ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಗೌರವಧನ ಹೆಚ್ಚಳಕ್ಕೆ ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಭರವಸೆ

ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌, ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಗೌರವಧನ ಹೆಚ್ಚಳಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು  ಭರವಸೆ ನೀಡಿದ್ದಾರೆ.

ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಬೇಡಿಕೆ ಹಾಗೂ ಕುಂದು ಕೊರತೆಗಳ ಬಗ್ಗೆ ಬೆಂಗಳೂರಿನ ವಿಧಾನಸೌಧದ ತಮ್ಮ ಕೊಠಡಿಯಲ್ಲಿ ಸಚಿವರು ಚರ್ಚೆ ನಡೆಸಿದರು.

ಗೌರವಧನ ಹೆಚ್ಚಳ, ಮುಂಬಡ್ತಿ, ಗ್ರಾಚ್ಯುಟಿ ಸೌಲಭ್ಯ, ಉಚಿತ ವೈದ್ಯಕೀಯ ಸೌಲಭ್ಯ, ಅನಾರೋಗ್ಯ ಪೀಡಿತರಿಗೆ ಸ್ವಯಂ ನಿವೃತ್ತಿ ಯೋಜನೆ ಸೇರಿದಂತೆ ಹಲವು ವಿಷಯಗಳ ಬಗ್ಗೆ ಸಚಿವರು, ವಿವಿಧ ಸಂಘಟನೆಗಳೊಂದಿಗೆ ಚರ್ಚೆ ನಡೆಸಿದರು‌‌‌.

ಇದನ್ನೂ ಓದಿ : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಶಾ ಕಾರ್ಯಕರ್ತೆಯರ ಪ್ರತಿಭಟನೆ

ನಾನು ಎಂದಿಗೂ ಅಂಗನವಾಡಿ ಕಾರ್ಯಕರ್ತೆಯರ ಪರ. ಇಡೀ‌ ದೇಶಕ್ಕೆ ನಮ್ಮ ಅಂಗನವಾಡಿಗಳು ಮಾದರಿಯಾಗಿವೆ. ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚೆ ನಡೆಸಿ, ಮುಂದಿನ ಬಜೆಟ್ ನಲ್ಲಿ ಗೌರವಧನ ಹೆಚ್ಚಿಸಲು ಪ್ರಯತ್ನಿಸಲಾಗುವುದು ಎಂದು ಸಚಿವರು ತಿಳಿಸಿದರು.

ಸಭೆಯಲ್ಲಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ.ಶಮ್ಲಾ‌ ಇಕ್ಬಾಲ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರ್ದೇಶಕರಾದ ಎನ್.ಸಿದ್ದೇಶ್ವರ್, ಸಚಿವರ ಆಪ್ತ ಕಾರ್ಯದರ್ಶಿ ಡಾ.ಟಿ.ಎಚ್.ವಿಶ್ವನಾಥ್, ಸಚಿವರ ವಿಶೇಷ ಕರ್ತವ್ಯಾಧಿಕಾರಿ ಬಿ.ಎಚ್.ನಿಶ್ಚಲ್,  ಸಿಐಟಿಯುನ ಸುನಂದ ಎಚ್‌.ಎಸ್‌,  ಕಾರ್ಮಿಕ ಮುಖಂಡರಾದ ಎಂ.ಜಯಮ್ಮ, ಶಿವಶಂಕರ್, ಸಿ ಉಮಾ,  ಪ್ರೇಮಾ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಇದನ್ನೂ ನೋಡಿ : ಐಸಿಡಿಎಸ್ 50| ಅಂಗನವಾಡಿ ಬಲಗೊಳಿಸಲು ಹುಟ್ಟಿದ ಸಂಘಟನೆ ಐಫ್ಹಾ (AIFAWH-35) Janashakthi Media

Donate Janashakthi Media

Leave a Reply

Your email address will not be published. Required fields are marked *