ಲಿಡ್ಕರ್ ರಾಯಭಾರಿಯಾಗಿ ಡಾಲಿ ಧನಂಜಯ್| ಸಿಎಂ ಸಿದ್ದರಾಮಯ್ಯ ಅಧಿಕೃತ ಘೋಷಣೆ

ಬೆಂಗಳೂರುಲಿಡ್ಕರ್ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ನಟ ಡಾಲಿ ಧನಂಜಯ್  ರವರನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಅಧಿಕೃತವಾಗಿ ಘೋಷಣೆ ಮಾಡಿದರು. ಅಧಿಕೃತ 

ಬೆಂಗಳೂರಿನ ವಿಧಾನಸೌಧದ ಮುಂದೆ ನಡೆದ ಡಾ.ಬಿ ಆರ್ ಅಂಬೇಡ್ಕರ್ ಅವರ ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ಅಧಿಕೃತವಾಗಿ ಲಿಡ್ಕರ್ ಉತ್ಪನ್ನಕ್ಕೆ ಡಾಲಿ ಧನಂಜಯ ರಾಯಭಾರಿಯಾಗಿ ಘೋಷಣೆ ಮಾಡಲಾಗಿದೆ. ಈ ವೇಳೆ ಸಿಎಂ ಸಿದ್ದರಾಮಯ್ಯ, ಸಚಿವರಾದ ಹೆಚ್ ಸಿ ಮಹದೇವಪ್ಪ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಲಿಡ್ಕರ್ ನಲ್ಲಿ 50 ಸಾವಿರಕ್ಕೂ ಹೆಚ್ಚು ಚರ್ಮ ಕುಶಲಕರ್ಮಿಗಳ ಕುಟುಂಬವಿದ್ದು, ಚರ್ಮ ಕೈಗಾರಿಕೆಯನ್ನು ಮತ್ತಷ್ಟು ಅಭಿವೃದ್ಧಿ ಪಡಿಸಲು ಮುಂದಾಗಿರುವ ಸರ್ಕಾರ ಸ್ಯಾಂಡಲ್‌ವುಡ್ ಸ್ಟಾರ್ ಧನಂಜಯ್ ಅವರನ್ನು ರಾಯಾಭಾರಿಯಾಗಿ ನೇಮಕ ಮಾಡಿದೆ.ಅಧಿಕೃತ 

ಇದನ್ನೂ ಓದಿ: 5 ಕೋಟಿ ವೆಚ್ಚದಲ್ಲಿ‌ ಇಟಗಿ-ಸಾಸಲವಾಡ ಏತ ನೀರಾವರಿ ಯೋಜನೆ ಪೂರ್ಣ | ಸಚಿವ ರಾಮಲಿಂಗಾ ರೆಡ್ಡಿ

ಡಾ.ಬಾಬು ಜಗಜೀವನ ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ (ಲಿಡ್ಕರ್)ಕ್ಕೆಇದೇ ಮೊದಲ ಬಾರಿಗೆ ರಾಯಭಾರಿಯನ್ನ  ಆಯ್ಕೆ ಮಾಡಿದೆ. ಖ್ಯಾತ ನಟ‌ ಡಾಲಿ ಧನಂಜಯ್ ಲಿಡ್ಕರ್ ಗೆ  ರಾಯಭಾರಿ ಆಗಿದ್ದಾರೆ. ಮೊದಲ ಬಾರಿಗೆ ಡಾಲಿ ಸರ್ಕಾರದ ಜಾಹೀರಾತಿನಲ್ಲಿ ಮಿಂಚುವ ಮೂಲಕ ಲಿಡ್ಕರ್ ಬ್ರಾಂಡ್ ಪ್ರಮೋಟ್ ಮಾಡಲಿದ್ದಾರೆ. ಅಧಿಕೃತ 

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಲಿಡ್ಕರ್ ವ್ಯವಸ್ಥಾಪಕ ನಿರ್ದೇಶಕಿ ಕೆ.ಎಂ.ಎಸ್ ವಸುಂಧರಾ, ಧನಂಜಯ್ ಅವರು ರಾಯಭಾರಿಯಾಗಿದ್ದು ತುಂಬಾ ಖುಷಿ ಇದೆ. ಅವರು ಸ್ಯಾಂಡಲ್‌ವುಡ್‌ನ ಲೀಡಿಂಗ್ ನಟ ಎಲ್ಲಾ ವರ್ಗದ ಜನರಿಗೆ ತಲುಪುವ ಕಲಾವಿದ ಹಾಗಾಗಿ ಅವರನ್ನ ಆಯ್ಕೆ ಮಾಡಿದ್ದೇವೆ. ಸಚಿವರು ಕೂಡ ಇದಕ್ಕೆ ಒಪ್ಪಿಗೆ ಸೂಚಿಸಿದ್ದು ಆದಷ್ಟು ಬೇಗ ಜಾಹೀರಾತಿನ ಚಿತ್ರೀಕರಣ ನಡೆಯಲಿದೆ ಎಂದಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರು ಮಾತನಾಡಿ, ‘ಖ್ಯಾತ ನಟ ಡಾಲಿ ಧನಂಜಯ ಅವರನ್ನು ಲಿಡ್ಕರ್ ರಾಯಭಾರಿಯಾಗಿ ಆಯ್ಕೆ ಮಾಡಿದ್ದೀವಿ. ಅವರು ಉಚಿತವಾಗಿ ರಾಯಭಾರಿ ಕೆಲಸ ಮಾಡುತ್ತಿದ್ದಾರೆ. ಸಾಮಾಜಿಕ ಕಳಕಳಿ ಇರುವ ನಟ, ಅವರನ್ನು ರಾಯಭಾರಿಯನ್ನಾಗಿ ಮಾಡಿದ್ದು ಅರ್ಥಪೂರ್ಣವಾಗಿದೆ. ಇದರಿಂದ ಚರ್ಮ ಉದ್ಯಮಕ್ಕೆ ಉತ್ತೇಜನ ಆಗುತ್ತೆ’ ಎಂದು ಹೇಳಿದರು. ಲಿಡ್ಕರ್‌ ಕೇಂದ್ರಕ್ಕೆ ಭೇಟಿ ನೀಡಿದ ನಟ ಧನಂಜಯ ಅವರಿಗೆ ವಿಶೇಷವಾಗಿ ತಯಾರಿಸಿದ್ದ ಲಿಡ್ಕರ್ ಚಪ್ಪಲಿಯನ್ನು ಉಡುಗೊರೆಯಾಗಿ ನೀಡಿದರು. ಧನಂಜಯವರಿಗಾಗಿಯೇ ವಿಶೇಷವಾಗಿ ಚಪ್ಪಲಿಯನ್ನು ತಯಾರಿಸಲಾಗಿತ್ತು. ಡಾಲಿ ಹೊಸ ಚಪ್ಪಲಿಯನ್ನು ಧರಿಸಿ ಅಲ್ಲಿನ ಕುಶಲಕರ್ಮಿಗಳ ಜತೆ ಮಾತನಾಡಿ ಖುಷಿಪಟ್ಟರು. ಅಧಿಕೃತ 

ಧನಂಜಯ್‌ ಅವರು ಸದ್ಯ ಸಾಲು ಸಾಲು ಸಿನಿಮಾಗಲ್ಲಿ ಬ್ಯುಸಿಯಾಗಿದ್ದಾರೆ. ಇತ್ತೀಚಿಗಷ್ಟೆ ಧನಂಜಯ್ ತಮ್ಮದೇ ಡಾಲಿ ಸಂಸ್ಥೆ ನಿರ್ಮಾಣದ ‘ಟಗರು ಪಲ್ಯ’ ಸಿನಿಮಾ ರಿಲೀಸ್ ಮಾಡಿದ್ದರು. ಟಗರು ಪಲ್ಯ ಸಿನಿಮಾಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ನಿರ್ಮಾಣದ ಜೊತೆಗೆ ಡಾಲಿ ಅನೇಕ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಕನ್ನಡದ ಜೊತೆಗೆ ತೆಲುಗಿನ ಪುಷ್ಪ-2 ಸಿನಿಮಾದಲ್ಲೂ ಕಾಣಿಸಿಕೊಂಡಿದ್ದಾರೆ. ಈ ನಡುವೆ ಜಾಹೀರಾತು ಲೋಕಕ್ಕೆ ಡಾಲಿ ಲಗ್ಗೆ ಇಟ್ಟಿರುವುದು ಅವರ ಅಭಿಮಾನಿ ಬಳಗಕ್ಕೆ ಸಂತಸ ತಂದಿದೆ. ಅಧಿಕೃತ 

ವಿಡಿಯೋ ನೋಡಿ: ಭಾರತವು ಪ್ಯಾಲೆಸ್ತೀನ್ ಪರ ನಿಲ್ಲಬೇಕು : ಸದಾಗ್ರಹದ ಸಭೆ ಆಗ್ರಹ Janashakthi Media

Donate Janashakthi Media

Leave a Reply

Your email address will not be published. Required fields are marked *