ಬೆಂಗಳೂರು: ಪ್ಯಾಸೆಂಜರ್ ರೈಲೊಂದು ಕಂಟೈನರ್ಗೆ ಗುದ್ದಿದ ಘಟನೆ ಸೋಮವಾರ ರಾತ್ರಿ ನಡೆದಿದೆ. ಇದರಿಂದಾಗಿ ಕಂಟೈನರ್ ಸಂಪೂರ್ಣ ಪುಡಿ ಪುಡಿ ಆಗಿದೆ. ಯಾವುದೆ ಪ್ರಾಣಹಾನಿ ಸಂಭವಿಸಿಲ್ಲ.
ಬೆಂಗಳೂರು ಹೊರವಲಯದ ಆನೇಕಲ್ ತಾಲ್ಲೂಕಿನ ಆವಲಹಳ್ಳಿ ಬಳಿ ಈ ಘಟನೆ ನಡೆದಿದೆ. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಮೈಸೂರಿನಿಂದ ತಮಿಳುನಾಡಿನ ಮೈಲಾರಪುರಿಗೆ ಎಕ್ಸ್‌ಪ್ರೆಸ್ ಪ್ಯಾಸೆಂಜರ್ ರೈಲು ಹೋಗುತ್ತಿತ್ತು. ಈ ವೇಳೆ, ಈ ದುರ್ಘಟನೆ ಸಂಭವಿಸಿದೆ.
ಮೂಲಗಳ ಪ್ರಕಾರ ಈ ಮಾರ್ಗದಲ್ಲಿ ಎರಡು ಹಳಿಗಳು ನಿರ್ಮಾಣ ಕಾರ್ಯ ಪ್ರಗತಿಲ್ಲಿತ್ತು. ಒಂದು ಹಳಿ ಮೇಲೆ ರೈಲು ಸಂಚರಿಸುತಿತ್ತು. ಸಂಜೆ ಅದೇ ಹಳಿ ಮೇಲೆ ಕಂಟೈನರ್ ದಾಟಲು ಯತ್ನಿಸಿದ್ದಾಗ ಹಳಿ ಮೇಲೆ ಕಂಟೈನರ್ ನಿಂತು ಚಕ್ರವೊಂದು ಸಿಲುಕಿತ್ತು. ರೈಲು ಬರುತ್ತಿದ್ದನ್ನು ಕಂಡು ಚಾಲಕ ಓಡಿ ಹೋಗಿದ್ದ. ಆ ಬಳಿಕ, ರೈಲು ಕಂಟೈನರ್ ಗೆ ಗುದ್ದಿದೆ. ಪರಿಣಾಮ ಕಂಟೈನರ್ ಸಂಪೂರ್ಣ ಜಖಂಗೊಂಡಿದೆ. ಆದರೆ, ಯಾವುದೇ ಪ್ರಣಾಪಾಯ ಸಂಭವಿಸಿಲ್ಲ. ಸ್ಥಳಕ್ಕೆ ಆನೇಕಲ್ ಪೊಲೀಸರು ದೌಡಾಯಿಸಿದ್ದು ತನಿಖೆ ನಡೆಸುತ್ತಿದ್ದಾರೆ.
4 ಗಂಟೆಗಳ ಕಾಲ ಸಂಚಾರ ಸ್ಥಗಿತ : ಇನ್ನು ಅಪಘಾತದಿಂದಾಗಿ ಈ ಮಾರ್ಗದಲ್ಲಿ ಬರೊಬ್ಬರಿ 4 ಗಂಟೆಗಳ ಕಾಲ ರೈಲು ಸಂಚಾರ ಸ್ಥಗಿತವಾಗಿತ್ತು. ಸ್ಥಳಕ್ಕೆ ಧಾವಿಸಿದ್ದ ಅಧಿಕಾರಿಗಳು ಮತ್ತು ರೈಲ್ವೇ ಸಿಬ್ಬಂದಿ ರೈಲು ಹಳಿ ದುರಸ್ತಿ ಕಾರ್ಯದಲ್ಲಿ ತೊಡಗಿದ್ದರು. ಬಳಿಕ ಸುಮಾರು 4 ಗಂಟೆಗಳ ಬಳಿಕ ಅಂದರೆ ಮಧ್ಯರಾತ್ರಿ 12.30ರ ವೇಳೆಗೆ ದುರಸ್ತಿ ಕಾರ್ಯ ಪೂರ್ಣಗೊಳಿಸಿ ಮಾರ್ಗದಲ್ಲಿ ಮತ್ತೆ ರೈಲು ಸಂಚಾರಕ್ಕೆ ಅನುವು ಮಾಡಿಕೊಟ್ಟರು ಎಂಬ ಮಾಹಿತಿ ಲಭ್ಯವಾಗಿದೆ.