ಪ್ರಭಾವಿ ವ್ಯಕ್ತಿಗಳ ಕೈವಾಡದ ಶಂಕೆ- ತಪ್ಪಿತಸ್ಥರ ವಿರುದ್ದ ಕ್ರಮ ಕೈಗೊಳ್ಳಲು ಕಾಂಗ್ರೇಸ್, ಸಿಪಿಐಎಂ ಕಾರ್ಯಕರ್ತರ ಒತ್ತಾಯ
ಗಜೇಂದ್ರಗಡ: ಬಡವರ ಒಂದೊತ್ತಿನ ಊಟಕ್ಕಾಗಿ ಪರದಾಡಬಾರದು ಎನ್ನುವ ಉದ್ದೇಶದಿಂದ ಈ ಹಿಂದಿನ ಸಿದ್ದರಾಮಯ್ಯ ಸರ್ಕಾರ ಅನ್ನಭಾಗ್ಯ ಯೋಜನೆಯನ್ನು ರಾಜ್ಯಾದ್ಯಂತ ಜಾರಿಗೆ ತಂದಿತ್ತು. ಅದೇ ಯೋಜನೆಯ ಪಡಿತರ ಅಕ್ಕಿಗೆ ಕನ್ನ ಹಾಕಲು ಹೋಗಿ ಇದೀಗ ಪೋಲಿಸರ ಕೈಗೆ ಸಿಕ್ಕಿಬಿದ್ದಿದ್ದಾರೆ.
ಅಕ್ರಮವಾಗಿ ಸಾಗಿಸುತ್ತಿದ್ದ ಅನ್ನಭಾಗ್ಯ ಅಕ್ಕಿ ವಶಕ್ಕೆ ಪಡೆದ ಘಟನೆ ಗದಗ ಜಿಲ್ಲೆಯ ಗಜೇಂದ್ರಗಡದಲ್ಲಿ ನಡೆದಿದೆ. ಆಹಾರ ಇಲಾಖೆ ಅಧಿಕಾರಿಗಳು ಹಾಗೂ ಪೋಲಿಸರು, ಸಾರ್ವಜನಿಕರ ಸಹಾಯದಿಂದ ಗಜೇಂದ್ರಗಡದಿಂದ ಅಂತರರಾಜ್ಯಗಳಿಗೆ ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಕಾಳಸಂತೆಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 3 ಲಾರಿಯಲ್ಲಿ 1 ಲಾರಿಯನ್ನು ಮಾತ್ರ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
50 ಕೆಜಿಯ ಅಂದಾಜು 600 ಅಕ್ಕಿ ಪಾಕೇಟಗಳ ಒಳಗೊಂಡ ಲಾರಿ ವಶಕ್ಕೆ ಪಡೆಯಲಾಗಿದೆ. ಅಂದಾಜು 5 ಲಕ್ಷ ಮೌಲ್ಯದ ಅಕ್ಕಿಯನ್ನು ಅಕ್ರಮವಾಗಿ ಸಾಗಿಸುತ್ತಿದ್ದರು ಎನ್ನಲಾಗಿದೆ.
ಘಟನೆ ಹಿನ್ನೆಲೆ: ಕುಷ್ಟಗಿ ರಸ್ತೆಯಲ್ಲಿರುವ ಕೈಗಾರಿಕಾ ಪ್ರದೇಶದ ಗೋದಾಮಿನಿಂದ ಮಂಗಳವಾರ ಮಧ್ಯರಾತ್ರಿಯಂದು 3 ಲಾರಿಗಳಲ್ಲಿ ಅಕ್ರಮವಾಗಿ ಸಂಗ್ರಹಿಸಿದ ಅನ್ನಭಾಗ್ಯ ಯೋಜನೆಯ ಪಡಿತರ ಅಕ್ಕಿಯನ್ನು ರಾತ್ರೋರಾತ್ರಿ ಅಂತರಾಜ್ಯಗಳಿಗೆ ಸಾಗಾಣಿಕೆ ಮಾಡುವಾಗ ಕೇವಲ 1 ಲಾರಿಯನ್ನು ಆಹಾರ ಇಲಾಖೆಯ ಅಧಿಕಾರಿಗಳು ಪೋಲಿಸರು ವಶಪಡಿಸಿಕೊಂಡಿದ್ದಾರೆ. ಹಾಗಾದ್ರೆ ಉಳಿದ ಇನ್ನೆರಡು ಲಾರಿಗಳು ಏನಾದವೂ ಯಾಕೆ ಅವುಗಳನ್ನು ಹಿಡಯಲು ಅಧಿಕಾರಿಗಳಿಗೆ ಸಾಧ್ಯವಾಗಲಿಲ್ಲ ಎನ್ನುವುದು ಸಾರ್ವಜನಿಕರ ಪ್ರಶ್ನೆಯಾಗಿದೆ.
ಬ್ಲಾಕ್ ಕಾಂಗ್ರೇಸ್ ಅಧ್ಯಕ ಶಿವರಾಜ್ ಘೋರ್ಪಡೆ ಮಾತನಾಡಿ ಈ ಅವ್ಯವಹಾರದ ಹಿಂದೆ ಪ್ರಭಾವಿಗಳು, ಕಾಣದ ಕೈಗಳಿದ್ದು ಉಳಿದ 2 ಲಾರಿಗಳು ಇಲ್ಲಿಂದ ಹೇಗೆ ಹೋದವು ಎನ್ನುವುದನ್ನು ಕೂಡಾ ಪತ್ತೆ ಹಚ್ಚುಬೇಕು ಹಾಗೂ ಅಕ್ರಮದಲ್ಲಿ ಭಾಗಿಯದವರನ್ನು ತನಿಖೆ ಮಾಡಿ ತಪ್ಪಿತಸ್ಥರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳವಂತೆ ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಗಜೇಂದ್ರಗಡ ಬ್ಲಾಕ್ ಕಾಂಗ್ರೇಸ್ ಕಾರ್ಯಕರ್ತರು ಹಾಗೂ ಸಿಪಿಐಎಂ ಕಾರ್ಯಕರ್ತರು ಪ್ರತಿಭಟನೆ ನಡೆಸಿ ತಹಶಿಲ್ದಾರರ ಮೂಲಕ ಗದಗ ಜಿಲ್ಲಾಧಿಕಾರಿಗಳಿಗೆ ಮನವಿ ನೀಡಿದರು.
ಸಿಪಿಐಎಂ ಮುಖಂಡ ಎಮ್.ಎಸ್.ಹಡಪದ, ಬಾಲು ರಾಠೋಡ, ಉಮೇಶ ರಾಠೋಡ, ಪುರಸಭೆ ಸದಸ್ಯ ಮುರ್ತುಜಾ ಡಾಲಾಯತ್, ಸಿದ್ದು ಗೊಂಗಡಶೆಟ್ಟಿಮಠ, ಬಸವರಾಜ ಶೀಲವಂತರ, ಎಚ್.ಎಸ್.ಸೊಂಪೂರ, ಹಸನ ತಟಗಾರ,ಎಮ್.ಎಚ್.ಕೋಲಕಾರ, ವೀರಣ್ಣ ಸೊನ್ನದ, ಸೇರಿದಂತೆ ವಿವಿಧ ಸಂಘಟನೆಯ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.