ಅನ್ನ ಭಾಗ್ಯ ಯೋಜನೆ ಇಂದಿಗೆ 10 ವರ್ಷ

ಬೆಂಗಳೂರು: ಕಾಂಗ್ರೆಸ್‌ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ  ಅನ್ನ ಭಾಗ್ಯ ಜಾರಿಯಾಗಿ ಇವತ್ತಿಗೆ 10 ವರ್ಷ ಕಳೆದಿದೆ.ಈ  ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ಟ್ವೀಟರ್‌ನಲ್ಲಿ ಮಾಹಿತಿಯನ್ನ ಹಂಚಿಕೊಂಡಿದ್ದಾರೆ.

ಹಸಿವಿನ ಬೇನೆ ನಾಡಿನ ಬಡಜನರನ್ನು ಬಾಧಿಸದಿರಲಿ ಎಂಬ ಸದುದ್ದೇಶದೊಂದಿಗೆ ನಾವು ಇಂದಿನಿಂದ ಅನ್ನ ಭಾಗ್ಯ ಯೋಜನೆಯಡಿ ಬಡಕುಟುಂದ ಪ್ರತಿ ವ್ಯಕ್ತಿಗೆ ತಲಾ 5 ಕೆ ಜಿ ಅಕ್ಕಿ ಹಾಗೂ 170 ನೀಡಲಿದ್ದೇವೆ. ಹೆಚ್ಚುವರಿ 5 ಕೆಜಿ ಅಕ್ಕಿಯ ಬದಲಿಗೆ ನೀಡುವ ಹಣವನ್ನು ಆಹಾಋ ಪದಾರ್ಥಗಳ ಖರೀದಿಗೆ ಮಾತ್ರ ಬಳಕೆ ಮಾಡಬೇಕೆಂದು ನಾಡ ಬಾಂಧವರಲ್ಲಿ ಮನವಿ ಮಾಡುತ್ತೇನೆ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ನಾನು ನನ್ನ ಬದುಕಿನಲ್ಲಿ ಅನುಭವಿಸಿದ ಹಸಿವು, ಬಡತನದ ಅನುಭವದಿಂದಲೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಮರುಗಳಿಗೆಯಲ್ಲಿಯೇ ‘ಅನ್ನಭಾಗ್ಯ’ ಯೋಜನೆಯನ್ನು  ಜಾರಿಗೆ ತರುವ ನಿರ್ಧಾರ ಕೈಗೊಂಡಿದ್ದೆ.

ಇದನ್ನೂ ಓದಿ:ಅನ್ನಭಾಗ್ಯ ಯೋಜನೆ ನಾಳೆಯಿಂದಲೇ ಜಾರಿ -ಸಚಿವ ಕೆ.ಹೆಚ್.ಮುನಿಯಪ್ಪ

ಕರ್ನಾಟಕದ ಯಾರೊಬ್ಬರೂ ಹಸಿದು ಮಲಗಬಾರದು ಎಂಬ ಸದಾಶಯದೊಂದಿಗೆ ಬಡಕುಟುಂಬಗಳಿಗೆ ತಲಾ 5 ಕೆ.ಜಿ ಆಹಾರಧಾನ್ಯವನ್ನು ವಿತರಣೆ ಮಾಡುವ ಯೋಜನೆಯನ್ನು 10 ಜುಲೈ 2013 ರಂದು ಜಾರಿಗೊಳಿಸಿ, ನಾಡಿನ ಹಸಿದವರಿಗೆ ನೆಮ್ಮದಿಯ ಅನ್ನ ನೀಡಿದ್ದೆ.

ನಮ್ಮ ಈ ಯೋಜನೆಯನ್ನು ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದ ಹಲವು ಆರ್ಥಿಕ- ಸಾಮಾಜಿಕ ಸಂಸ್ಥೆಗಳು ಮತ್ತು ಸರ್ಕಾರಗಳು ಶ್ಲಾಘಿಸಿವೆ ಎಂದು ಹೇಳಲು ಹೆಮ್ಮೆಯೆನಿಸುತ್ತದೆ.

ನಾಡಿನ ಜನತೆ ವಿಶ್ವಾಸವಿರಿಸಿ ನೀಡಿದ್ದ ರಾಜಕೀಯ ಅಧಿಕಾರವನ್ನು ಕರ್ನಾಟಕವನ್ನು ಹಸಿವು ಮುಕ್ತಗೊಳಿಸಲು ಸದ್ಬಳಕೆ  ಮಾಡಿಕೊಂಡ ಸಂತೃಪ್ತಿ ನನ್ನದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಿಳಿಸದ್ದಾರೆ.

Donate Janashakthi Media

Leave a Reply

Your email address will not be published. Required fields are marked *