ಬೆಂಗಳೂರು: ಕೌನ್ಸಿಲಿಂಗ್ ಮೂಲಕ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಪಂಚಾಯತಿ ಕಾರ್ಯದರ್ಶಿಗಳು, ಗ್ರಾಮೀಣಾಭಿವೃದ್ಧಿ ಸಹಾಯಕ ಗ್ರೇಡ್ 1 ಮತ್ತು 2 ಹಾಗೂ ದ್ವಿತೀಯ ದರ್ಜೆ ಲೆಕ್ಕಸಹಾಯಕರ ವರ್ಗಾವಣೆಗಳನ್ನು ಮಾಡಲು ಅಧಿಸೂಚನೆ ಹೊರಡಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಸಾಲಿನ
ವರ್ಗಾವಣೆ ನಿಯಮಗಳ ನಿಯಮ9ರ ಅನ್ವಯ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ಸಾರ್ವಜನಿಕ ಹಿತಾಸಕ್ತಿಯ ಹಾಗೂ ಕೋರಿಕೆ ವರ್ಗಾವಣೆಗಳನ್ನು ಸಾಮಾನ್ಯವಾಗಿ ಕ್ಯಾಲೆಂಡರ್ ವರ್ಷದ ಏಪ್ರಿಲ್ ಮತ್ತು ಮೇ ಮಾಹೆಗಳ ನಡುವಿನಲ್ಲಿ ಮಾಡಬಹುದು ಅಥವಾ ಅಸಾಧಾರಣ ಸಂದರ್ಭಗಳಲ್ಲಿ ಸರ್ಕಾರವು ಅಧಿಸೂಚಿಸಿದಂತೆ ಮಾಡಬಹುದಾಗಿರುತ್ತದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿ ಸರ್ಕಾರದಿಂದ ಜನಸಾಮಾನ್ಯರ ಆದಾಯ ಲೂಟಿ- ಎಚ್ ಆರ್ ನವೀನ್ ಕುಮಾರ್
2025-26 ನೇ ಸಾಲಿನ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ವರ್ಗಾವಣೆ ಪ್ರಕ್ರಿಯೆಯನ್ನು ದಿನಾಂಕ: 17.04.2025 ರಿಂದ ದಿನಾಂಕ: 13.05.2025 ರೊಳಗೆ ಪೂರ್ಣಗೊಳಿಸಲು ಉದ್ದೇಶಿಸಲಾಗಿದೆ ಎಂಬ ಮಾಹಿತಿಯನ್ನು ಸಚಿವರು ನೀಡಿದ್ದಾರೆ.
ಇದನ್ನೂ ನೋಡಿ: ಅಂಬೇಡ್ಕರ್ ಸ್ಥಾಪಿಸಿದ “ಅಖಿಲ ಭಾರತ ಪರಿಶಿಷ್ಟ ಜಾತಿಗಳ ಒಕ್ಕೂಟ” AISCF ಪಕ್ಷದ ಪ್ರಣಾಳಿಕೆಯಲ್ಲಿ ಏನಿದೆ?