ಹರಿಯಾಣದಲ್ಲಿ 3 ಕಡೆ ಪ್ರತ್ಯೇಕ ಅಪಘಾತ; 20ಕ್ಕೂ ಹೆಚ್ಚು ಮಂದಿ ಸಾವು

ಚಂಡೀಗಢ: ಹರಿಯಾಣದಲ್ಲಿ ಮೂರು ಕಡೆ ಪ್ರತ್ಯೇಕ ಅಪಘಾತವಾಗಿದ್ದು, 17 ಮಂದಿ ಸಾವನ್ನಪ್ಪಿದ್ದು, 20 ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ. ಅಂಬಾಲ ಜಿಲ್ಲೆಯ ಕಕ್ಕರ್ ಮಜ್ರಾ ಗ್ರಾಮದ ಬಳಿ ಬಸ್‌ಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಸಾವಿನ ಪ್ರಮಾಣ ಹೆಚ್ಚಾಗಿದೆ.

ಅಂಬಾಲಾದ ಶಹಜಾದ್‌ಪುರದ ಕಕ್ಕರ್ ಮಜ್ರಾ ಗ್ರಾಮದ ಬಳಿ ಖಾಸಗಿ ಬಸ್ಸು ಅಪಘಾತಕ್ಕೀಡಾಗಿ ಎಂಟು ಜನರು ಮೃತಪಟ್ಟಿದ್ದಾರೆ. ಬಸ್ಸು ಉತ್ತರ ಪ್ರದೇಶದ ಬರೇಲಿಯಿಂದ ಹಿಮಾಚಲ ಪ್ರದೇಶದ ಬಡ್ಡಿಗೆ ತೆರಳುತ್ತಿತ್ತು ಎಂದು ವರದಿಯಾಗಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ.

ಗಾಯಾಳುಗಳನ್ನು ಅಂಬಾಲಾ ಸಿಟಿ ಮತ್ತು ನಾರೈಂಗರ್‌ನಲ್ಲಿರುವ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಬಸ್ಸಿನಲ್ಲಿದ್ದವರಲ್ಲಿ ಹೆಚ್ಚಿನವರು ನಿರ್ಮಾಣ ಕಾಮಗಾರಿಗಳನ್ನು ಕೈಗೊಳ್ಳುವ ವಲಸೆ ಕಾರ್ಮಿಕರು ಎಂದು ಪೊಲೀಸರು ವರದಿ ಮಾಡಿದ್ದಾರೆ.

ನಸುಕಿನಲ್ಲಿ ಎನ್‌ಎಚ್-44 ರ ಸಮಲ್ಖಾದ ಜತಿಪುರ್ ಗ್ರಾಮದ ಬಳಿ ಸಂಭವಿಸಿದ ಅಪಘಾತ ಸಂಭವಿಸಿದೆ. ಉಝಾ ಗ್ರಾಮದ ನಿವಾಸಿಗಳು ಟ್ರ್ಯಾಕ್ಟರ್‌ನಲ್ಲಿ ಸಮಲ್ಖಾದ ಚುಲ್ಕಾನಾ ಗ್ರಾಮದ ಖತು ಶ್ಯಾಮ್ ಧಾಮಕ್ಕೆ ಭೇಟಿ ನೀಡಿ ಊರಿಗೆ ವಾಪಸ್‌ ಆಗುತ್ತಿದ್ದಾಗ ಈ ಘಟನೆ ನಡೆದಿದೆ. ಅಪಘಾತದಿಂದ ಮೂವರು ಮಹಿಳೆಯರು ಸಾವನ್ನಪ್ಪಿದ್ದು, 16 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮತ್ತೊಂದು ಪ್ರಕರಣ ಫರಿದಾಬಾದ್-ಗುರುಗ್ರಾಮ್ ಹೆದ್ದಾರಿಯ ಮಾಂಗರ್ ಚೌಕ್ ಬಳಿ ನಡೆದಿದೆ. ಇಲ್ಲಿ ಕಾರು ಮತ್ತು ಟ್ರಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 6 ಮಂದಿ ಮೃತಪಟ್ಟಿದ್ದಾರೆ. ಮೃತರು ಪಲ್ವಾಲ್ ಮೂಲದವರಾಗಿದ್ದು, ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಗುರುಗ್ರಾಮದಿಂದ ವಾಪಸಾಗುತ್ತಿದ್ದರು.

ಪೊಲೀಸರು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸಿವಿಲ್ ಆಸ್ಪತ್ರೆಗೆ ರವಾನಿಸಿದ್ದಾರೆ. ಪ್ರಕರಣ ದಾಖಲಾಗಿದ್ದು, ತನಿಖೆ ಆರಂಭಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇಲ್ಲಿ ಕ್ಲಿಕ್‌ ಮಾಡಿ : ಜನಶಕ್ತಿ ಮೀಡಿಯಾ ವಾಟ್ಸ್‌ಪ್‌ ಗುಂಪು ಸೇರಲು ಈ ಲಿಂಕ್‌ ಕ್ಲಿಕ್‌ ಮಾಡಿ

Donate Janashakthi Media

Leave a Reply

Your email address will not be published. Required fields are marked *