ಭೋಪಾಲ್: ಮಧ್ಯಪ್ರದೇಶದಲ್ಲಿ 11 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿರುವುದು ಶನಿವಾರ ವರದಿಯಾಗಿದೆ. ಸತ್ನಾ ಜಿಲ್ಲೆಯ ಮೈಹಾರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇವರಲ್ಲಿ ಒಬ್ಬ ಇಲ್ಲಿನ ದೇವಾಸ್ಥಾನದ ಗೋಶಾಲೆಯಲ್ಲಿ ಕೆಲಸ ಮಾಡುತ್ತಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಅತ್ಯಾಚಾರಕ್ಕೆ ಒಳಗಾದ ಬಾಲಕಿಯ ಮೈಮೇಲೆ ಪರಚಿದ ಗಾಯಗಳಾಗಿವೆ.ಬಾಲಕಿಯನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು ಪರಿಸ್ಥಿತಿ ಚಿಂತಜನಾಕವಾಗಿದೆ. ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣವನ್ನು ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
ಇದನ್ನೂ ಓದಿ:ರಾಜ್ಯಪಾಲರನ್ನು ಬಿಟ್ಟು ಹಾರಿದ ಏರ್ ಏಷ್ಯಾ ಇಂಡಿಯಾ ವಿಮಾನ!
ಶುಕ್ರವಾರ ಬಾಲಕಿ ಮನೆಯಿಂದ ಕಾಣೆಯಾಗಿದ್ದಳು.ಪೋಷಕರು ರಾತ್ರಿಯೇ ದೂರು ಕೊಟ್ಟಿದ್ದರು. ಶನಿವಾರ ಬೆಳಿಗ್ಗೆ ಆರ್ಕಾಂಡಿಯ ನಿರ್ಜನ ಪ್ರದೇಶದಲ್ಲಿ ಅರೆ ಪ್ರಜ್ಞಾವ್ಯವಸ್ಥೆಯಲ್ಲಿ ಬಾಲಕಿ ಪತ್ತೆಯಾಗಿದ್ದಳು.
ಸಿ.ಎಂ ಶಿವರಾಜ್ ಸಿಂಗ್ ಚೌಹಾಣ್ ಈ ಘಟನೆ ಸಂಬಂಧಿಸಿದಂತೆ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ನಿರ್ದೇಶನ ನೀಡಿದ್ದಾರೆ.ಸಂತ್ರಸ್ತ ಬಾಲಕಿಗೆ ವೈದ್ಯಕೀಯ ಚಿಕಿತ್ಸೆ ನೀಡುವುದಾಗಿ ಅವರು ತಿಳಿಸಿದ್ದಾರೆ.