ಬೆಂಗಳೂರು: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಭಾವಚಿತ್ರವನ್ನು ಕರ್ನಾಟಕ ಹೈಕೋರ್ಟ್ ನ ಬೆಂಗಳೂರು ಪ್ರಧಾನ ಪೀಠ, ಧಾರವಾಡ, ಕಲಬುರಗಿ ಪೀಠ, ಜಿಲ್ಲಾ ಕೋರ್ಟ್ ಗಳು ಮತ್ತು ಎಲ್ಲಾ ವಿಚಾರಣಾ ಕೋರ್ಟ್ ಗಳಲ್ಲಿ ಅಳವಡಿಸಲು ಹೈಕೋರ್ಟ್ ತೀರ್ಮಾನಿಸಿದೆ. ರಾಜ್ಯದ
ರಾಜ್ಯದ ಎಲ್ಲಾ ಕೋರ್ಟ್ ಹಾಲ್ ಗಳಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರ ಹಾಕಬೇಕು ಎಂದು ಸೂಚಿಸಿ ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ನೋಟಿಫಿಕೇಶನ್ ಹೊರಡಿಸಿದ್ದಾರೆ.
ಇದನ್ನೂ ಓದಿ: ಕರ್ನಾಟಕದ ಐಟಿ ವಲಯದಲ್ಲಿ ಆಧುನಿಕ ಗುಲಾಮಗಿರಿ ಹೇರಿಕೆಗೆ ಮತ್ತೆ ಅಮಾನವೀಯ ಪ್ರಯತ್ನ: KITU
ರಾಜ್ಯ ಹೈಕೋರ್ಟ್ ನ ಮೂರು ಪೀಠಗಳು, ಜಿಲ್ಲಾ ನ್ಯಾಯಾಲಯಗಳಲ್ಲಿ ಅಂಬೇಡ್ಕರ್ ಅವರ ಭಾವಚಿತ್ರ ಹಾಕಬೇಕು ಎಂದು ಸಾರ್ವಜನಿಕರು, ವಕೀಲರು, ವಿವಿಧ ಸಂಘ-ಸಂಸ್ಥೆಗಳು ಮನವಿ ಮಾಡಿದ್ದರು. ಇದೇ ವಿಚಾರವಾಗಿ ರಾಜ್ಯ ಸರ್ಕಾರ ಕಾಲಕ್ಕೆ ಪತ್ರ ಬರೆದಿತ್ತು.
ಈ ಎಲ್ಲಾ ಅಂಶಗಳನ್ನು ಪರಿಗಣಿಸಿ ಮತ್ತು 2025ರ ಏಪ್ರಿಲ್ 26ರಂದು ನಡೆದ ಹೈಕೋರ್ಟ್ ನ ಎಲ್ಲಾ ನ್ಯಾಯಮೂರ್ತಿಗಳ ಸಭೆಯಲ್ಲಿ ಕೈಗೊಂಡ ನಿರ್ಣಯದಂತೆ ಅಂಬೇಡ್ಕರ್ ಭಾವಚಿತ್ರ ಹಾಕಬೇಕು ಎಂದು ಸೂಚಿಸಿ ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಕೆ.ಎಸ್. ಭರತ್ ಕುಮಾರ್ ನೋಟಿಫಿಕೇಶನ್ ಹೊರಡಿಸಿದ್ದಾರೆ.
ಇದನ್ನೂ ನೋಡಿ: ಹಲ್ಮಿಡಿ ಶಾಸನದಿಂದ ಬೂಕರ್‌ವರೆಗೆ ಹಾಸನದ ಕೊಡುಗೆ: ಬರಗೂರುJanashakthi Media
