ರಾಮನಗರ : ಅಂಗನವಾಡಿಗಳಲ್ಲಿ ಎಲ್ ಕೆಜಿ ಯುಕೆಜಿ ಪ್ರಾರಂಭ ಮಾಡುವ ಕುರಿತಂತೆ ಸಚಿವ ಹಾಲಪ್ಪ ಅಚಾರ್ ಮಹತ್ವದ ಹೇಳಿಕೆ ನೀಡಿದ್ದು, ಅಂಗನವಾಡಿಗಳಲ್ಲಿ ಎಲ್ ಕೆಜಿ, ಯುಕೆಜಿ ಪ್ರಾರಂಭ ಮಾಡುವ ಬಗ್ಗೆ ರಾಷ್ಟ್ರೀಯ ಶಿಕ್ಷಣ ನೀತಿ ಅಧಾರ ಮೇಲೆ ತೀರ್ಮಾನ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಂಗನವಾಡಿಗಳಲ್ಲಿ ಎಲ್ ಕೆಜಿ, ಯುಕೆಜಿ ಪ್ರಾರಂಭ ಮಾಡುವ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ ಎಲ್ ಕೆಜಿ, ಯುಕೆಜಿ ಆರಂಭದ ಬಗ್ಗೆ ಸರ್ಕಾರ ಹಂತದಲ್ಲಿ ಮಾತುಕತೆ ನಡೆದಿದೆ ಎಂದು ತಿಳಿಸಿದರು.
ರಾಷ್ಟ್ರೀಯ ಶಿಕ್ಷಣ ನೀತಿ ಅಡಿ ಯಾವ ಆದೇಶ ಬರುತ್ತದೆಯೋ ಅದರಂತೆ ನಡೆಯುತ್ತೇವೆ. ಅಂಗನವಾಡಿಗಳಲ್ಲೇ ಆರಂಭಿಸುವಂತೆ ಸೂಚನೆ ನೀಡಿದರೆ ಅದಕ್ಕೆ ಸಿದ್ಧತೆ ಮಾಡಿಕೊಳ್ಳಲಾಗುವುದು ಎಂದು ತಿಳಿಸಿದರು.