ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಪಾಲಿಕೆಯ ಕಾಂಗ್ರೆಸ್ ಸದಸ್ಯನ ಪುತ್ರಿ ನೇಹಾ ಹಿರೇಮಠ್ ಕೊಲೆ ಪ್ರಕರಣ ಇಡೀ ದೇಶವನ್ನೇ ಬೆಚ್ಚಿಬೀಳಿಸಿದಣತಹ ಘಟನೆ ಮಾಸುವ ಮುನ್ನವೇ ಅದೇ ರೀತಿಯ ಮತ್ತೊಂದು ಘಟನೆ ಹುಬ್ಬಳ್ಳಿಯ ಬೆಂಡಿಗೇರಿ ಪೊಲೀಸ್ ಠಾಣಾ ವ್ಯಾಪ್ತಿಯ ವೀರಾಪುರ ಓಣಿಯಲ್ಲಿ ಬುಧವಾರ ನಡೆದಿದೆ. ಪ್ರೀತಿ
ಅಂಜಲಿ ಅಂಬಿಗೇರ (20) ಕೊಲೆಯಾದ ಯುವತಿ ಎಂದು ಗುರುತಿಸಲಾಗಿದ್ದು, ವಿಶ್ವ ಅಲಿಯಾಸ್ ಗಿರೀಶ್ ಎಂಬಾತ ಯುವತಿಯನ್ನು ಬರ್ಬರವಾಗಿ ಹತ್ಯೆ ಮಾಡಿ ತಲೆಮಾರಿಸಿಕೊಂಡಿದ್ದಾನೆ. ಪೊಲೀಸರು ಆರೋಪಿಗಾಗಿ ಶೋಧ ನಡೆಸುತ್ತಿದ್ದಾರೆ.
ಇದನ್ನು ಓದಿ : ಪೊಲೀಸ್ ಕಸ್ಟಡಿಗೆ ಬಿಜೆಪಿಯ ವಕೀಲ ದೇವರಾಜೇಗೌಡ
ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಈ ಕುರಿತು ಪ್ರತಿಕ್ರಿಯಿಸಿದ್ದು, ಆರೋಪಿ ಹಲವು ದಿನಗಳಿಂದ ತನ್ನನ್ನು ಪ್ರೀತಿಸುವಂತೆ ಯುವತಿಯನ್ನು ಪೀಡಿಸುತ್ತಿದ್ದ ಎಂದು ತಿಳಿದು ಬಂದಿದೆ. ಆದರೆ, ಯುವತಿ ಈತನ ಪ್ರೀತಿಯನ್ನು ನಿರಾಕರಿಸಿದ್ದಳು ಎನ್ನಲಾಗಿದೆ. ಈತನ ವಿರುದ್ಧ ಹಲವು ಕಳ್ಳತನ ಪ್ರಕರಣಗಳಲ್ಲಿ ಶಾಮೀಲಾದ ಆರೋಪವೂ ಇದೆ. ಜತೆಗೆ, ಬೈಕ್ ಕಳ್ಳತನದಲ್ಲಿಯೂ ಆರೋಪಿಯಾಗಿದ್ದಾನೆ.
ಈ ಹಿಂದೆ ಮೈಸೂರಿಗೆ ಬಾ ಎಂದು ಅಂಜಲಿಗೆ ವಿಶ್ವ ಧಮ್ಕಿ ಹಾಕಿದ್ದ. ಅಕಸ್ಮಾತ್ ನೀನು ನನ್ನ ಜೊತೆ ಬರದೆ ಹೋದರೆ ನೇಹಾ ಮಾದರಿ ಕೊಲೆ ಮಾಡುತ್ತೇನೆ ಎಂದು ಬೆದರಿಕೆ ಹಾಕಿದ್ದ. ಅದರಂತೆಯೇ ಬುಧವಾರ (ಮೇ 15) ಬೆಳಗ್ಗೆ 5.30ಕ್ಕೆ ಮನೆಗೆ ನುಗ್ಗಿ ಚಾಕುವಿನಿಂದ ಇರಿದಿದ್ದಾನೆ. ಮನೆಯವರು ತಡೆಯಲು ಮುಂದಾದರೂ ಬಿಡದೆ ಹತ್ಯೆ ಮಾಡಿ ಪರಾರಿಯಾಗಿದ್ದಾನೆ. ಆರೋಪಿಯನ್ನು ಪತ್ತೆ ಹಚ್ಚಲಾಗುತ್ತಿದ್ದು, ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ನೇಹಾ ಪ್ರಕರಣದಲ್ಲಿ ಬಿದಿಗಿಳಿದು ರಾಜಕೀಯ ಲಾಭ ಪಡೆದುಕೊಂಡಿದ್ದ ಪ್ರಲ್ಹಾದ್ ಜೋಷಿ, ಶೋಭಾ ಕರಂದ್ಲಾಜೆ, ಹಾಗೂ ಬಿಜೆಪಿ, ಎಬಿವಿಪಿಯವರುಈ ದುಷ್ಕೃತ್ಯದ ವಿರುದ್ದ ಪ್ರತಿಭಟನೆ ಮಾಡುವುದಿಲ್ಲವೆ ಎಂದು ಸಾಮಾಜಿಕ ಜಾಲತಾಣದಲ್ಲಿ ಚರ್ಚೆಯಾಗುತ್ತಿದೆ.
ಇದನ್ನು ನೋಡಿ : ಎರಡು ಕೋಟಿ ಉದ್ಯೋಗ : ಎಲ್ಲಿ ಹೋದವು? ಮೋದಿ ಸರ್ಕಾರದ ಉತ್ತರವೇನು? Janashakthi Media