ಅನ್ನಭಾಗ್ಯ ಯೋಜನೆ ನಾಳೆಯಿಂದಲೇ ಜಾರಿ -ಸಚಿವ ಕೆ.ಹೆಚ್.ಮುನಿಯಪ್ಪ

ಬೆಂಗಳೂರು: ಕಾಂಗ್ರೆಸ್‌ ಸರ್ಕಾರದ ಐದು ಗ್ಯಾರೆಂಟಿ ಯೋಜನೆಗಳಲ್ಲಿ ಒಂದಾದ ಬಿಪಿಎಲ್‌ ಹೊಂದಿರುವ  ಕುಟುಂಬಗಳಿಗೆ  ಅನ್ನಭಾಗ್ಯ ಯೋಜನೆ ನಾಳೆಯಿಂದಲೇ ಜಾರಿಯಾಗಲಿದೆ. ಕೇಂದ್ರ ಸರ್ಕಾರ ಬಿಪಿಎಲ್‌ ಕಾರ್ಡು ಹೊಂದಿರುವವರಿಗೆ  ನೀಡುವ 5 ಕೆ.ಜಿ ಅಕ್ಕಿ ಜೊತೆಗೆ ಉಳಿದ 5 ಕೆ.ಜಿ ಅಕ್ಕಿ ಬದಲಿಗೆ ಹಣವನ್ನು ನೀಡುವುದಾಗಿ ರಾಜ್ಯ ಸರ್ಕಾರ ಈಗಾಗಲೇ ಗೋಷಿಸಿದ್ದು, ಅದರಂತೆ ನಾಳೆ ಯೋಜನೆ ಜಾರಿಗೆ ಬರಲಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ  ಇಲಾಖೆ ಸಚಿವ ಕೆ.ಹೆಚ್.ಮುನಿಯಪ್ಪ ತಿಳಿಸಿದ್ದಾರೆ.

ಇದನ್ನೂ ಓದಿ:‘ಅನ್ನಭಾಗ್ಯ’ : ಅಕ್ಕಿ ಬದಲು ಹಣ – ಸಂಪುಟದ ಮಹತ್ವದ ತೀರ್ಮಾನ

ಬೆಂಗಳೂರಿನಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರದ 5 ಕೆಜಿ ಅಕ್ಕಿ ವಿತರಣೆ ಜೊತೆ ಉಳಿದ 5ಕೆಜಿ ಅಕ್ಕಿ ಬದಲಿಗೆ ಸಧ್ಯಕ್ಕೆ ಕುಟುಂಬದ ಪ್ರತಿ ವ್ಯಕ್ತಿಗೆ ರೂ.170 ಪ್ರತಿ ಕೆಜಿಗೆ 34 ರೂಪಾಯಿಗಳಂತೆ ನೀಡುತ್ತೇವೆ. 90 ಪರ್ಸೆಂಟ್‌ ಫಲಾನುಭವಿಗಳಲ್ಲಿ ಖಾತೆಗಳಿವೆ. ಖಾತೆಗಳು  ಇಲ್ಲದವರು ಖಾತೆಗಳನ್ನು ಮಾಡಿಸಿಕೊಳ್ಳಬೇಕು. ಒಬ್ಬರಿಗೆ 170 ರೂಪಾಯಿ ಕೊಡುತ್ತೇವೆ. ಅಕ್ಕಿ ಸಿಗುವರೆಗೆ ಮಾತ್ರ ಈ ಹಣ ನೀಡುವ ವ್ಯವಸ್ಥೆಯಿರುತ್ತದೆ ಎಂದರು. ಹೆಚ್ಚುವರಿ 5 ಕೆಜಿ ಅಕ್ಕಿ ಸಿಗುವವರೆಗೂ ಖಾತೆಗೆ ಹಣ ಜಮೆ ಮಾಡುತ್ತೇವೆ. ಎರಡು ಕೆಜಿ, ಜೋಳ,ರಾಗಿ ಕೊಡುತ್ತೇವೆ. ಎಂಟು ಕೆಜಿ ಅಕ್ಕಿ ಕೊಡುತ್ತೇವೆ. ಅಕ್ಕಿ ಕೊಡಲು ನಾವು ಸಿದ್ದವಾಗಿದ್ದೇವೆ ಆದರೆ ಕೇಂದ್ರ ಸರ್ಕಾರ ಹೆಚ್ಚಿನ ಅಕ್ಕಿ ನೀಡಲು ಸಹಕಾರ ನೀಡಿಲ್ಲ ಎಂದರು.

ಪ್ರದೇಶಗಳಿಗೆ ತಕ್ಕಂತೆ ಧಾನ್ಯ ವಿತರಣೆ ಮಾಡಲಾಗುತ್ತದೆ. ಕರ್ನಾಟಕದ ಎಲ್ಲಾ ಭಾಗಗಳಲ್ಲಿ ಅಕ್ಕಿಯನ್ನು ಮೂರು ಹೊತ್ತು ಜನರು ಸೇವಿಸುವುದಿಲ್ಲ. ದಕ್ಷಿಣ ಕನ್ನಡ ಭಾಗದ ಜನರಿಗೆ ರಾಗಿ ನೀಡುತ್ತೇವೆ. ಉತ್ತರ ಕರ್ನಾಟಕದ ಜನರಿಗೆ ಜೋಳ ಕೊಡುತ್ತೇವೆ. ರಾಗಿ ದಾಸ್ತಾನು ಇದೆ. ಜೋಳ ದಾಸ್ತಾನು ಇಲ್ಲ. ದಾಸ್ತಾನು ಆದ  ಬಳಿಕ ಧಾನ್ಯಗಳ ಹಂಚಿಕೆ ಮಾಡುತ್ತೇವೆ. ಎಂಎಸ್‌ಪಿಸಿ ಮೂಲಕ ಧಾನ್ಯ ಖರೀದಿ ಮಾಡುತ್ತೇವೆ. ಎರಡು ಕೆಜಿ, ಜೋಳ ಅಥವಾ ರಾಗಿ ಕೊಡುತ್ತೇವೆ. ಎಂಟು ಕೆಜಿ ಅಕ್ಕಿ ಕೊಡುತ್ತೇವೆ. ಮಾತು ಕೊಟ್ಟಂತೆ ನಾಳೆಯಿಂದ ಜಾರಿ ಮಾಡುವುದು ಖಂಡಿತ ಎಂದು ಸಚಿವರು ಹೇಳಿದರು. ಅನ್ನಭಾಗ್ಯ ಯೋಜನೆ ಹಣ ವರ್ಗಾವಣೆಯ ಮಾಹಿತಿ ಬಗ್ಗೆ ಮಾತನಾಡಿದ ಸಚಿವರು ರಾಜ್ಯದಲ್ಲಿ ಒಟ್ಟು 1 ಕೋಟಿ 28 ಲಕ್ಷ ಬಿಪಿಎಲ್‌, ಅಂತ್ಯೋದಯ ಕಾರ್ಡ್‌ದಾರರು ಇದ್ದು, 4 ಕೋಟಿ 42 ಲಕ್ಷ ಫಲಾನುಭವಿಗಳಿದ್ದಾರೆ. 1 ಕೋಟಿ 28 ಲಕ್ಷ ಕಾರ್ಡ್‌ ಗಳ ಪೈಕಿ 99.99% ಆಧಾರ್‌ ಸೀಡಿಂಗ್‌ ಆಗಿದೆ. ಇನ್ನು 1.22 ಕಾರ್ಡ್‌ದಾರರ ಬ್ಯಾಂಕ್‌ ಅಕೌಂಟ್‌ ಲಿಂಕ್‌ ಆಗಿದೆ. ಇನ್ನು 1.22 ಕಾರ್ಡ್‌ದಾರರ ಬ್ಯಾಂಕ್‌ ಅಕೌಂಟ್‌ ಲಿಂಕ್‌ ಆಗಿದೆ. ಇನ್ನುಳಿದ ಬಾಕಿ ಉಳಿದಿರುವ 6 ಲಕ್ಷ ಕಾರ್ಡ್‌ಗಳು ಆಧಾರ್‌ ಲಿಂಕ್‌ ಆಗಬೇಕು. ಆಧಾರ್‌ ಲಿಂಕ್‌ ಆಗುತ್ತಿದ್ದಂತೆಯೇ ಬ್ಯಾಂಕ್‌ ಅಕೌಂಟ್‌ ಕೂಡ ಕಾರ್ಡ್‌ಗಳಿಗೆ ಅಪ್ಡೇಟ್‌ ಆಗುತ್ತದೆ. ಹೀಗಾಗಿ ಯಾವುದೇ ರೀತಿಯ ಗೊಂದಲಕ್ಕೆ ಅವಕಾಶವಿಲ್ಲ ಎಂದರು.

ಕೇಂದ್ರ ಸರ್ಕಾರ ಮನಸ್ಸು ಬದಲಾಯಿಸಿ ಅಕ್ಕಿ ಕೊಟ್ಟರೆ ನಾವು  ಅಕ್ಕಿ ಹಂಚಿಕೆ ಮಾಡುತ್ತೇವೆ. ಹಣ ರೆಡಿ ಇದೆ, ನಾಳೆಯಿಂದಲೇ ಫಲಾನುಭವಿಗಳ ಖಾತೆಗೆ ಹಣ  ವರ್ಗಾವಣೇ ಆಗುತ್ತದೆ. ಅನ್ನಭಾಗ್ಯ ಯೋಜನೆ ಜಾರಿಗೆಗೆ ಸಮಾವೇಶ ಅವಶ್ಯಕತೆ ಇಲ್ಲ ಎಂದು ತಿಳಿಸಿದರು.

 

Donate Janashakthi Media

Leave a Reply

Your email address will not be published. Required fields are marked *