ರಾಜಣ್ಣ ಹನಿಟ್ರ್ಯಾಪ್ ಯತ್ನ ಕುರಿತು ಗೃಹ ಸಚಿವ ಪರಮೇಶ್ವರ್‌ಗೆ ಮನವಿ

ಬೆಂಗಳೂರು: ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರನ್ನು ಹನಿಟ್ರ್ಯಾಪ್‌ಗೆ ಸಿಲುಕಿಸಲು ಯತ್ನಿಸಿದ ಪ್ರಕರಣವು ರಾಜ್ಯ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಈ ಸಂಬಂಧ, ಸಚಿವ ರಾಜಣ್ಣ ಅವರು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರಿಗೆ ಅಧಿಕೃತ ದೂರು ಸಲ್ಲಿಸಿದ್ದಾರೆ.

ಇದನ್ನೂ ಓದಿ:ಮಹಾನಗರ ಪಾಲಿಕೆಯ 35 ಸದಸ್ಯರ ಸದಸ್ಯತ್ವ ಅನರ್ಹ: ಕಲಬುರಗಿ ಹೈಕೋರ್ಟ್

ಮಂಗಳವಾರ ಬೆಂಗಳೂರಿನ ಸದಾಶಿವನಗರದಲ್ಲಿರುವ ಗೃಹ ಸಚಿವರ ಗೃಹ ಕಚೇರಿಯಲ್ಲಿ ನಡೆದ ಈ ಭೇಟಿಯಲ್ಲಿ, ಸಚಿವ ರಾಜಣ್ಣ ಅವರು ತಮಗೆ ನಡೆದ ಹನಿಟ್ರ್ಯಾಪ್ ಯತ್ನದ ಕುರಿತು ಉನ್ನತ ಮಟ್ಟದ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ಗೃಹ ಸಚಿವ ಪರಮೇಶ್ವರ್, ಸಚಿವ ರಾಜಣ್ಣ ಅವರ ಮನವಿಯನ್ನು ಸ್ವೀಕರಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಸದನದಲ್ಲಿ ಈ ವಿಷಯ ಚರ್ಚೆಯಾಗಿರುವುದರಿಂದ, ಸೂಕ್ತ ತನಿಖೆ ನಡೆಸಿ ಸತ್ಯಾಸತ್ಯತೆ ಬಹಿರಂಗಪಡಿಸಲಾಗುವುದು ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ:ಮತ ಚಲಾಯಿಸಿದ 6 ಕಾಂಗ್ರೆಸ್ ಸದಸ್ಯರು ಅನರ್ಹ: ನ್ಯಾಯಾಲಯ

ಸಚಿವ ರಾಜಣ್ಣ ಅವರು ತಮ್ಮ ಮೇಲಾದ ಹನಿಟ್ರ್ಯಾಪ್ ಯತ್ನದ ಬಗ್ಗೆ ಸದನದಲ್ಲಿಯೇ ಸ್ಫೋಟಕ ಮಾಹಿತಿ ನೀಡಿದ್ದರು. ಅವರು, ರಾಜ್ಯದ ಇಬ್ಬರು ಪ್ರಮುಖ ರಾಜಕೀಯ ಪಕ್ಷಗಳ 48 ನಾಯಕರಿಗೆ ಸಂಬಂಧಿಸಿದ ಸಿಡಿ ಮತ್ತು ಪೆನ್ ಡ್ರೈವ್‌ಗಳಿವೆ ಎಂದು ಹೇಳಿ, ಈ ಪಿಡುಗನ್ನು ತಡೆಯಲು ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದರು.

ಈ ಬೆಳವಣಿಗೆಗಳು ರಾಜ್ಯ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದ್ದು, ಹನಿಟ್ರ್ಯಾಪ್ ಪ್ರಕರಣಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಅಗತ್ಯವನ್ನು ಹೈಲೈಟ್ ಮಾಡಿದೆ. ಸಾರ್ವಜನಿಕ ಜೀವನದಲ್ಲಿ ಇಂತಹ ಕೆಟ್ಟ ಚಾಳಿಗಳು ಮುಂದುವರಿಯಬಾರದು ಎಂಬ ಉದ್ದೇಶದಿಂದ ಸಚಿವ ರಾಜಣ್ಣ ಅವರು ದೂರು ಸಲ್ಲಿಸಿರುವುದು ಗಮನಾರ್ಹವಾಗಿದೆ.

ಈ ಪ್ರಕರಣದ ತನಿಖೆ ಮತ್ತು ಮುಂದಿನ ಕ್ರಮಗಳ ಬಗ್ಗೆ ಸಾರ್ವಜನಿಕರು ಮತ್ತು ರಾಜಕೀಯ ವಲಯಗಳು ಕಣ್ಣಾರೆ ಗಮನಿಸುತ್ತಿದ್ದು, ನ್ಯಾಯಾಂಗ ಮತ್ತು ಸರ್ಕಾರದ ಕ್ರಮಗಳು ನಿರ್ಣಾಯಕವಾಗಿವೆ.

ಇದನ್ನೂ ಓದಿ;ನವದೆಹಲಿ| 1 ಲಕ್ಷ ಕೋಟಿ ರೂ ಮೌಲ್ಯದ 2025-26ನೇ ಬಜೆಟ್ ಮಂಡನೆ

Donate Janashakthi Media

Leave a Reply

Your email address will not be published. Required fields are marked *