ಮನು ಭಾಕರ್ ಸೇರಿದಂತೆ ನಾಲ್ವರು ಅಥ್ಲಿಟ್ಸ್ ಗೆ ರಾಷ್ಟ್ರೀಯ ಕ್ರೀಡಾ ಪ್ರಶಸ್ತಿ ಘೋಷಣೆ

ನವದೆಹಲಿ: ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯವು 2024 ರ ರಾಷ್ಟ್ರೀಯ ಕ್ರೀಡಾ ಪ್ರಶಸ್ತಿಗಳನ್ನು ಇಂದು, ಗುರುವಾರ ಪ್ರಕಟಿಸಿದೆ. ಡಬಲ್ ಒಲಿಂಪಿಕ್ ಪದಕ ವಿಜೇತೆ ಮನು ಭಾಕರ್ ಮತ್ತು ವಿಶ್ವ ಚೆಸ್ ಚಾಂಪಿಯನ್ ಡಿ. ಗುಕೇಶ್ ಸೇರಿದಂತೆ ನಾಲ್ವರು ಅಥ್ಲಿಟ್ಸ್ ಗಳಿಗೆ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಕ್ರೀಡಾ ಸಚಿವಾಲಯ ತಿಳಿಸಿದೆ.

2025 ರ ಜನವರಿ 17 ರಂದು (ಶುಕ್ರವಾರ) ಬೆಳಿಗ್ಗೆ 11:00 ಗಂಟೆಗೆ ರಾಷ್ಟ್ರಪತಿ ಭವನದಲ್ಲಿ ಆಯೋಜಿಸಲಾದ ವಿಶೇಷ ಸಮಾರಂಭದಲ್ಲಿ ಪ್ರಶಸ್ತಿ ವಿಜೇತರು ಭಾರತದ ರಾಷ್ಟ್ರಪತಿಗಳಿಂದ ತಮ್ಮ ಪ್ರಶಸ್ತಿಗಳನ್ನು ಸ್ವೀಕರಿಸುತ್ತಾರೆ.

ಅಂದಾಗೆ, ದೇಶದ ಅತ್ಯುನ್ನತ ಕ್ರೀಡಾ ಗೌರವವಾದ ಖೇಲ್ ರತ್ನ ಪ್ರಶಸ್ತಿಗೆ ನಾಮನಿರ್ದೇಶನಗೊಂಡವರ ಪಟ್ಟಿಯಲ್ಲಿ ಮನು ಅವರ ಹೆಸರು ಆರಂಭದಲ್ಲಿ ಕಾಣೆಯಾಗಿತ್ತು.

ಇದನ್ನೂ ಓದಿ: 6 ಮಂದಿ ಗ್ರಾಮ ಪಂಚಾಯಿತಿ ಸದಸ್ಯರ ಸದಸ್ಯತ್ವ ರದ್ದು: ರಾಜ್ಯ ಚುನಾವಣಾ ಆಯೋಗ

ಇನ್ನು ಇವು ಜೊತೆ ಭಾರತದ ಪುರುಷರ ಹಾಕಿ ತಂಡದ ನಾಯಕ ಹರ್ಮನ್ ಪ್ರೀತ್ ಸಿಂಗ್ ಮತ್ತು ಪ್ಯಾರಾಲಿಂಪಿಯನ್ ಪ್ರವೀಣ್ ಕುಮಾರ್ ಅವರು ಜನವರಿ 17 ರಂದು ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ವಿಶೇಷವಾಗಿ ಆಯೋಜಿಸಲಾದ ಸಮಾರಂಭದಲ್ಲಿ ಭಾರತದ ರಾಷ್ಟ್ರಪತಿ ದೌಪದಿ ಮುರ್ಮು ಅವರಿಂದ ಖೇಲ್ ರತ್ನ ಪ್ರಶಸ್ತಿಯನ್ನು ಸ್ವೀಕರಿಸಲಿದ್ದಾರೆ.

“ಸಮಿತಿಯ ಶಿಫಾರಸುಗಳ ಆಧಾರದ ಮೇಲೆ ಮತ್ತು ಸೂಕ್ತ ಪರಿಶೀಲನೆಯ ನಂತರ, ಈ ಕೆಳಗಿನ ಕ್ರೀಡಾಪಟುಗಳು, ತರಬೇತುದಾರರು, ವಿಶ್ವವಿದ್ಯಾಲಯ ಮತ್ತು ಸಂಸ್ಥೆಗೆ ಪ್ರಶಸ್ತಿಗಳನ್ನು ನೀಡಲು ಸರ್ಕಾರ ನಿರ್ಧರಿಸಿದೆ’ ಎಂದು ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.

ಇದನ್ನೂ ನೋಡಿ: ದಮನಿತರ ಪರವಾಗಿ ಕೆಂಬಾವುಟ ಮಾತ್ರವೇ ನಿಲ್ಲಲು ಸಾಧ್ಯ- ಎಂ.ಎ.ಬೇಬಿ

Donate Janashakthi Media

Leave a Reply

Your email address will not be published. Required fields are marked *