ಸುಲ್ತಾನ್ ಪುರ್: ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ “ಆಕ್ಷೇಪಾರ್ಹ” ಹೇಳಿಕೆ ನೀಡಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ2018ರಲ್ಲಿ ದಾಖಲಾಗಿದ್ದ ಮಾನಹಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿಗೆ ಜನಪ್ರತಿನಿಧಿಗಳ ಕೋರ್ಟ್ ಸಮನ್ಸ್ ನೀಡಿದೆ ಎಂದು ದೂರದಾರರ ಪರ ವಕೀಲರು ತಿಳಿಸಿದ್ದಾರೆ. ಸಮನ್ಸ್
ಸೋಮವಾರ ಪ್ರಕರಣದ ವಿಚಾರಣೆ ನಡಸಿದ ಜನಪ್ರತಿನಿಧಿಗಳ ನ್ಯಾಯಾಲಯದ ನ್ಯಾಯಾಧೀಶ ಯೋಗೇಶ್ ಯಾದವ್, ಡಿಸೆಂಬರ್ 16ರಂದು ನ್ಯಾಯಾಲದೆದುರು ಹಾಜರಾಗುವಂತೆ ರಾಹುಲ್ ಗಾಂಧಿ ಅವರಿಗೆ ಸಮನ್ಸ್ ಜಾರಿಗೊಳಿಸಿದ್ದಾರೆ ಎಂದು ವಕೀಲ ಸಂತೋಷ್ ಪಾಂಡೆ ಹೇಳಿದ್ದಾರೆ.
ಪ್ರಾಮಾಣಿಕ ಮತ್ತು ಸ್ವಚ್ಛ ರಾಜಕಾರಣದಲ್ಲಿ ನಂಬಿಕೆ ಇದೆ ಎಂದು ಹೇಳಿಕೊಳ್ಳುವ ಬಿಜೆಪಿ, ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವವರನ್ನು ಅಧ್ಯಕ್ಷರನ್ನಾಗಿ ಹೊಂದಿದೆ ಎಂಬ ರಾಹುಲ್ ಗಾಂಧಿ ಅವರ ಹೇಳಿಕೆಯನ್ನು ದೂರುದಾರರು ಉಲ್ಲೇಖಿಸಿದ್ದಾರೆ.ರಾಹುಲ್ ಗಾಂಧಿ ಈ ಹೇಳಿಕೆ ನೀಡಿದಾಗ ಶಾ ಬಿಜೆಪಿ ಅಧ್ಯಕ್ಷರಾಗಿದ್ದರು.
ಇದನ್ನೂ ಓದಿ: ಐಟಿ ರೇಡ್‌ನಲ್ಲಿ 42 ಕೋಟಿ ರೂ. ಸಮೇತ ಸಿಕ್ಕಿಬಿದ್ದಿದ್ದ ಬಿಬಿಎಂಪಿ ಗುತ್ತಿಗೆದಾರ ಅಂಬಿಕಾಪತಿ ನಿಧನ
ರಾಹುಲ್ ಗಾಂಧಿ ಆ ಹೇಳಿಕೆ ನೀಡುವುದಕ್ಕೂ ನಾಲ್ಕು ವರ್ಷಗಳ ಹಿಂದೆಯೇ ಮುಂಬೈನ ಸಿಬಿಐ ನ್ಯಾಯಾಲಯವು ಅಮಿತ್ ಶಾ ಅವರನ್ನು ಕೊಲೆ ಆರೋಪದಿಂದ ಆರೋಪಮುಕ್ತಗೊಳಿಸಿತ್ತು. ಇದಕ್ಕೂ ಮುನ್ನ 2005ರಲ್ಲಿ ನಡೆದಿದ್ದ ನಕಲಿ ಎನ್ ಕೌಂಟರ್ ಪ್ರಕರಣದಲ್ಲಿ ಆಗ ಗುಜರಾತ್ ರಾಜ್ಯದ ಗೃಹ ಸಚಿವರಾಗಿದ್ದ ಅಮಿತ್ ಶಾ ಪಾತ್ರವಿದೆ ಎಂಬ ಆರೋಪದಲ್ಲಿ ಅವರ ವಿರುದ್ಧ ಪ್ರಕರಣ ದಾಖಲಾಗಿತ್ತು.
ವಿಡಿಯೋ ನೋಡಿ: ದುಡಿಯುವ ಜನರ ಐಕ್ಯ ಹೋರಾಟ ರೂಪಗೊಂಡಿದ್ದು ಹೇಗೆ? – ಎಚ್.ಆರ್. ನವೀನ್ ಕುಮಾರ್ ಜೊತೆ ಮಾತುಕತೆ Janashakthi Media