ಶಾಸಕ ಬಸನಗೌಡ ಯತ್ನಾಳ್ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲು

ತುಮಕೂರು: ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್ ವಿರುದ್ಧ ತುಮಕೂರಿನಲ್ಲೂ ಎಫ್ಐಆರ್ ದಾಖಲಾಗಿದೆ. ದ್ವೇಷಭಾಷಣದ ಆರೋಪದ ಮೇಲೆ ನಗರದ ಠಾಣೆ ಪೊಲೀಸರು ಸೆಪ್ಟೆಂಬರ್‌ 14 ರಾತ್ರಿ ಸುಮೋಟೊ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸೆಪ್ಟೆಂಬರ್‌ 13ರಂದು ನಡೆದ ಹಿಂದೂ ಮಹಾಗಣಪತಿ ಶೋಭಾಯಾತ್ರೆಯಲ್ಲಿ ಬಸನಗೌಡ ಪಾಟೀಲ್‌ ಯತ್ನಾಳ್‌ ಭಾಗವಹಿಸಿದ್ದರು. ಈ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇಲೆ ಪೊಲೀಸರು ಎಫ್‌ಐಆರ್‌ ದಾಖಲಿಸಿಕೊಂಡಿದ್ದಾರೆ. ಶಾಸಕ

ಇದನ್ನೂ ಓದಿ: ಧರ್ಮಸ್ಥಳ ಪ್ರಕರಣ: ಸ್ನೇಹಮಯಿ ಕೃಷ್ಣ ವಿರುದ್ಧ ದೂರು

ಅನ್ಯ ಕೋಮಿನ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ಪೊಲೀಸ್ ಸಿಬ್ಬಂದಿ ರಘುನಾಥ್ ಕೊಟ್ಟ ದೂರಿನ ಮೇರೆಗೆ ಪೊಲೀಸರು ಎಫ್‌ಐಆರ್‌ ದಾಖಲಿಸಿಕೊಂಡಿದ್ದಾರೆ.

ಮದ್ದೂರಿನಲ್ಲಿ ನನ್ನ ವಿರುದ್ಧ 70 ನೇ ಪ್ರಕರಣ ದಾಖಲಾಗಿದೆ. ತುಮಕೂರಿನಲ್ಲಿ 71 ಪ್ರಕರಣ ದಾಖಲಾಗಬಹುದು ಎಂದು ಬಸನಗೌಡ ಪಾಟೀಲ್‌ ಯತ್ನಾಳ್‌ ಹೇಳಿಕೆ ನೀಡಿದ್ದರು. ಅಷ್ಟರಲ್ಲೇ ಅವರ ವಿರುದ್ಧ 71 ನೇ ಪ್ರಕರಣ ದಾಖಲಾಗಿದೆ.

ಇದನ್ನೂ ನೋಡಿ: ಕಾನೂನು ಅರಿವು | ಮಕ್ಕಳ ಕಸ್ಟಡಿ ಮತ್ತು ಪಾಲನೆ ಕಾನೂನುಗಳು | ಜನಶಕ್ತಿ ಮೀಡಿಯಾ, ಧ್ವನಿ ಲೀಗಲ್ ಟ್ರಸ್ಟ್

Donate Janashakthi Media

Leave a Reply

Your email address will not be published. Required fields are marked *