ಬೇಡಿಕೆಗಳ ಈಡೇರಿಕೆಗೆ ಭರವಸೆ |ಪ್ರತಿಭಟನೆಯನ್ನು ಹಿಂಪಡೆದ ಅಂಗನವಾಡಿ ನೌಕರರು

ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಡೆಸುತ್ತಿದ್ದ ಪ್ರತಿಭಟನೆಯನ್ನು ಹಿಂಪಡೆಯಲಾಗಿದೆ.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಅವರು ಬೇಡಿಕೆ ಈಡೇರಿಸುವುದಾಗಿ ಭರವಸೆ ನೀಡಿದ ಹಿನ್ನೆಲೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ತಮ್ಮ ಪ್ರತಿಭಟನೆಯನ್ನು ವಾಪಸ್‌ ಪಡೆದಿದ್ದಾರೆ.

ಇದನ್ನೂ ಓದಿ: ಡಿಜಿಟಲ್ ಸಾಮ್ರಾಜ್ಯಶಾಹಿ ಮತ್ತು ಕಾರ್ಮಿಕ ವರ್ಗ: ಇರಾನ್ ದಾಳಿ ಮತ್ತು ದತ್ತಾಂಶದ ಶಸ್ತ್ರಾಸ್ತ್ರೀಕರಣ

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕಳೆದ ಎರಡು ದಿನಗಳಿಂದ ಅಂಗನವಾಡಿ ನೌಕರರ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಗುತ್ತಿತ್ತು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕೇಂದ್ರ ಕಚೇರಿಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಅಂಗನವಾಡಿ ನೌಕರರ ಸಂಘದ ಪದಾಧಿಕಾರಿಗಳು ಪಾಲ್ಗೊಂಡಿದ್ದರು.

ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಿಗೆ ಗೌರವಧನ ಹೆಚ್ಚಳ, ಎಲ್‌ಕೆಜಿ, ಯುಕೆಜಿ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸುವುದರ ಬಗ್ಗೆ ಸಚಿವರು ಪದಾಧಿಕಾರಿಗಳೊಂದಿಗೆ ಸುದೀರ್ಘವಾಗಿ ಚರ್ಚೆ ನಡೆಸಿದರು. ಅಂಗನವಾಡಿ ಕೇಂದ್ರಗಳು, ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಬಗ್ಗೆ ಸರ್ಕಾರ ಸಾಕಷ್ಟು ಕಾಳಜಿ ವಹಿಸಿದೆ. ಬೇಡಿಕೆಗಳನ್ನು ಹಂತ ಹಂತವಾಗಿ ಈಡೇರಿಸಲಾಗುವುದು. ಅಂಗನವಾಡಿ ನೌಕರರ ಹಿತರಕ್ಷಣೆಗೆ ಬದ್ಧ ಎಂದು ಸಚಿವರು ಭರವಸೆ ನೀಡಿದರು. ಈ ಹಿನ್ನೆಲೆಯಲ್ಲಿ ಅಂಗನವಾಡಿ ನೌಕರರು ಪ್ರತಿಭಟನೆ ಹಿಂಪಡೆದಿದ್ದಾರೆ.

ಇದನ್ನೂ ನೋಡಿ: “ನಮ್ಮ ಆರೋಗ್ಯ ಮತ್ತು ಕರ್ನಾಟಕ ಬಜೆಟ್ 2026–27” Janashakthi Media

Donate Janashakthi Media

Leave a Reply

Your email address will not be published. Required fields are marked *