ಗಾಂಧಿನಗರ : ಗುಜರಾತ್ ದೇಶದ ಕೈಗಾರಿಕಾ ಬೆಳವಣಿಗೆಯ ರಾಜ್ಯಗಳಲ್ಲಿ ಒಂದೆಂದು ಗುರುತಿಸಿಕೊಂಡಿದ್ದರೂ, ಅಲ್ಲಿನ ಕೃಷಿ ಕ್ಷೇತ್ರ ಹಲವು ಸವಾಲುಗಳನ್ನು ಎದುರಿಸುತ್ತಿದೆ. ಉತ್ಪಾದನಾ ವೆಚ್ಚ ನಿರಂತರವಾಗಿ ಏರಿಕೆಯಾಗುತ್ತಿರುವುದು, ಬೆಳೆಗಳಿಗೆ ನಿರೀಕ್ಷಿತ ಬೆಲೆ ಸಿಗದಿರುವುದು ಹಾಗೂ ಹವಾಮಾನ ವೈಪರೀತ್ಯಗಳಿಂದಾಗಿ ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೃಷಿಯಿಂದ ಲಾಭಕ್ಕಿಂತ ನಷ್ಟವೇ ಹೆಚ್ಚಾಗುತ್ತಿದೆ ಎಂಬುದು ರೈತರ ಪ್ರಮುಖ ಆರೋಪವಾಗಿದೆ. ಗುಜರಾತ್
ಇದನ್ನೂ ನೋಡಿ : ನವ ಉದಾರವಾದಿ ಆರ್ಥಿಕತೆಯಲ್ಲಿ ನಿರುದ್ಯೋಗದ ಬಿಕ್ಕಟ್ಟು -ನಾಗರಾಜ ಶಾನಭೋಗ Janashakthi Media
