ಎಪಿಎಂಸಿ ಕಾಯ್ದೆ-ಗೋಹತ್ಯೆ ನಿಷೇಧ ಕಾಯ್ದೆ ವಾಪಸ್ಸು ಪಡೆಯಲು ಕಾಂಗ್ರೆಸ್‌ ಆಗ್ರಹ

ಬೆಳಗಾವಿ: ಇಂದು ಕಾಂಗ್ರೆಸ್ ಶಾಸಕಾಂಗ ಸಭೆ ನಡೆದಿದ್ದು, ಬಿಜೆಪಿಯನ್ನು ಎದುರಿಸಲು ಬೇಕಾಗುವ ಬಗ್ಗೆ ಚರ್ಚೆಯನ್ನು ನಡೆಸಿದೆ. ಎಪಿಎಂಸಿ ಕಾಯ್ದೆ, ಗೋಹತ್ಯೆ ನಿಷೇಧ ಕಾಯ್ದೆ ವಾಪಸ್ ಪಡೆಯುವಂತೆ ಸರ್ಕಾರವನ್ನು ಆಗ್ರಹಿಸಲು ಸಭೆಯು ಆಗ್ರಹಿಸಿದೆ.

ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ‌ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಎಪಿಎಂಸಿ ಕಾಯ್ದೆ ಹಿಂಪಡೆಯುವಂತೆ ಸರ್ಕಾರವನ್ನು ಒತ್ತಾಯಿಸುವುದು, ಭೂ ಸುಧಾರಣಾ ಪಡಿ ಕಾಯ್ದೆ, ಗೋಹತ್ಯೆ ನಿಷೇಧ ಕಾಯ್ದೆಯನ್ನು ವಾಪಸ್ ಪಡೆಯುವಂತೆ ಆಗ್ರಹಿಸುವ ಬಗ್ಗೆ ತೀರ್ಮಾನಿಸಲಾಗಿದೆ. ಮತಾಂತರ ನಿಷೇಧ ತಿದ್ದುಪಡಿ ವಿಧೇಯಕವನ್ನು ಸರ್ಕಾರ ಮಂಡನೆ ಮಾಡಿದರೆ ವಿರೋಧಿಸಲು ನಿರ್ಧರಿಸಲಾಗಿದೆ.

ಕೋವಿಡ್‌ ನಿಂದ ಮೃತಪಟ್ಟವರ ಕುಟುಂಬಕ್ಕೆ ಪರಿಹಾರದ ಬಗ್ಗೆಯೂ ಆಗಿರುವ ವಿಳಂಬದ ಬಗ್ಗೆಯೂ ಸಭೆಯು ಚರ್ಚೆ ನಡೆಸಿದೆ. ಕಾಮಗಾರಿಗಳಲ್ಲಿ ಗುತ್ತಿಗೆದಾರರಿಂದ ಶೇ.40ರಷ್ಟು ಕಮೀಷನ್ ಪಡೆಯುವ ಆರೋಪ ಹಾಗೂ ಬಿಟ್ ಕಾಯಿನ್ ಹಗರಣದ ಬಗ್ಗೆ ಸದನದಲ್ಲಿ ಪ್ರಸ್ತಾಪಿಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ. ಯಾವ ವಿಚಾರಗಳನ್ನು ವಿಧಾನಸಭೆ ಹಾಗೂ ಮೇಲ್ಮನೆ ಪ್ರಸ್ತಾಪಿಸಬೇಕೆಂಬ ಬಗ್ಗೆಯೂ ಚರ್ಚೆ ನಡೆದಿದೆ.

ಮುಖ್ಯವಾಗಿ ಈ ಬಾರಿ ಬಿಜೆಪಿ‌ ಸರ್ಕಾರ ಮಂಡಿಸಲಿರುವ ಮತಾಂತರ ವಿಧೇಯಕವನ್ನು ಬಲವಾಗಿ ವಿರೋಧಿಸುವುದು ಎಂಬ ಬಗ್ಗೆಯೂ ಚರ್ಚೆಯ ವಿಷಯವಾಗಿತ್ತು. ಎರಡೂ ಸದನಗಳಲ್ಲಿ ಚರ್ಚೆಯ ಸಂದರ್ಭದಲ್ಲಿ ಕಾಂಗ್ರೆಸ್ ಸದಸ್ಯರು ಕಡ್ಡಾಯ ಹಾಜರಿರಬೇಕು, ಒಗ್ಗಟ್ಟು ಪ್ರದರ್ಶಿಸಬೇಕು. ಬಿಜೆಪಿಯನ್ನು ಇಕ್ಕಟ್ಟಿಗೆ ಸಿಲುಕಿಸಲು ಅದಕ್ಕೆ ಬೇಕಾದ ಅಂಶಗಳ ಸಿದ್ಧತೆಯಿರಬೇಕೆಂದು ಸಿದ್ದರಾಮಯ್ಯ ಸಭೆಯಲ್ಲಿ ಸೂಚಿಸಿದ್ದರೆನ್ನಲಾಗಿದೆ.

ಪರಿಷತ್ತಿನ ನೂತನ ಸದಸ್ಯರಿಗೆ ಅಭಿನಂದನೆ:

ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್‍ಗೆ ಚುನಾಯಿತರಾದ ನೂತನ ಸದಸ್ಯರಿಗೆ ಅಭಿನಂದನೆ ಸಲ್ಲಿಸಿದರು. ಕೆಲವು ಕ್ಷೇತ್ರಗಳಲ್ಲಿ ಅನಿರೀಕ್ಷಿತವಾಗಿ ಪಕ್ಷಕ್ಕೆ ಸೋಲಾಗಿರುವ ಬಗ್ಗೆ ಗಂಭೀರ ಚರ್ಚೆ ನಡೆದಿದೆ. ಬಳ್ಳಾರಿ, ಚಿತ್ರದುರ್ಗ ಜಿಲ್ಲೆಗಳಲ್ಲಿ ಕಾಂಗ್ರೆಸ್‍ಗೆ ಆಗಿರುವ ಹಿನ್ನಡೆ ಬಗೆ ಅಸಮಾಧಾನ ವ್ಯಕ್ತವಾಗಿದೆ.

Donate Janashakthi Media

Leave a Reply

Your email address will not be published. Required fields are marked *