ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಕಾಂಗ್ರೆಸ್ ಸರ್ಕಾರ ಬದಲಾಗಲ್ಲ| ಸತೀಶ ಜಾರಕಿಹೊಳಿ

ಗೋಕಾಕ: ಅನಾರೋಗ್ಯದ ಕಾರಣದಿಂದಾಗಿ ಬೆಂಗಳೂರಿನಲ್ಲಿ ಸಿಎಂ ನೇತೃತ್ವದಲ್ಲಿ ನಡೆದ ಉಪಹಾರ ಸಭೆಗೆ ಹೋಗಿಲ್ಲ. ಸಭೆಗೆ ಬರಲು ನನಗೂ ಆಹ್ವಾನ ನೀಡಿದ್ದರು ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ಕಾಂಗ್ರೆಸ್ 

ನಗರದ ತಮ್ಮ ಹಿಲ್ ಗಾರ್ಡನ್ ಗೃಹ ಕಚೇರಿಯಲ್ಲಿ ಅಕ್ಟೋಬರ್-4 ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ 4 ದಿನಗಳಿಂದ ನನಗೆ ಆರೋಗ್ಯ ಸರಿಯಲ್ಲ. ಆದ್ದರಿಂದ ವಿಶ್ರಾಂತಿ ಪಡೆಯುತ್ತಿದ್ದೇನೆ. ನನಗೆ ಆರೋಗ್ಯವೇ ಮೊದಲು. ಆಮೇಲೆ ರಾಜಕಾರಣ ಎಂದರು. ಸಭೆಯಲ್ಲಿ ನಡೆದ ಬೆಳವಣಿಗೆಗಳ ಬಗ್ಗೆ ಮಾಹಿತಿ ಇಲ್ಲ. ಭಾನುವಾರ ಸಂಜೆ ಬೆಂಗಳೂರಿಗೆ ಹೋಗುತ್ತೇನೆ. ನಂತರ ಸಭೆಯಲ್ಲಿನ ವಿಷಯಗಳ ಬಗ್ಗೆ ಚರ್ಚಿಸುತ್ತೇನೆ ಎಂದು ತಿಳಿಸಿದರು.

ಇದನ್ನೂ ಓದಿ:ಸಿದ್ದರಾಮಯ್ಯ ಸರ್ಕಾರ ಪತನವಾಗಲಿದೆಯೆ? ದುಬೈಯಲ್ಲಿ ತಂತ್ರ ನಡೆಯುತ್ತಿದೆಯೆ?

ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಕಾಂಗ್ರೆಸ್ ಸರ್ಕಾರ ಬದಲಾಗಲ್ಲ. ಐದು ವರ್ಷಗಳ ಕಾಲ ಪೂರ್ಣ ಪ್ರಮಾಣದಲ್ಲಿ ಸರ್ಕಾರ ಆಡಳಿತ ಮಾಡುತ್ತದೆ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು. ಜಿಲ್ಲೆಯ ಇಂಡಿ ತಾಲೂಕಿನ ಹಳಗುಣಕಿ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ  ಮಾತನಾಡಿದ ಅವರು, ಮಹಾರಾಷ್ಟ್ರ ಮಾದರಿಯಲ್ಲಿ ಸರ್ಕಾರ ಬದಲಾವಣೆ ಆಗುತ್ತದೆ ಎಂದ ಸಹೋದರ, ಮಾಜಿ ಸಚಿವ ರಮೇಶ ಜಾರಕಿಹೊಳಿ ಅವರ ಹೇಳಿಕೆ ಈ ಮೂಲಕ ಅವರು ಟಾಂಗ್ ನೀಡಿದರು. ಸದ್ಯದಲ್ಲೇ ಡಿಕೆಶಿ ಮಾಜಿ ಮಂತ್ರಿ ಆಗುತ್ತಾರೆ ಎನ್ನುವ ರಮೇಶ ಹೇಳಿಕೆ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಆ ಬಗ್ಗೆ ನನಗೆ ಗೊತ್ತಿಲ್ಲ, ಕಾದು ನೋಡೋಣ ಎಂದರು.

ವಿಡಿಯೋ ನೋಡಿ:ಪಿಚ್ಚರ್ ಪಯಣ – 141 ಸಿನೆಮಾ : ಓಮರ್ನಿರ್ದೇಶಕ : ಹನಿ ಅಬು ಅಸಾದ್ಪ್ರಸ್ತುತಿ: ಎಮ್.ನಾಗರಾಜ ಶೆಟ್ಟಿJanashakthi Media

Donate Janashakthi Media

Leave a Reply

Your email address will not be published. Required fields are marked *