ಕೊಪ್ಪಳ: ಜನವರಿ 6ರಂದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಡಾ. ಬಿ.ಆರ್. ಅಂಬೇಡ್ಕರ್ ರ ಬಗ್ಗೆ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ್ದರಿಂದ ಕೊಪ್ಪಳ ಬಂದ್ ಗೆ ಕರೆ ನೀಡಲಾಗಿದೆ ಎಂದು ಸಂವಿಧಾನ ಸಂರಕ್ಷಣಾ ಸಮಿತಿಯ ಜಿಲ್ಲಾ ಸಮಿತಿ ಮುಖಂಡರು ತಿಳಿಸಿದ್ದಾರೆ.
ಸಮಿತಿಯ ಮುಖಂಡರಾದ ಸಾಹಿತಿ ಅಲ್ಲಮಪ್ರಭು ಬೆಟ್ಟದೂರು, ಹನುಮೇಶ ಕಡೆಮನಿ, ಟಿ. ರತ್ನಾಕರ, ಈಶಪ್ಪ ಶಿರೂರು ಹಾಗೂ ಕೆ.ಎಸ್. ಮೈಲಾರಕ್ಕೆ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಕೇಂದ್ರ ಸಂಸತ್ತಿನ ಅಧಿವೇಶನದಲ್ಲಿ ನಡೆದ ಚರ್ಚೆ ವೇಳೆ ಅಮಿತ್ ಶಾ ಅವಮಾನ ಮಾಡಿದ್ದಾರೆ, ಅವರನ್ನು ಸಂಪುಟದಿಂದ ವಜಾ ಮಾಡಿ ದೇಶದಿಂದ ಗಡಿಪಾರು ಮಾಡಬೇಕು ಎಂದು ಆಗ್ರಹಿಸಿದರು.
ಇದನ್ನೂ ಓದಿ: ಭಟ್ಕಳ| ಮಾಲಿಕನ ಮೇಲೆ ದ್ವೇಷ; ಹಣ್ಣಿನ ಅಂಗಡಿಗೆ ಬೆಂಕಿ ಹೆಚ್ಚಿದ ದುಷ್ಕರ್ಮಿಗಳು
ಕೊಪ್ಪಳ ಬಂದ್ ಗೆ ಅಹಿಂದ ಅಲ್ಪ ಸಂಖ್ಯಾತರ ಸಂಘಟನೆಗಳು ಹಾಗೂ ಬಿ.ಆರ್. ಅಂಬೇಡ್ಕರ್ ಅವರ ಅನುಯಾಯಿಗಳು ಪಾಲ್ಗೊಳ್ಳಲಿದ್ದಾರೆ. ಅಂದು ವಾಹನಗಳ ಸಂಚಾರ ಹಾಗೂ ವ್ಯಾಪಾರ ವಹಿವಾಟು ಬಂದ್ ಆಗಲಿದೆ ಎಂದರು.
ಇದನ್ನೂ ನೋಡಿ: ಅಮಿತ್ ಶಾ, ಸಿ.ಟಿ.ರವಿ ಅನುಚಿತ ವರ್ತನೆ – ಸಮಾನ ಮನಸ್ಕ ಸಂಘಟನೆಗಳ ಪ್ರತಿಭಟನೆ Janashakthi Media