ನಿರಂತರ ಮಳೆಯಿಂದಾಗಿ ಅಮರನಾಥ ಯಾತ್ರೆ ಮತ್ತೆ ಸ್ಥಗಿತ

ಜಮ್ಮು: ನಿರಂತರ ಮಳೆಯಿಂದಾಗಿ ಮತ್ತು ಪ್ರತಿಕೂಲ ಹವಾಮಾನದಿಂದಾಗಿ ಇಲ್ಲಿಯ ರಾಂಬನ್‌ ರಾಷ್ಟ್ರೀಯ ಹೆದ್ದಾರಿಯ ಪರಿಸ್ಥಿತಿ ಹದಗೆಟ್ಟಿದ್ದು ಭಾನುವಾರ ಮರು ಆರಂಭಗೊಂಡಿದ್ದ ಅಮರನಾಥ ಯಾತ್ರೆಯನ್ನು ಸೋಮವಾರ ಮತ್ತೆ ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಇದನ್ನೂ ಓದಿ:ಉತ್ತರ ಪ್ರದೇಶ: ಭಾರೀ ಮಳೆಯಿಂದ 24 ಗಂಟೆಯಲ್ಲಿ 36 ಮಂದಿ ಸಾವು

ಭಗವತಿ ಕ್ಯಾಂಪ್‌ನಲ್ಲಿ ಆರು ಸಾವಿರಕ್ಕೂ ಹೆಚ್ಚು ಯಾತ್ರಾರ್ಥಿಗಳು ಹಾಗೂ ಚಂದರೆಕೋಟ್‌ ಕ್ಯಾಂಪ್‌ನಲ್ಲಿ ಐದು ಸಾವಿರ ಯಾತ್ರಿಕರು ಸಿಲುಕಿಕೊಂಡಿದ್ದಾರೆ. ಹೊಸದಾಗಿ ಯಾವುದೇ ತಂಡಗಳಿಗೆ ಜಮ್ಮು ಕಾಶ್ಮೀರದ ಕ್ಯಾಂಪ್‌ಗಳಿಗೆ ಬರಲು ಅವಕಾಶ ನೀಡಲಾಗುತ್ತಿಲ್ಲ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

40ಸಾವಿರಕ್ಕೂ ಹೆಚ್ಚು ಯಾತ್ರಾರ್ಥಿಗಳು ಶನಿವಾರ ಯಾತ್ರೆಯನ್ನು ಸ್ಥಗಿತಗೊಳಿಸುವ ಮೊದಲು ಏಳು ತಂಡಗಳಲ್ಲಿ ಜಮ್ಮುವಿನಿಂದ ಕಾಶ್ಮೀರಕ್ಕೆ ತೆರಳಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Donate Janashakthi Media

Leave a Reply

Your email address will not be published. Required fields are marked *