ಅಮೆಜಾನ್ ಸುಗಂಧ ದ್ರವ್ಯ ಕಾರ್ಖಾನೆಯಲ್ಲಿ ಅಗ್ನಿ ಅವಘಡ

ಮಂಳೂರು: ನಗರದ ಬೈಕಂಪಾಡಿ ಕೈಗಾರಿಕಾ ವಲಯದಲ್ಲಿ ಸೆಪ್ಟೆಂಬರ್‌ 10 ಬೆಳಿಗ್ಗೆ 5 ಗಂಟೆ ಸುಮಾರಿಗೆ ಅಗ್ನಿ ಅವಘಡ ಸಂಭವಿಸಿದೆ. ಅಮೆಜಾನ್ ಸುಗಂಧ ದ್ರವ್ಯ ಫ್ಯಾಕ್ಟರಿ ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿದೆ.

ಅಮೆಜಾನ್ ಸುಗಂಧ ದ್ರವ್ಯ ಕಾರ್ಖಾನೆಗೆ ಬೆಳಗಿನ ಜಾವ 5 ಗಂಟೆಗೆ ಅಗ್ನಿ ಅವಘಡ ಸಂಭವಿಸಿದೆ. ತಾಂತ್ರಿಕ ಸಮಸ್ಯೆಯಿಂದ ಈ ಒಂದು ಅಗ್ನಿ ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಕೋಲ್ಕತ್ತಾ | ಗಡಿ ಭಾಗದ ಬಂಗಾಳಿಗರು ಶಾಂತಿಯಿಂದ ಇರುವಂತೆ ಸಿಎಂ ಮಮತಾ ಬ್ಯಾನರ್ಜಿ ಮನವಿ

ತಕ್ಷಣ ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ, ಬೆಂಕಿ ನಂದಿಸುವ ಕಾರ್ಯ ನಡೆಸಿದರು. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಸಾವು ನೋವು ಸಂಭವಿಸಿಲ್ಲ ಎಂದು ತಿಳಿದುಬಂದಿದೆ.

ಈ ಸಂಬಂಧ ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಗ್ನಿ ಅವಘಡದ ಕಾರಣ ಪತ್ತೆಹಚ್ಚಲು ತನಿಖೆ ಆರಂಭಿಸಿದ್ದಾರೆ.

ಇದನ್ನೂ ನೋಡಿ: ಗೌರಿ ನೆನಪು : ವಿಚಾರಗಳನ್ನು ಕೊಲ್ಲಲು ಸಾಧ್ಯವಿಲ್ಲ – ಡಾ. ಎಂ.ಎಸ್. ಆಶಾದೇವಿ – Janashakthi Media

Donate Janashakthi Media

Leave a Reply

Your email address will not be published. Required fields are marked *