ಓಲಾ, ಉಬರ್ ರೀತಿಯಲ್ಲಿ ಆಂಬುಲೆನ್ಸ್ ಬುಕ್ಕಿಂಗ್‌; ಸರ್ಕಾರದಿಂದಲೇ ದರ ನಿಗದಿ

Please follow and like us:
ಕಾರವಾರ: ಟ್ಯಾಕ್ಸಿ, ಆಟೋ ಬುಕ್ ಮಾಡುವ ರೀತಿಯಲ್ಲಿ ಓಲಾ, ಉಬರ್ ರೀತಿಯಲ್ಲಿ ಆಯಪ್ ಬಳಸಿ ಇನ್ನು ಮುಂದೆ ರಾಜ್ಯದಲ್ಲಿ ಆಂಬುಲೆನ್ಸ್ ಗಳನ್ನು ಕೂಡ ಬುಕ್ ಮಾಡಿ ಕರೆಸಬಹುದಾಗಿದೆ. ಈ ಆಂಬುಲೆನ್ಸ್ ಗಳಿಗೆ ಸರ್ಕಾರದಿಂದಲೇ ದರ ನಿಗದಿ ಮಾಡಲಾಗುವುದು ಎಂದು ಜುಲೈ 30ರಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಓಲಾ

ಈಗಾಗಲೇ ಗುರು ಗ್ರಾಮದಲ್ಲಿ ಖಾಸಗಿ ಕಂಪನಿಯೊಂದು ಇಂತಹ ಸೇವೆ ಆರಂಭಿಸಿದ್ದು ಅದೇ ಮಾದರಿಯಲ್ಲಿ ರಾಜ್ಯ ಸರ್ಕಾರ ಕೂಡ ಆಂಬುಲೆನ್ಸ್ ಸೇವೆಯನ್ನು ಕಲ್ಪಿಸಲು ಮುಂದಾಗಿದೆ.

ಇದನ್ನೂ ಓದಿ: ಖಾಸಗಿ ವೆಚ್ಚಗಳ ಅಸಮಾನತೆಯಲ್ಲಿ ಇಳಿಕೆಯೆಂದು ಹೆಮ್ಮೆ ಪಡುವುದು ನಿರ್ದಯತೆಯ ಪರಮಾವಧಿ

ಮುಂದಿನ ಅಧಿವೇಶನದಲ್ಲಿ ಈ ಕುರಿತಾದ ಮಸೂದೆ ಮಂಡಿಸಲಾಗುವುದು. ಆಯಪ್ ನಲ್ಲಿಯೇ ಆಂಬುಲೆನ್ಸ್ ಬುಕಿಂಗ್ ಗೆ ಅವಕಾಶ ಕಲ್ಪಿಸಲಾಗುವುದು. ರಾಜ್ಯದಲ್ಲಿ ಅನೇಕ ಕಂಪನಿಗಳು ಆಂಬುಲೆನ್ಸ್ ಸೇವೆ ಒದಗಿಸುತ್ತಿದ್ದು, ಅವುಗಳ ಬಗ್ಗೆ ಸಾಕಷ್ಟು ದೂರುಗಳಿವೆ. ಹೀಗಾಗಿ ಆಂಬುಲೆನ್ಸ್ ಗಳಲ್ಲಿ ಯಾವ ವ್ಯವಸ್ಥೆ ಇರಬೇಕು.

ದರ ಎಷ್ಟಿರಬೇಕು ಎಂಬುದನ್ನು ಸರ್ಕಾರದಿಂದ ಕಾಯ್ದೆ ರೂಪಿಸಲಾಗುವುದು. ಶಾಸನ ಜಾರಿಯಾದ ನಂತರ ಆಂಬುಲೆನ್ಸ್ ಸೇವೆ ಒದಗಿಸುವವರು ಖಾಸಗಿ ಆಸ್ಪತ್ರೆಗಳ ರೀತಿ ನೋಂದಣಿ ಮಾಡಿಕೊಳ್ಳಬೇಕು. ಆಂಬುಲೆನ್ಸ್ ಗಳಿಗೆ ಸೇವೆಯ ಆಧಾರದಲ್ಲಿ ಸರ್ಕಾರವೇ ದರ ನಿಗದಿ ಮಾಡಲಿದೆ. ಆಯಪ್ ನಲ್ಲಿ ಬುಕ್ ಮಾಡಬೇಕಿದೆ.

ಆಂಬುಲೆನ್ಸ್ ಅಗತ್ಯ ಇರುವವರು ಮೊಬೈಲ್ ಆಯಪ್ ಬಳಸಿಕೊಂಡು ಸೇವೆ ಪಡೆದುಕೊಳ್ಳಬಹುದಾಗಿದೆ. ರಾಜ್ಯದಲ್ಲಿನ ವೈದ್ಯಕೀಯ ಆಂಬುಲೆನ್ಸ್ ಸೇವೆಯನ್ನು ಇನ್ನು ಮುಂದೆ ಕರ್ನಾಟಕ ಖಾಸಗಿ ವೈದ್ಯ ಸಂಸ್ಥೆ ಕಾನೂನಿನಡಿ ತರಲು ನಿರ್ಧರಿಸಲಾಗಿದ್ದು, ಬರುವ ವಿಧಾನಸಭೆ ಅಧಿವೇಶನದಲ್ಲಿ ಮಸೂದೆ ಮಂಡಿಸಿ ಕಾಯ್ದೆ ತರಲಾಗುವುದು ಎಂದು ಹೇಳಲಾಗಿದೆ.

ಇದನ್ನೂ ನೋಡಿ: ಧರ್ಮಸ್ಥಳದಲ್ಲಿನ ಕೊಲೆ ಅತ್ಯಾಚಾರಗಳ ಹಿಂದೆ ಇರುವವರು ಯಾರು? ಸತ್ಯ ಹೊರ ಬರಲಿ…

Please follow and like us:
Donate Janashakthi Media

Leave a Reply

Your email address will not be published. Required fields are marked *