: ರಾಜ್ಯದ ಪ್ರತಿಷ್ಠಿತ ಮಠವೊಂದರ ಹಾಸ್ಟೆಲ್​ನಲ್ಲಿ ವಿದ್ಯಾರ್ಥಿನಿಯರಿಗೆ ಸ್ವಾಮೀಜಿಯೊಬ್ಬರು ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಸಂತ್ರಸ್ತ ವಿದ್ಯಾರ್ಥಿನಿಯರು ಮೈಸೂರಿನ ಮಹಿಳಾ ಸಾಂತ್ವನ ಮತ್ತು ಮಕ್ಕಳ ವಸತಿ ಕೇಂದ್ರಕ್ಕೆ ದೂರು ನೀಡಿದ್ದಾರೆ. ದೂರು ನೀಡಿದ ಬಳಿಕ ಒಡನಾಡಿ ಮಹಿಳಾ ಮತ್ತು ಮಕ್ಕಳ ವಸತಿ ಕೇಂದ್ರದ ಸಿಬ್ಬಂದಿ ಶುಕ್ರವಾರ ಮಧ್ಯಾಹ್ನ ವಿದ್ಯಾರ್ಥಿನಿಯರ ಜೊತೆ ಸಮಾಲೋಚನೆ ನಡೆಸಿ, ಮಕ್ಕಳ ಕಲ್ಯಾಣ ಸಮಿತಿಯ ಮುಂದೆ ಹಾಜರುಪಡಿಸಿದ್ದಾರೆ.

ಮಠದ ಉಚಿತ ಹಾಸ್ಟೆಲ್ ನಲ್ಲಿ ಇರುವ ಪ್ರೌಢಶಾಲೆಯ ಕೆಲವು ವಿದ್ಯಾರ್ಥಿನಿಯರ ಮೇಲೆ ಸ್ವಾಮೀಜಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಮಠದ ಪ್ರೌಢಶಾಲೆಯಲ್ಲಿ ಓದುವ ವಿದ್ಯಾರ್ಥಿನಿಯರು ಉಚಿತ ಹಾಸ್ಟೆಲ್ ನಲ್ಲಿ ವಾಸವಾಗಿದ್ದು, ಸರದಿಯಂತೆ ಸ್ವಾಮೀಜಿ ಬಳಿಗೆ ವಿದ್ಯಾರ್ಥಿನಿಯರು ಹೋಗಬೇಕು. ಒಪ್ಪದಿದ್ದಾಗ ಹಾಸ್ಟೆಲ್ ವಾರ್ಡನ್, ಸಿಬ್ಬಂದಿ ಅವಾಚ್ಯವಾಗಿ ನಿಂದಿಸಿ ಕಿರುಕುಳ ನೀಡುತ್ತಾರೆ ಎನ್ನಲಾಗಿದೆ.

ಇದನ್ನೂ ಓದಿ“ನೀನು ಅಸ್ಪೃಶ್ಯ ನನ್ನ ಕಾಲು ಮುಟ್ಟಬೇಡ” ಸಂಸದನನ್ನು ಅವಮಾನಿಸಿದ ಸ್ವಾಮೀಜಿ

ಹಣ್ಣು ಮತ್ತು ಸಿಹಿ ಕೊಟ್ಟು ಆಶೀರ್ವಾದ ಮಾಡುವ ನೆಪದಲ್ಲಿ ಏಕಾಂತಕ್ಕೆ ಕರೆಸಿಕೊಳ್ಳುವ ಸ್ವಾಮೀಜಿ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗುತ್ತಾರೆ. ಕುಟುಂಬದವರ ಮಾಹಿತಿ ಪಡೆದುಕೊಂಡು ಕಷ್ಟದಲ್ಲಿರುವ ಪೋಷಕರಿಗೆ ಸಹಾಯ ಮಾಡುವುದಾಗಿ ಭರವಸೆ ನೀಡಿ ಲೈಂಗಿಕವಾಗಿ ಬಳಸಿಕೊಳ್ಳುತ್ತಾರೆ ಎಂದು ಹೇಳಲಾಗಿದೆ. ಯಾರಿಗಾದರೂ ವಿಷಯ ತಿಳಿಸಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದಾರೆ. ಬಲವಂತದ ಲೈಂಗಿಕ ಕ್ರಿಯೆ ನಂತರ ಸ್ವಾಮೀಜಿ ಸ್ವಚ್ಛತೆಗೆ ಟಿಶ್ಯೂ ಬಳಸುತ್ತಿದ್ದರು. ವಿದ್ಯಾರ್ಥಿನಿಯರು ಬಾತ್ರೂಮ್ ಬಳಸುವಂತೆ ಹೇಳುತ್ತಿದ್ದರು. ಕಿರುಕುಳ ಪ್ರಶ್ನಿಸಿದ್ದಕ್ಕೆ ಕೆಲವು ವಿದ್ಯಾರ್ಥಿನಿಯರನ್ನು ಹಾಸ್ಟೆಲ್ ನಿಂದ ಹೊರಗೆ ಹಾಕಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿದ ಒಡನಾಡಿ ಸೇವಾ ಸಂಸ್ಥೆಯ ನಿರ್ದೇಶಕ ಸ್ಟಾಲಿನ್, ಇದೊಂದು ಸೂಕ್ಷ್ಮ ಹಾಗೂ ಪ್ರತಿಷ್ಠಿತ ಮಠವೊಂದರ ಸ್ವಾಮೀಜಿಗೆ ಸಂಬಂಧಿಸಿದ ಪ್ರಕರಣ. ಆದ್ದರಿಂದ ಎಲ್ಲ ವಿಚಾರಗಳ ಮಾಹಿತಿ ಬಗ್ಗೆ ನೀಡಲು ಸಾಧ್ಯವಿಲ್ಲ. ಆದರೆ, ಈ ಪ್ರಕರಣ ಪೋಕ್ಸೋ ಕಾಯ್ದೆ ವ್ಯಾಪ್ತಿಯಲ್ಲಿ ಬರುವುದರಿಂದ ವಿಳಂಬ ಮಾಡದೇ ಬಾಲಕಿಯರು ನಮ್ಮ ಬಳಿ ಬಂದ ತಕ್ಷಣ ಸಮಾಲೋಚನೆ ನಡೆಸಿ ಮಕ್ಕಳ ಕಲ್ಯಾಣ ಸಮಿತಿ ಮುಂದೆ ಹಾಜರು ಪಡಿಸಿದ್ದೇವೆ ಹಾಗೂ  ಪೊಲೀಸ್ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಮಾಹಿತಿ ನೀಡಲಾಗಿದೆ ಎಂದರು. ಪೊಲೀಸರು ಕೂಡಲೇ ಈ ಮಠದ ಮೇಲೆ ದೂರು ದಾಖಲಿಸಿ, ಸ್ವಾಮೀಜಿಯನ್ನು ಬಂಧಿಸಿಬೇಕು ಎಂಬ ಕೂಗು ಸಾರ್ವಜನಿಕ ವಲಯದಿಂದ ಕೇಳಿ ಬರುತ್ತಿದೆ.

Donate Janashakthi Media

Leave a Reply

Your email address will not be published. Required fields are marked *