ಸಿಜೆಐ ನಿವಾಸಕ್ಕೆ ಪ್ರಧಾನಿ ಖಾಸಗಿ ಭೇಟಿಗೆ ಅವಕಾಶ ಮಾಡಿಕೊಟ್ಟಿರುವುದು ನಿಜಕ್ಕೂ ಆಘಾತಕಾರಿ: ವಕೀಲ ಪ್ರಶಾಂತ್ ಭೂಷಣ್

ನವದೆಹಲಿ: ಬುಧವಾರ, 11 ಸೆಪ್ಟೆಂಬರ್‌, ರಾತ್ರಿ ಪ್ರಧಾನಿ ನರೇಂದ್ರ ಮೋದಿ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನಿವಾಸದಲ್ಲಿ ಗಣಪತಿ ಪೂಜೆಯಲ್ಲಿ ಪಾಲ್ಗೊಂಡಿದ್ದಾರೆ. ಖಾಸಗಿ 

‘ಸಿಜೆಐ ನಿವಾಸಕ್ಕೆ ಪ್ರಧಾನಿ ಅವರ ಖಾಸಗಿ ಭೇಟಿಗೆ ಅವಕಾಶ ಮಾಡಿಕೊಟ್ಟಿರುವುದು ನಿಜಕ್ಕೂ ಆಘಾತಕಾರಿಯಾಗಿದ್ದು, ಕೆಟ್ಟ ಸಂದೇಶವನ್ನು ರವಾನಿಸುತ್ತದೆ’ ಎಂದು ಖಂಡಿಸಿ, ಹಿರಿಯ ವಕೀಲ ಪ್ರಶಾಂತ್ ಭೂಷಣ್ ಹೇಳಿದ್ದಾರೆ.

ಈ ಕುರಿತು ಸಾಮಾಜಿಕ ಮಾಧ್ಯಮ ‘ಎಕ್ಸ್‌’ನಲ್ಲಿ ಬರೆದುಕೊಂಡಿರುವ ಪ್ರಶಾಂತ್ ಭೂಷಣ್, ‘ಇದು ಕಾರ್ಯಾಂಗದ ನಾಗರಿಕರ ಮೂಲಭೂತ ಹಕ್ಕನ್ನು ರಕ್ಷಿಸುವ ಜವಾಬ್ದಾರಿ ಹೊಂದಿರುವ ನ್ಯಾಯಾಂಗಕ್ಕೆ ಕೆಟ್ಟ ಸಂದೇಶವನ್ನು ರವಾನಿಸುತ್ತದೆ’ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಅರವಿಂದ್ ಕೇಜ್ರಿವಾಲ್ ಸಲ್ಲಿಸಿದ್ದ ಜಾಮೀನು ಅರ್ಜಿಯ ತೀರ್ಪು ಸೆ.13 ಕ್ಕೆ ಮುಂದೂಡಿಕೆ

‘ಸರ್ಕಾರವು ಸಂವಿಧಾನದ ಪರಿಧಿಯಲ್ಲಿ ಇದ್ದುಕೊಂಡು ಕಾರ್ಯನಿರ್ವಹಿಸಬೇಕು. ಅದಕ್ಕಾಗಿಯೇ ಕಾರ್ಯಾಂಗ ಮತ್ತು ನ್ಯಾಯಾಂಗದ ನಡುವೆ ಒಂದು ಕೈ ಅಗಲದಷ್ಟು ಅಂತರ ಕಾಯ್ದುಕೊಳ್ಳಬೇಕು’ ಎಂದು ಅಭಿಪ್ರಾಯಪಟ್ಟಿದ್ದಾರೆ.

ಸಿಜೆಐ ಡಿ.ವೈ.ಚಂದ್ರಚೂಡ್ ನಿವಾಸದಲ್ಲಿ ನಡೆದ ಖಾಸಗಿ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಅವರು ಗಣಪತಿ ಪೂಜೆಯಲ್ಲಿ ಭಾಗಿಯಾಗಿದ್ದರು. ಈ ವೇಳೆ ಚಂದ್ರಚೂಡ್ ಅವರ ಪತ್ನಿ ಇದ್ದರು. ಮಹಾರಾಷ್ಟ್ರದ ಸಾಂಪ್ರದಾಯಿಕ ಉಡುಪನ್ನು ಧರಿಸಿದ್ದ ಮೋದಿ, ‘ಗಣೇಶ ದೇವರು ನಮಗೆಲ್ಲರಿಗೂ ಸಂತೋಷ, ಸಮೃದ್ಧಿ ಮತ್ತು ಆರೋಗ್ಯವನ್ನು ನೀಡಲಿ’ ಎಂದು ಸಾಮಾಜಿಕ ಮಾಧ್ಯಮದಲ್ಲಿ ಬರೆದುಕೊಂಡಿದ್ದರು.

ಇದನ್ನೂ ನೋಡಿ: ಬಿಸಿ ಪ್ರಳಯದ ಹೊಸ್ತಿಲಲ್ಲಿ ಕೃಷಿಕರ ಸಮಾಜಕ್ಕೆ ಹೊಸ ಸವಾಲುಗಳು – ನಾಗೇಶ ಹೆಗಡೆ Janashakthi Media

Donate Janashakthi Media

Leave a Reply

Your email address will not be published. Required fields are marked *