ಅಮಿತ್ ಶಾ ವಿರುದ್ಧದ ಹೇಳಿಕೆ ವಿವಾದ | ಮಾನನಷ್ಟ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಜಾಮೀನು

ನವದೆಹಲಿ: 2018 ರಲ್ಲಿ ಅಮಿತ್ ಶಾ ಅವರ ವಿರುದ್ಧ ‘ಆಕ್ಷೇಪಾರ್ಹ’ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ರಾಹುಲ್ ಗಾಂಧಿ ವಿರುದ್ಧ ದಾಖಲಿಸಲಾಗಿದ್ದ ಮಾನನಷ್ಟ ಮೊಕದ್ದಮೆಯಲ್ಲಿ ಉತ್ತರ ಪ್ರದೇಶದ ಜಿಲ್ಲಾ ನ್ಯಾಯಾಲಯ ಅವರಿಗೆ ಮಂಗಳವಾರ ಜಾಮೀನು ಮಂಜೂರು ಮಾಡಿದೆ.

ಬಿಜೆಪಿ ನಾಯಕ ವಿಜಯ್ ಮಿಶ್ರಾ ಅವರು ದಾಖಲಿಸಿದ್ದ ಪ್ರಕಣದಲ್ಲಿ ಸುಲ್ತಾನ್‌ಪುರದ ಜಿಲ್ಲಾ ಸಿವಿಲ್ ನ್ಯಾಯಾಲಯ ಜಾಮೀನು ನೀಡದೆ. ಬೆಳಗ್ಗೆ ಉತ್ತರ ಪ್ರದೇಶದ ಅಮೇಠಿಯಿಂದ ಸುಲ್ತಾನ್‌ಪುರ ನ್ಯಾಯಾಲಯಕ್ಕೆ ರಾಹುಲ್ ಗಾಂಧಿ ಹಾಜರಾದ ಕಾರಣ ನಡೆಯುತ್ತಿರುವ ಭಾರತ್ ಜೋಡೋ ನ್ಯಾಯ ಯಾತ್ರೆಗೆ ವಿರಾಮ ನೀಡಲಾಗಿತ್ತು.

ಇದನ್ನೂ ಓದಿ: ಉತ್ತರ ಪ್ರದೇಶ | ಕಾಂಗ್ರೆಸ್‌ಗೆ 17 ಸ್ಥಾನಗಳ ಅಂತಿಮ ಆಫರ್‌ ನೀಡಿದ ಸಮಾಜವಾದಿ ಪಕ್ಷ

“ಗಾಂಧಿ ಅವರು ನ್ಯಾಯಾಲಯಕ್ಕೆ ಆಗಮಿಸಿದ್ದರಿಂದ ಭಾರತ್ ಜೋಡೋ ನ್ಯಾಯ್ ಯಾತ್ರೆಯು ನಾಳೆ ಬೆಳಿಗ್ಗೆ ವಿರಾಮಗೊಳ್ಳಲಿದೆ. ಫೆಬ್ರವರಿ 20 ರಂದು ಮಧ್ಯಾಹ್ನ 2 ಗಂಟೆಗೆ ಅಮೇಥಿಯ ಫರ್ಸತ್‌ಗಂಜ್‌ನಿಂದ ಕಾರ್ಯಕ್ರಮವನ್ನು ಪುನರಾರಂಭಿಸುತ್ತದೆ” ಎಂದು ಕಾಂಗ್ರೆಸ್ ನಾಯಕ ಜೈರಾಂ ರಮೇಶ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಘಟನೆ ಹಿನ್ನೆಲೆ:

ರಾಹುಲ್ ಗಾಂಧಿ ಅವರು ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ “ಆಕ್ಷೇಪಾರ್ಹ” ಹೇಳಿಕೆಗಳನ್ನು ನೀಡಿದ್ದಾರೆ ಎಂದು ಆರೋಪಿಸಿ 2018 ರಲ್ಲಿ ಬಿಜೆಪಿ ನಾಯಕ ವಿಜಯ್ ಮಿಶ್ರಾ ಅವರು ಮಾನನಷ್ಟ ಮೊಕದ್ದಮೆ ಹೂಡಿದ್ದರು. ಅಮಿತ್‌ ಶಾ ಅವರ ಬಗ್ಗೆ ಮಾತನಾಡುತ್ತಾ ಗಾಂಧಿ ಅವರು, “ಪಕ್ಷದ ಅಧ್ಯಕ್ಷ ಅಮಿತ್ ಶಾ ಅವರ ಅವಧಿಯಲ್ಲಿ ನಡೆದ ಕೊಲೆ ಪ್ರಕರಣದಲ್ಲಿ ಬಿಜೆಪಿ ಭಾಗಿಯಾಗಿದೆ” ಎಂದು ಆರೋಪಿಸಿದ್ದರು.

ರಾಹುಲ್ ಗಾಂಧಿ ನೀಡಿದ ಸಮನ್ಸ್‌ಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, “ಭಾರತ್ ಜೋಡೋ ನ್ಯಾಯ್ ಯಾತ್ರೆ ಹಳಿತಪ್ಪುವುದಿಲ್ಲ. ಈ ಪ್ರಕರಣ ಗಾಂಧಿಯನ್ನು ಮೌನಗೊಳಿಸುವುದಿಲ್ಲ. ಕಾಂಗ್ರೆಸ್‌ಗೆ ಯಾವುದೆ ಭಯವಿಲ್ಲ” ಎಂದು ಹೇಳಿದ್ದಾರೆ.

“ಇಂದು ಬೆಳಿಗ್ಗೆ ರಾಹುಲ್ ಗಾಂಧಿ ಅವರು ಸುಲ್ತಾನ್‌ಪುರದ ಜಿಲ್ಲಾ ಸಿವಿಲ್ ನ್ಯಾಯಾಲಯಕ್ಕೆ ಹಾಜರಾಗುತ್ತಾರೆ. ಅವರಿಗೆ ಆಗಸ್ಟ್ 2018 ರಲ್ಲಿ ಬಿಜೆಪಿ ನಾಯಕರೊಬ್ಬರು ಸಲ್ಲಿಸಿದ ಮಾನನಷ್ಟ ಮೊಕದ್ದಮೆಯಲ್ಲಿ ಹಾಜರಾಗಲು 36 ಗಂಟೆಗಳ ಹಿಂದೆ ಅವರಿಗೆ ಸಮನ್ಸ್ ಪಡೆದಿದ್ದರು”  ಎಂದು ಅವರು ಟ್ವೀಟ್ ಮಾಡಿದ್ದಾರೆ.

ವಿಡಿಯೊ ನೋಡಿ: ಬ್ರಿಟಿಷರಿಗೆ ಸಹಾಯ ಮಾಡಿದ್ದ ವ್ಯಕ್ತಿ ಸ್ವಾತಂತ್ರ್ಯ ಹೋರಾಟಗಾರ ಆಗಲು ಹೇಗೆ ಸಾಧ್ಯ?

Donate Janashakthi Media

Leave a Reply

Your email address will not be published. Required fields are marked *