ನವದೆಹಲಿ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಲ್ಲಿ ಉಪ ವರ್ಗೀಕರಣಕ್ಕೆ ಅವಕಾಶವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ ಬಹುಮತದಿಂದ ತೀರ್ಪು ನೀಡಿದೆ.
ಏಳು ನ್ಯಾಯಾಧೀಶರ ಪೀಠವು – 6:1 ಬಹುಮತದಿಂದ- ಎಸ್‌ಸಿ/ ಎಸ್‌ಟಿ ವರ್ಗಗಳಲ್ಲಿ ಹೆಚ್ಚು ಹಿಂದುಳಿದವರಿಗೆ ಪ್ರತ್ಯೇಕ ಕೋಟಾಗಳನ್ನು ನೀಡಲು ಉಪ ವರ್ಗೀಕರಣಕ್ಕೆ ಅವಕಾಶವಿದೆ ಎಂದು ಮಹತ್ವದ ತೀರ್ಪಿನಲ್ಲಿ ಅಭಿಪ್ರಾಯಪಟ್ಟಿದೆ.
ಇದನ್ನೂ ಓದಿ: ಜೀವನ ಮರಣ ಹೋರಾಟ ನಡೆಸುತ್ತಿರುವ ಇಬ್ಬರು ಪಿಡಿಒ ಅಧಿಕಾರಿಗಳು
ಉದ್ಯೋಗ ಮತ್ತು ಪ್ರವೇಶದಲ್ಲಿ ಕೋಟಾಕ್ಕಾಗಿ ಎಸ್‌ಸಿ ಮತ್ತು ಎಸ್‌ಟಿ ವರ್ಗಗಳಲ್ಲಿ ಉಪ ವರ್ಗೀಕರಣ ಮಾಡಲು ರಾಜ್ಯಗಳಿಗೆ ಅಧಿಕಾರವಿದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.
ಸುಪ್ರೀಂ ಕೋರ್ಟ್ನ 7 ನ್ಯಾಯಾಧೀಶರ ಪೀಠವು 6:1 ಬಹುಮತದಿಂದ, ಮೀಸಲಾತಿ ವರ್ಗಗಳ ಅಂದರೆ ಪರಿಶಿಷ್ಟ ಜಾತಿಗಳು / ಪರಿಶಿಷ್ಟ ಪಂಗಡಗಳ ಉಪ ವರ್ಗೀಕರಣಕ್ಕೆ ಅನುಮತಿಸಲಾಗಿದೆ ಎಂದು ಅಭಿಪ್ರಾಯಪಟ್ಟಿದೆ.
ಇದನ್ನೂ ನೋಡಿ: ಫುಡ್ ಕ್ರಿಯೇಶನ್ ಪ್ರೈವೇಟ್ ಲಿಮಿಟೆಡ್ ಕಂಪನಿಯ ಕಿರುಕುಳ ವಿರೋಧಿಸಿ ಕಾರ್ಮಿಕರ ಪ್ರತಿಭಟನೆJanashakthi Media