ಜೀರೋ ಟ್ರಾಫಿಕ್ ನಲ್ಲಿ ಬಂದರೂ ಉಳಿಯಲಿಲ್ಲ ಮಗು ಜೀವ| ನಿಮ್ಹಾನ್ಸ್ ವೈದ್ಯರ ನಿರ್ಲಕ್ಷ್ಯ ಆರೋಪ

ಬೆಂಗಳೂರು: ಮನೆಯಲ್ಲಿ ಆಟವಾಡುವ ವೇಳೆ ಮೆಟ್ಟಿಲಿನಿಂದ ಕೆಳಗೆ ಬಿದ್ದ ಮಗು ವಿನ ತಲೆಗೆ ತೀವ್ರ ಪೆಟ್ಟು ಬಿದ್ದ ಹಿನ್ನಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಜೀರೋ ಟ್ರಾಫಿಕ್ ಮೂಲಕ ಪುಟ್ಟ ಕಂದಮ್ಮನನ್ನು ಬೆಂಗಳೂರಿನ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ ನಿಮ್ಹಾನ್ಸ್ ಆಸ್ಪತ್ರೆಯ​​ ಸಿಬ್ಬಂದಿ ನಿರ್ಲಕ್ಷ್ಯಕ್ಕೆ ಪುಟ್ಟ ಮಗು ಬಲಿಯಾಗಿದೆ ಎಂದು ಆರೋಪಿಸಿ ಆಸ್ಪತ್ರೆ ಮುಂದೆ ಕುಟುಂಬಸ್ಥರು ಪ್ರತಿಭಟನೆ ನಡೆಸಿದ್ದಾರೆ. ವೈದ್ಯರ

ಒಂದು ವರ್ಷದ ಮಗು ಮೆಟ್ಟಿಲಿನಿಂದ ಕೆಳಗೆ ಬಿದ್ದ ಪರಿಣಾಮ ತಲೆಗೆ ತೀವ್ರವಾಗಿ ಗಾಯಗೊಂಡು, ಅಸ್ವಸ್ಥಗೊಂಡಿತ್ತು. ಕೂಡಲೇ ಪೋಷಕರು ಹಾಸನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದರು. ಬಳಿಕ ಹಾಸನ ಸರ್ಕಾರಿ ಆಸ್ಪತ್ರೆಯ ವೈದ್ಯರು, ಹೆಚ್ಚಿನ ಚಿಕಿತ್ಸೆಗಾಗಿ ನಿಮಾನ್ಸ್​ಗೆ ಹೋಗುವಂತೆ ಸೂಚಿಸಿದ್ದರು.

ಝೀರೋ ಟ್ರಾಫಿಕ್​ನಲ್ಲಿ ಬರ್ತಿದ್ದ ಹಿನ್ನಲೆ ಬೆಡ್ ಕಾಯ್ದಿರಿಸುವಿಕೆಗಾಗಿ ನಿಮಾನ್ಸ್ ಆಡಳಿತ ಮಂಡಳಿಗೆ ಹಾಸನ ಸರ್ಕಾರಿ ಆಸ್ಪತ್ರೆಯ ವೈದ್ಯರು ತಿಳಿಸಿದ್ದರು. ಅದರಂತೆ ಹಾಸನದಿಂದ ನಿಮಾನ್ಸ್​ಗೆ ಕೇವಲ 1ಘಂಟೆ 40 ನಿಮಿಷದಲ್ಲಿ ಆಂಬ್ಯುಲೆನ್ಸ್ ಬಂದಿದ್ದು,  ಸಾವು ಬದುಕಿನ ನಡುವೆ ಹೋರಾಡುತ್ತಿರುವ ಪುಟ್ಟ ಕಂದಮ್ಮಗೆ ಬೆಡ್ ಖಾಲಿಯಿಲ್ಲ ಎಂದು ಆಸ್ಪತ್ರೆಯ ಆವರಣದಲ್ಲಿಯೇ ಸುಮಾರು 90 ನಿಮಿಷ ನಿಲ್ಲಿಸಿದ್ದಾರೆ ಎಂದು ಆರೋಪಿಸಿದರು.

ಮೃತ ವಿಜಯ್ ಬೆಳಗ್ಗೆ ಆಟವಾಡುತ್ತಿದ್ದ ವೇಳೆ ಮನೆಯ ಮೆಟ್ಟಿಲಿನಿಂದ ಬಿದ್ದು ತಲೆಗೆ ಪೆಟ್ಟಾಗಿದೆ. ಕೂಡಲೇ ಅವರನ್ನು ಹಾಸನದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಅಲ್ಲಿನ ವೈದ್ಯರು ಅವರನ್ನು ನಿಮ್ಹಾನ್ಸ್ ಗೆ ರೆಫರ್ ಮಾಡಿದ್ದಾರೆ. ಪೊಲೀಸರು ಹಾಸನದಿಂದ ಬೆಂಗಳೂರಿಗೆ ಹಸಿರು ಕಾರಿಡಾರ್  ರಚಿಸಿದರು. ಬಾಲಕನಿದ್ದ ಆಂಬುಲೆನ್ಸ್ ಎರಡು ಗಂಟೆಯೊಳಗೆ ಅಂದರೆ ಮಧ್ಯಾಹ್ನ 1.45 ರ ಸುಮಾರಿಗೆ ನಿಮ್ಹಾನ್ಸ್ ಗೆ ತಲುಪಿತು.

ಇದನ್ನೂ ಓದಿ:ಹಾಸನ| ಆಟವಾಡುವ ವೇಳೆ ಮೆಟ್ಟಿಲಿನಿಂದ ಕೆಳಗೆ ಬಿದ್ದ ಮಗು, ಜೀರೋ ಟ್ರಾಫಿಕ್ ಮೂಲಕ ಬೆಂಗಳೂರಿಗೆ ರವಾನೆ

ಗಾಯಗೊಂಡ ಬಾಲಕನನ್ನು ಬೆಂಗಳೂರಿಗೆ ಸ್ಥಳಾಂತರಿಸಲು ತ್ವರಿತ ಪೊಲೀಸ್ ನೆರವಿನ ಹೊರತಾಗಿಯೂ, ನಿಮ್ಹಾನ್ಸ್ ಸಿಬ್ಬಂದಿ ತುರ್ತು ಚಿಕಿತ್ಸಾ ವಿಭಾಗದಲ್ಲಿ ಹಾಸಿಗೆಗಳು ಲಭ್ಯವಿಲ್ಲ ಎಂದು ಮಗುವಿನ ಪೋಷಕರಿಗೆ ತಿಳಿಸಿದರು.

ಬಾಲಕನಿಗೆ ಹಾಸಿಗೆಯನ್ನು ಮೀಸಲಿಡುವಂತೆ ಹಾಸನ ಆಸ್ಪತ್ರೆ ವೈದ್ಯರು ನಿಮ್ಹಾನ್ಸ್ ಅಧಿಕಾರಿಗಳಿಗೆ ಮನವಿ ಮಾಡಿದ್ದರು ಎನ್ನಲಾಗಿದೆ. ಆದಾಗ್ಯೂ,  ಬಾಲಕನನ್ನು ದಾಖಲಿಸಿಕೊಳ್ಳಲು ನಿಮ್ಹಾನ್ಸ್‌ನಲ್ಲಿ ಒಂದು ಗಂಟೆಗೂ ಹೆಚ್ಚು ಕಾಲ ಕಾಯುವಂತೆ ಮಾಡಲಾಗಿತ್ತು. ಬಾಲಕನನ್ನು ತುರ್ತು ಚಿಕಿತ್ಸಾ ವಿಭಾಗದೊಳಗೆ ಕರೆದೊಯ್ದರೂ ವೈದ್ಯರು ತಕ್ಷಣ ಚಿಕಿತ್ಸೆ ಆರಂಭಿಸಿಲ್ಲ ಎಂದು ಆಂಬ್ಯುಲೆನ್ಸ್ ಚಾಲಕರು ಆರೋಪಿಸಿದ್ದಾರೆ. ಇದೇ ಬಾಲಕನ ಸಾವಿಗೆ ಕಾರಣವಾಯಿತು ಎಂದಿದ್ದಾರೆ.

ಸಿದ್ದಾಪುರ ಪೊಲೀಸರು ಆಸ್ಪತ್ರೆಗೆ ಧಾವಿಸಿ ನಿಮ್ಹಾನ್ಸ್ ಅಧಿಕಾರಿಗಳು ಮತ್ತು ವೈದ್ಯರ ನಿರ್ಲಕ್ಷ್ಯವನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ಬಾಲಕನ ಪೋಷಕರನ್ನು ಸಮಾಧಾನಪಡಿಸಿದರು.

ನಿಮ್ಹಾನ್ಸ್‌ನ ನಿವಾಸಿ ವೈದ್ಯಾಧಿಕಾರಿ ಡಾ.ಎಚ್.ಎಸ್.ಶಶಿಧರ್ ಮಾತನಾಡಿ, ವಿಜಯ್ ಅವರನ್ನು ತುರ್ತು ಚಿಕಿತ್ಸಾ ವಿಭಾಗಕ್ಕೆ ದಾಖಲಿಸಲಾಗಿತ್ತು. ತಲೆಬುರುಡೆ ಹಲವು ಕಡೆ ಮುರಿದಿತ್ತು. ಹೀಗಾಗಿ ಆತನ ಸ್ಥಿತಿ  ಗಂಭೀರವಾಗಿತ್ತು.  ಸಿಟಿ ಸ್ಕ್ಯಾನ್ ಮಾಡಿ ಬಾಲಕನನ್ನು ಉಳಿಸಲು ಪ್ರಯತ್ನಿಸಿದರೂ, ಗಾಯಗೊಂಡ 2 ಗಂಟೆಗಳ ನಂತರ ಸಾವನ್ನಪ್ಪಿದ್ದಾನೆ ಎಂದು ತಿಳಿಸಿದ್ದಾರೆ. ಆರೋಪ

ನಿಮ್ಹಾನ್ಸ್ ಅಧಿಕಾರಿಗಳೊಂದಿಗೆ ಪರಿಶೀಲಿಸುತ್ತೇನೆ: ಆರೋಗ್ಯ ಸಚಿವ

ನಿಮ್ಹಾನ್ಸ್ ಪ್ರಮುಖ ಆರೋಗ್ಯ ಸಂಸ್ಥೆಗಳಲ್ಲಿ ಒಂದಾಗಿದೆ ಮತ್ತು ಹಾಸಿಗೆಗಳು ಯಾವಾಗಲೂ ತುಂಬಿರುತ್ತವೆ. ಮಗು ಸಾವನ್ನಪ್ಪಿರುವುದು ದುರದೃಷ್ಟಕರ. ಮಗುವಿನ ದಾಖಲಾತಿಯಲ್ಲಿ ಏನಾದರೂ ವಿಳಂಬವಾಗಿದ್ದರೆ ನಾನು ನಿಮ್ಹಾನ್ಸ್ ಅಧಿಕಾರಿಗಳೊಂದಿಗೆ ಪರಿಶೀಲಿಸುತ್ತೇನೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ವಿಡಿಯೋ ನೋಡಿ:ಪ್ಯಾಲಿಸ್ತೇನ್‌ ಪರ ಪ್ರತಿಭಟನೆ ಮಾಡುವುದು ಅಪರಾಧವೆ? Janashakthi Media

Donate Janashakthi Media

Leave a Reply

Your email address will not be published. Required fields are marked *