ಬೆಂಗಳೂರು: ರಾಜ್ಯದಲ್ಲಿರುವ ಅಂಗನವಾಡಗಳು ಕೇಂದ್ರಗಳಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ ಎದುರಿಸುತ್ತದೆ. ಇಂಥಹ ಸ್ಥಿತಿಗೆ ಸರಕಾರವೇ ನೇರ ಹೊಣೆ ಎಂದು ಕರ್ನಾಟಕ ಹೈಕೋರ್ಟ್ ಸರ್ಕಾರಕ್ಕೆ ಛೀಮಾರಿ ಹಾಕಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ವಿಚಾರಣೆಯನ್ನು ನಡೆಸಿದ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಒಕಾ ಅವರನ್ನೊಳಗೊಂಡ ವಿಭಾಗೀಯ ನ್ಯಾಯಪೀಠ ರಾಜ್ಯದಲ್ಲಿರುವ ಅಂಗನವಾಡಿಗಳಿಗೆ ತಕ್ಷಣವೇ ಫ್ಯಾನ್, ಶೌಚಾಲಯ, ವಿದ್ಯುಚ್ಛಕ್ತಿಯಂತಹ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕೆಂದು ಸೂಚಿಸಿದೆ.
ಅಂಗನವಾಡಿಗಳಿಗೆ ಹಂತ ಹಂತಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗುವುದು ಎಂಬ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಫಿಡವಿಟ್ಟು ಅರ್ಥಹೀನ ಎಂದು ಕೂಡ ಹೈಕೋರ್ಟ್ ಹೇಳಿದೆ.