ಬೆಂಗಳೂರು: ಮನೆ ಕೆಲಸದ ಮಹಿಳೆ ಹಾಗೂ ಅವರ ಪುತ್ರಿ ಮೇಲೆ ಲೈಂಗಿನ ದೌರ್ಜನ್ಯ ಎಸಗಿದ್ದ ಆರೋಪ ಹಿನ್ನಲೆ ಶಾಸಕ ಹೆಚ್.ಡಿ.ರೇವಣ್ಣ ಹಾಗೂ ಪ್ರಜ್ವಲ್ ವಿರುದ್ಧ ಹೊಳೆನರಸೀಪುರ ನಗರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ಇದರ ಬೆನ್ನಲ್ಲೇ ಹಾಸನದ ಸಂತ್ರಸ್ತೆಯೊಬ್ಬರು ಮತ್ತೊಂದು ದೂರು ದಾಖಲಿಸಿದ್ದಾರೆ. ಹೀಗಾಗಿ, ಎನ್‌ಐಟಿ ಅಧಿಕಾರಿಗಳು ಚಾಲ್ತಿಯಲ್ಲಿರುವ ಪ್ರಕರಣದಲ್ಲಿ ಐಪಿಸಿ ಸೆಕ್ಷನ್ 376 ರಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಮೊದಲ ಪ್ರಕರಣದಲ್ಲಿ ಕೇವಲ ಲೈಂಗಿಕ ದೌರ್ಜನ್ಯ ಆರೋಪ ಮಾತ್ರವಿಲ್ಲ. ಇದೀಗ ಸಂಸದ ಪ್ರಜ್ವಲ್ ವಿರುದ್ಧ ಅತ್ಯಾಚಾರ ಪ್ರಕರಣವನ್ನೂ ದಾಖಲಿಸಿಕೊಳ್ಳಲಾಗಿದೆ. ಇನ್ನೂ ಬಂಧನ ಭೀತಿಯಲ್ಲಿರುವ ಹೆಚ್.ಡಿ.ರೇವಣ್ಣ ನಿರೀಕ್ಷಣಾ ಜಾಮೀನು ಕೋರಿ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಹಾಗೆಯೇ, ಪುತ್ರ ಪ್ರಜ್ವಲ್ ಜರ್ಮನಿಯಿಂದ ದುಬೈಗೆ ಸ್ಥಳಾಂತರಗೊಂಡಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ: ಮಹಿಳೆಯರ ಬಗ್ಗೆ ಗೌರವವಿದ್ದರೆ ಲೈಂಗಿಕ ದೌರ್ಜನ್ಯ ಸಂತ್ರಸ್ತರ ಭೇಟಿ ಮಾಡಿ; ಡಿಕೆ ಶಿವಕುಮಾರ್
ಇದನ್ನೂ ನೋಡಿ: ಪೆನ್‌ಡ್ರೈವ್ ಪ್ರಕರಣ : ಬಿಜೆಪಿ ಮೌನಕ್ಕೆ ಕಾರಣವೇನು?ಸಂಧ್ಯಾ ಸೊರಬ ವಿಶ್ಲೇಷಣೆಯಲ್ಲಿ