ಮಳವಳ್ಳಿ : ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಗಳ ಕಿರುಕುಳ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಅವುಗಳನ್ನು ಬಂದ್ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಗಮನ ಸೆಳೆಯಲಾಗುವುದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧುರಿ ಎಂದು ತಿಳಿಸಿದರು.
ವಾರದ ಹಿಂದೆ ಮಲಿಯೂರು ಗ್ರಾಮದಲ್ಲಿ ‘ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದಿಂದ ಸಾಲ ಪಡೆದು ಸಿಬ್ಬಂದಿ ಕಿರುಕುಳದ ಆರೋಪದಿಂದ ಆತ್ಮಹತ್ಯೆ ‘ ಮಾಡಿದ್ದಾರೆ ಎನ್ನಲಾದ ಮಹಾಲಕ್ಷ್ಮಿ ಮನೆಗೆ ಭೇಟಿ ನೀಡಿ, ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿ ಅವರು ಮಾತನಾಡಿದರು.
ಕೇಂದ್ರ ಮತ್ತು ರಾಜ್ಯ ಸರ್ಕಾರ ಬಡವರ ಕಲ್ಯಾಣಕ್ಕಾಗಿ ಹಲವಾರು ಯೋಜನೆಗಳನ್ನು ನೀಡುತ್ತಿದ್ದರೂ ಮೈಕ್ರೊಫೈನಾನ್ಸ್ಗಳ ಹಾವಳಿಯಿಂದ ಅವುಗಳು ವಿಫಲವಾಗುತ್ತಿವೆ. ಗ್ರಾಮ ಪಂಚಾಯಿತಿಗಳು ಜನರಲ್ಲಿ ಜಾಗೃತಿ ಮೂಡಿಸಬೇಕು. ಸಾಲ ಪಾವತಿಗೆ ಹೆದರಿ ಆತ್ಮಹತ್ಯೆ ಮಾಡಬಾರದು. ಪೊಲೀಸ್ ಇಲಾಖೆ ಸ್ವಯಂ ಪ್ರೇರಿತ ದೂರು ದಾಖಲಿಸಿ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ಇದನ್ನೂ ಓದಿ: ಹಮಾಲಿ ಕಾರ್ಮಿಕರಿಗೆ ಭವಿಷ್ಯ ನಿಧಿ ಯೋಜನೆ ಜಾರಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯ
ಮುಖ್ಯಮಂತ್ರಿ ಗಮನಕ್ಕೆ ಬಂದು, ಮುಖ್ಯ ಕಾರ್ಯದರ್ಶಿಯನ್ನು ಭೇಟಿ ಮಾಡಿ ಮೈಕ್ರೋ ಫೈನಾನ್ಸ್ ಪದ್ಧತಿಯನ್ನು ರಾಜ್ಯದಲ್ಲಿ ಬಂದ್ ಮಾಡುವಂತೆ, ಮಹಾಲಕ್ಷ್ಮಿ ಕುಟುಂಬಕ್ಕೆ ಪರಿಹಾರ ನೀಡುವಂತೆ ಮನವಿ ಮಾಡಲಾಗುವುದು. ಮಂಡ್ಯ ಜಿಲ್ಲಾಧಿಕಾರಿ , ಜಿಲ್ಲಾ ಪಂಚಾಯತಿ ಸಿಇಒ ಜತೆ ಶೀಘ್ರ ಸಭೆ ನಡೆಸಿ ಕೈಗೋಂಡ ಕ್ರಮಗಳ ಬಗ್ಗೆ ಪರಿಶೀಲನೆ ಮಾಡುತ್ತೇನೆ ಎಂದು ಹೇಳಿದರು.
ಪಿಎಸ್ಐ ಡಿ.ರವಿಕುಮಾರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ, ಸಹಕಾರ ಇಲಾಖೆಯ ಅಧಿಕಾರಿಗಳಿಂದ ಮಾಹಿತಿ ಸಂಗ್ರಹಿಸಿದರು.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ರಾಜಮೂರ್ತಿ, ಸಹಕಾರ ಸಂಘಗಳ ಸಹಾಯಕ ನಿಬಂಧಕಿ ಕೆ. ಅನಿತಾ, ಅಂಗನವಾಡಿ ಮೇಲ್ವಿಚಾರಕಿಯರಾದ ಶೈಲಜಾ, ಸರಳಾ, ಮಹದೇವಮ್ಮ ಹಾಗೂ ಪ್ರಗತಿಪರ ಸಂಘಟನೆಗಳ ಪದಾಧಿಕಾರಿಗಳು ಇದ್ದರು.
ಇದನ್ನೂ ನೋಡಿ: ಶ್ರೀಲಂಕಾ ನೂತನ ಅಧ್ಯಕ್ಷ ದಿಸ್ಸನಾಯಕೆ | ಕಾರ್ಮಿಕನ ಮಗ ಈಗ ಅಧ್ಯಕ್ಷ Janashakthi Media