ಭದ್ರಾ ಮೇಲ್ದಂಡೆ ಯೋಜನೆಗೆ ಶೀಘ್ರವೇ ಹಣ ಬಿಡುಗಡೆ ಮಾಡುವುದಾಗಿ ಅಮಿತ್ ಶಾ ಭರವಸೆ: ಗೋವಿಂದ ಕಾರಜೋಳ

ಚಿತ್ರದುರ್ಗ: ರಾಜ್ಯದ ಮಹತ್ವಾಕಾಂಕ್ಷೆಯ ಮೇಲ್ದಂಡೆ ಭದ್ರ ಯೋಜನೆ (ಯುಬಿಪಿ)ಗೆ ಆದಷ್ಟು ಶೀಘ್ರವೇ ಕೇಂದ್ರ ಸರ್ಕಾರ ಅನುದಾನ ಬೇಗ ಬಿಡುಗಡೆ ಮಾಡುವುದಾಗಿ ಕೇಂದ್ರ ಗೃಹ ಸಚಿವರು ಭರವಸೆ ನೀಡಿದ್ದಾರೆ ಎಂದು ಮಾಜಿ ಉಪಮುಖ್ಯಮಂತ್ರಿ ಮತ್ತು ಸಂಸದ ಗೋವಿಂದ್ ಎಂ ಕಾರಜೋಳ ಹೇಳಿದ್ದಾರೆ.

ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಜೊತೆ ದೂರವಾಣಿಯಲ್ಲಿ ಮಾತನಾಡಿದ ಕಾರಜೋಳ, ನಾನು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ನವದೆಹಲಿಯ ಸಂಸತ್ ಭವನದಲ್ಲಿರುವ ಅವರ ಕಚೇರಿಯಲ್ಲಿ ಭೇಟಿಯಾಗಿದ್ದ. ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ- ವೇಗವರ್ಧಿತ ನೀರಾವರಿ ಪ್ರಯೋಜನ ಕಾರ್ಯಕ್ರಮ (ಪಿಎಂಕೆಎಸ್‌ವೈ-ಎಐಬಿಪಿ) ಯೋಜನೆಯಡಿ ಭದ್ರ ಮೇಲ್ದಂಡೆ ಯೋಜನೆಯ ಅಭಿವೃದ್ಧಿಗೆ ಹಣ ಬಿಡುಗಡೆ ಮಾಡುವ ಬಗ್ಗೆ ಚರ್ಚಿಸಿದೆ. ಗೃಹ ಸಚಿವರು ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದ್ದು ಆದಷ್ಟು ಶೀಘ್ರವೇ ಹಣ ಬಿಡುಗಡೆ ಮಾಡುವ ಭರವಸೆ ನೀಡಿದರು ಎಂದು ತಿಳಿಸಿದ್ದಾರೆ.

ಇದನ್ನು ಓದಿ:ಎಲ್ಲಾ ರಾಜ್ಯಗಳಲ್ಲೂ ಶೀಘ್ರದಲ್ಲೇ ಬದಲಾವಣೆ ಆಗಲಿದೆ: ಮಲ್ಲಿಕಾರ್ಜುನ ಖರ್ಗೆ

ರಾಜ್ಯ ಬಿಜೆಪಿಯಲ್ಲಿ ನಡೆಯುತ್ತಿರುವ ಅಧಿಕಾರ ಹೋರಾಟದ ಕುರಿತು ರಾಜಕೀಯ ಚರ್ಚೆಗಳು ನಡೆದಿವೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಹಿಂದುಳಿದ ಚಿತ್ರದುರ್ಗ ಜಿಲ್ಲೆಯ ಅಭಿವೃದ್ಧಿಗಾಗಿ ಚರ್ಚೆಗಳನ್ನು ನಿಗದಿಪಡಿಸಲಾಗಿದೆ ಮತ್ತು ಭದ್ರಾ ಮೇಲ್ದಂಡೆ ಯೋಜನೆಯ್ನು ತ್ವರಿತವಾಗಿ ಪೂರ್ಣಾಗೊಳಿಸುವುದು ನಮ್ಮ ಮೊದಲ ಆದ್ಯತೆ ಆಗಿದೆ, ಇದು ಚಿತ್ರದುರ್ಗ, ತುಮಕೂರು ಜಿಲ್ಲೆಗಳು, ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ, ತರೀಕೆರೆ ಮತ್ತು ಕಡೂರು ತಾಲ್ಲೂಕುಗಳ ಶುಷ್ಕ ಪ್ರದೇಶಗಳಿಗೆ ನೀರಾವರಿ ಮಾಡಲು ಸಹಾಯ ಮಾಡುತ್ತದೆ ಎಂದು ಹೇಳಿದರು.

2023-24ನೇ ಸಾಲಿನ ಬಜೆಟ್‌ನಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಯುಬಿಪಿಗೆ 5,300 ಕೋಟಿ ರೂ.ಗಳ ಅನುದಾನವನ್ನು ಘೋಷಿಸಿದರು. 2022 ರ ಅಕ್ಟೋಬರ್‌ನಲ್ಲಿ ಸಾರ್ವಜನಿಕ ಹೂಡಿಕೆ ಮಂಡಳಿಯು 5,300 ಕೋಟಿ ರೂ.ಗಳ ಕೇಂದ್ರ ಸಹಾಯಕ್ಕಾಗಿ ಮಾಡಿದ ಶಿಫಾರಸುಗಳನ್ನು ಆಧರಿಸಿ ಬಜೆಟ್ ಹಂಚಿಕೆ ಮಾಡಲಾಗಿದೆ. ಆಗಸ್ಟ್ 2023 ರಲ್ಲಿ, ರಾಜ್ಯ ಸರ್ಕಾರದ ಕೋರಿಕೆಯ ಮೇರೆಗೆ, ಪಿಎಂಕೆಎಸ್‌ವೈ-ಎಐಬಿಪಿ ಯೋಜನೆಯಡಿ ಜಲಶಕ್ತಿ ಸಚಿವಾಲಯವು ಪ್ರಸ್ತಾವನೆಯನ್ನು ಕೈಗೆತ್ತಿಕೊಂಡಿತು.

ಇದನ್ನು ಓದಿ:ಬಜೆಟ್‌ 2025ರ ಜನ-ವಿರೋಧಿ ಸ್ವರೂಪವನ್ನು ಬದಲಾಯಿಲು ಎಡಪಕ್ಷಗಳ 8-ಅಂಶಗಳ ಪರ್ಯಾಯ ಪ್ರಸ್ತಾವಗಳು

Donate Janashakthi Media

Leave a Reply

Your email address will not be published. Required fields are marked *