ಬಿಹಾರ| ಚುನಾವಣೆಗೆ ಮುನ್ನ ಪಕ್ಷ ವಿರೋಧಿ ಚಟುವಟಿಕೆ: 11 ಮಂದಿ ನಾಯಕರ ಉಚ್ಚಾಟನೆ

ಪಾಟ್ನಾ: ವಿಧಾನಸಭಾ ಚುನಾವಣೆಗೆ ಮುನ್ನ ಪಕ್ಷ ವಿರೋಧಿ ಚಟುವಟಿಕೆ ಮತ್ತು ಸಿದ್ಧಾಂತವನ್ನು ಧಿಕ್ಕರಿಸಿದ ಆರೋಪದ ಮೇಲೆ ಮಾಜಿ ಸಚಿವರು ಸೇರಿದಂತೆ 11 ಮಂದಿ ನಾಯಕರನ್ನು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ರ ಜೆಡಿಯು ಉಚ್ಚಾಟಿಸಿದೆ.

ಜೆಡಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಚಂದನ್ ಕುಮಾರ್ ಸಿಂಗ್ ಬಿಡುಗಡೆ ಮಾಡಿದ ಹೇಳಿಕೆಯ ಪ್ರಕಾರ, ಉಚ್ಚಾಟಿತ ಸದಸ್ಯರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದಲೂ ಅಮಾನತುಗೊಳಿಸಲಾಗಿದೆ.

ಇದನ್ನೂ ಓದಿ: ರೈತ ಆತ್ಮಹತ್ಯೆ ಪ್ರಕರಣ: ಫೈನಾನ್ಸ್ ಸಿಬ್ಬಂದಿಯ ಕಿರುಕುಳವೇ ಕಾರಣ!

“ರಾಜ್ಯದಲ್ಲಿ ಎಲ್ಲಾ 11 ನಾಯಕರು ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿದ್ದಾರೆ ಎಂದು ಕಂಡುಬಂದ ನಂತರ ಪಕ್ಷ ಶಿಸ್ತು ಕ್ರಮ ಕೈಗೊಂಡಿದೆ” ಎಂದು ಅಕ್ಟೋಬರ್‌ 25ರ ಸಂಜೆ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ತಿಳಿಸಲಾಗಿದೆ.

ಮಾಜಿ ಸಚಿವ ಶೈಲೇಶ್ ಕುಮಾರ್, ಮಾಜಿ ಶಾಸಕರಾದ ಶ್ಯಾಮ್ ಬಹದ್ದೂರ್ ಸಿಂಗ್, ಸುದರ್ಶನ್ ಕುಮಾರ್ ಮತ್ತು ಮಾಜಿ ಎಂಎಲ್ಸಿಗಳಾದ ಸಂಜಯ್ ಪ್ರಸಾದ್ ಮತ್ತು ರಣವಿಜಯ್ ಸಿಂಗ್ ಉಚ್ಛಾಟಿತರಲ್ಲಿ ಸೇರಿದ್ದಾರೆ.

243 ಸದಸ್ಯ ಬಲದ ಬಿಹಾರ ವಿಧಾನಸಭೆಗೆ ನವೆಂಬರ್ 6 ಮತ್ತು ನವೆಂಬರ್ 11 ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದ್ದು, ನವೆಂಬರ್ 14 ರಂದು ಫಲಿತಾಂಶ ಪ್ರಕಟವಾಗಲಿದೆ.

ಇದನ್ನೂ ನೋಡಿ: ಕ್ಯಾರಿ ಓವರ್ ನಿಯಮ ಸಡಿಲಿಕೆಗಾಗಿ ವಿದ್ಯಾರ್ಥಿಗಳ ಪ್ರತಿಭಟನೆ Janashakthi Media

Donate Janashakthi Media

Leave a Reply

Your email address will not be published. Required fields are marked *