ಜನೌಷಧ ಮುಚ್ಚುವ ಆದೇಶ‌ ರದ್ದತಿ ವಿರುದ್ಧ ಮೇಲ್ಮನವಿ: ಸಚಿವ ದಿನೇಶ್‌ ಗುಂಡೂರಾವ್

ಬೆಳಗಾವಿ:ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿನ ಜನೌಷಧ ಕೇಂದ್ರಗಳನ್ನು ಮುಚ್ಚುವ ಸರ್ಕಾರದ ಆದೇಶವನ್ನು ರದ್ದುಪಡಿಸಿರುವ ಹೈ ಕೋರ್ಟ್‌ ಆದೇಶ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ. ಜನೌಷಧ 

ವಿಧಾನಪರಿಷತ್ತಿನ ಶೂನ್ಯ ವೇಳೆ ಕಲಾಪದಲ್ಲಿ ಬಿಜೆಪಿಯ ಪ್ರದೀಪ್‌ ಶೆಟ್ಟರ್‌ ಹಾಗೂ ಡಾ. ಧನಂಜಯ್‌ ಸರ್ಜಿ ವಿಷಯ ಪ್ರಸ್ತಾಪಿಸಿದರು. ಇದಕ್ಕೆ ಉತ್ತರಿಸಿದ ದಿನೇಶ್‌ ಗುಂಡೂರಾವ್‌, ರಾಜ್ಯದಲ್ಲಿ ಒಟ್ಟು 1400 ಜನೌಷಧ ಕೇಂದ್ರಗಳಿವೆ. ಅದರಲ್ಲಿ 180 ಮಾತ್ರ ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿವೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಔಷಧ ಸಿಗಬೇಕು. ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗಿದೆ. ಇದರಲ್ಲಿ ರಾಜಕೀಯ ದುರುದ್ದೇಶ ಇಲ್ಲ ಎಂದರು.

ಜನೌಷಧ ಕೇಂದ್ರಗಳು ಇನ್ನೂ ಹೆಚ್ಚಾಗಲಿ. ಸರ್ಕಾರಿ ಆಸ್ಪತ್ರೆಗಳ ಹೊರಗೆ ಅವುಗಳನ್ನು ನಡೆಸುವುದಕ್ಕೆ ಯಾವುದೇ ಅಡ್ಡಿ ಇಲ್ಲ. ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಗಳ ಪಟ್ಟಿಯನ್ನು 800ರಿಂದ979ಗೆ ಹೆಚ್ಚಿಸಲಾಗಿದೆ ಎಂದರು.

ಇದನ್ನೂ ಓದಿ : ಬೆಳ್ತಂಗಡಿ | ಕುಪ್ಪೆಟ್ಟಿಯಿಂದ ಉಪ್ಪಿನಂಗಡಿ ಸಂಚರಿಸುವ ರಸ್ತೆಯ ಅವ್ಯವಸ್ಥೆಯ ಕೇಳುವವರಾರು? ಡಿವೈಎಫ್‌ಐ ಆರೋಪ

ಕಲ್ಯಾಣ ಕರ್ನಾಟಕ ಭಾಗವೂ ಸೇರಿದಂತೆ ರಾಜ್ಯಾದ್ಯಂತ ಹೊಸದಾಗಿ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಸಮುದಾಯ ಆರೋಗ್ಯ ಕೇಂದ್ರಗಳನ್ನು ಎಲ್ಲೆಲ್ಲಿ ಸ್ಥಾಪಿಸಬೇಕೆಂಬುದರ ಕುರಿತು ರಾಷ್ಟ್ರೀಯ ಆರೋಗ್ಯ ನೀತಿ ಮಾನದಂಡಗಳ ಅನ್ವಯ ವೈಜ್ಞಾನಿಕವಾಗಿ ಅಧ್ಯಯನ ನಡೆಸಿ ವರದಿ ಸಲ್ಲಿಸಲು ಡಾ.ಹಿಮಾಂಶು ಭೂಷಣ್ ನೇತೃತ್ವದಲ್ಲಿ ಸಮಿತಿ ರಚಿಸಿದ್ದು, ವರದಿ ಬಂದ ಕೂಡಲೇ ಅಗತ್ಯ ಇರುವ ಕಡೆಗಳಲ್ಲಿ ಆರೋಗ್ಯ ಕೇಂದ್ರ ಸ್ಥಾಪಿಸಲು ಕ್ರಮ ವಹಿಸಲಾಗುವುದು ಎಂದರು.

2022ರ ಮಾರ್ಗಸೂಚಿಯನ್ವಯ ಗ್ರಾಮೀಣ ಪ್ರದೇಶದಲ್ಲಿ ಸಮುದಾಯ ಆರೋಗ್ಯ ಕೇಂದ್ರಗಳನ್ನು ಜನಸಂಖ್ಯೆ ಆಧಾರದ ಮೇಲೆ ಸ್ಥಾಪಿಸಲಾಗುತ್ತಿದ್ದು, ಸಮತಟ್ಟು ಪ್ರದೇಶದಲ್ಲಿ 1.20ಲಕ್ಷ ಜನಸಂಖ್ಯೆಗೆ ಹಾಗೂ ಗುಡ್ಡಗಾಡು ಗಿರಿಜನ ಪ್ರದೇಶದಲ್ಲಿ 80 ಸಾವಿರ ಜನಸಂಖ್ಯೆಗೆ ಅನುಗುಣವಾಗಿ ಸ್ಥಾಪಿಸಲಾಗುತ್ತಿದೆ. ನಗರೀಕರಣದ ಕಾರಣದಿಂದ ನಗರ, ಪಟ್ಟಣ ಪ್ರದೇಶಗಳಲ್ಲಿ ಜನಸಂಖ್ಯೆಯಲ್ಲಿ ತೀವ್ರ ಹೆಚ್ಚಳವಾಗುತ್ತಿದ್ದು, ಗ್ರಾಮೀಣ ಭಾಗಗಳಲ್ಲಿ ಜನಸಂಖ್ಯೆ ಕುಸಿತ ಕಂಡುಬರುತ್ತಿದೆ. ಹೀಗಾಗಿ ಜನಸಂಖ್ಯೆಯನ್ನು ಪರಿಗಣಿಸುವ ವಿಷಯದಲ್ಲಿ ಚರ್ಚಿಸಿ, ಆರೋಗ್ಯ ಕೇಂದ್ರಗಳನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.

ಇದನ್ನೂ ನೋಡಿ :ಉದ್ಯೋಗ ಖಾತ್ರಿ | ಮನರೇಗಾ ಬದಲು ‘ವಿ.ಬಿ-ಜಿ ರಾಮ್ ಜಿ’ ಯಾಕೆ? 125 ದಿನ ಕೆಲಸ ಸಾಧ್ಯವೆ? Janashakthi Media

Donate Janashakthi Media

Leave a Reply

Your email address will not be published. Required fields are marked *